ಉಡುಪಿ | ಜನಸಾಮಾನ್ಯರಲ್ಲಿ ಮಾನವ ಕಳ್ಳ ಸಾಗಾಣಿಕೆ ನಿರ್ಮೂಲನೆ ಬಗ್ಗೆ ಅರಿವು ಮೂಡಿಸಿ : ನ್ಯಾ. ನಿತಿನ್ ವೈ.ರಾವ್

Date:

ಮಾನವ ಕಳ್ಳ ಸಾಗಾಣಿಕೆ ಮಾನವೀಯತೆಯ ಮೇಲಾಗುವ ಅತಿ ದೊಡ್ಡ ಅಪರಾಧ. ಇಂತಹ ಕೃತ್ಯಗಳು ನಿರ್ಮೂಲನೆ ಮಾಡಲು ಭಾಗಿದಾರ ಇಲಾಖೆಗಳು ಶ್ರಮಿಸಿದರೂ ಕೂಡ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗುತ್ತಿಲ್ಲ. ಇದಕ್ಕೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ವೈ.ರಾವ್ ಹೇಳಿದರು.

- Advertisement -

ಅವರು ಗುರುವಾರ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಇವರ ಸಹಯೋಗದೊಂದಿಗೆ ನಡೆದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮವವನ್ನು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೋಲಿಸ್ ಉಪನಿರೀಕ್ಷಕ ರಾಘವೇಂದ್ರ ಸಿ ಮಾತನಾಡಿ, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಾಮಾಜಿಕ ಪಿಡುಗುಗಳಲ್ಲಿ ಒಂದಾದ ಮಾನವ ಕಳ್ಳ ಸಾಗಾಣಿಕೆಯನ್ನು ನಿರ್ಮೂಲನೆ ಮಾಡುವುದು ಅತಿ ಅವಶ್ಯವಾಗಿರುತ್ತದೆ ಎಂದ ಅವರು, ಕೆಲವೊಂದು ನೈಜ ಪ್ರಕರಣಗಳನ್ನು ಉದಾಹರಣೆ ನೀಡುವ ಮೂಲಕ ಯಾವ ರೀತಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ನಡೆಯುತ್ತಿದೆ ಎನ್ನುವುದನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರೇಮಮೂರ್ತಿ ಕೆ ಮಾತನಾಡಿ, ಆಧುನಿಕ ಯುಗದಲ್ಲಿ ವಂಚನೆಗಳು ಹೆಚ್ಚುತ್ತಿರಲು ಜನರು ಹೆಚ್ಚು ವ್ಯಾಮೋಹಕ್ಕೆ ಒಳಗಾಗುತ್ತಿರುವುದು, ತಂತ್ರಜ್ಞಾನಗಳ ಹೆಚ್ಚಿನ ಬಳಕೆ ಮತ್ತು ಹಣದ ಆಮಿಷಕ್ಕೆ ಬಲಿಯಾಗುತ್ತಿರುವುದು ಮುಖ್ಯ ಕಾರಣವಾಗಿದೆ. ಇಂದಿನ ಮಕ್ಕಳಲ್ಲಿ ನೈತಿಕ ಮೌಲ್ಯಗಳ ಕೊರತೆ ಕೂಡ ಮಾನವ ಕಳ್ಳ ಸಾಗಾಣಿಕೆ ಹೆಚ್ಚುತ್ತಿರಲು ಕಾರಣವಾಗಿದೆ ಎಂದ ಅವರು, ಮಾನವ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ಸವಿಸ್ತಾರವಾಗಿ ವಿವರಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಹಾಯಕ ಕಾನೂನು ನೆರವು ಅಭಿರಕ್ಷಕಿ ಭಾನುಮತಿ ಅವರು, ಕಾಯ್ದೆ ಅಡಿ ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಮಾನವ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟುವ ಮಾರ್ಗಗಳ ಕುರಿತಾಗಿ ವಿವರವಾಗಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ರತ್ನ, ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರವೀಣ್ ಹೇರೂರ, ಭಾಗಿದಾರ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಹಾಗೂ ತ್ರಿಶಕ್ತಿ ಗುಂಪಿನ ಮಹಿಳೆಯರು ಉಪಸ್ಥಿತರಿದ್ದರು.

ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಬಿ ಹಾದಿಮನಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜೆಂಡರ್ ಸ್ಪೆಷಲಿಸ್ಟ್ ದೀಪ ನಿರೂಪಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ ಹೇರೂರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃತ್ತಿ ಕೌಶಲ್ಯಕ್ಕೆ ಗೌರವ ಸಲ್ಲಿಸುವ ದಿನವೇ ವಿಶ್ವಕರ್ಮ ಜಯಂತಿ: ಡಾ. ಔದ್ರಾಮ್

ಭಾರತೀಯ ಪರಂಪರೆಯಲ್ಲಿ ವಿಶ್ವಕರ್ಮರಿಗೆ ವಿಶಿಷ್ಟ ಸ್ಥಾನವಿದೆ. ದೇವಶಿಲ್ಪಿಯಾಗಿ ಪರಿಗಣಿಸಲ್ಪಡುವ ವಿಶ್ವಕರ್ಮರು ತಮ್ಮ...

ಹಾವೇರಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ...

ವಿಜಯಪುರ | ಕೇಂದ್ರದ UPI ಶುಲ್ಕ ನೀತಿ ಮರುಪರಿಶೀಲನೆಗೆ ಭೋಗೇಶ್ ಸೋಲಾಪುರ ಆಗ್ರಹ

ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ, 13 ವರ್ಷಗಳಿಂದ ಬೀದಿಯಲ್ಲೇ ಬದುಕು!

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು...