ಉಡುಪಿ | ಬೀಟ್ ಪೊಲೀಸ್‌ಗೆ ಜೀವ ಬೆದರಿಕೆ; ಸುಲಿಗೆ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳ ಆರೋಪಿ ಬಂಧನ

Date:

ಬ್ರಹ್ಮಾವರ ಪೊಲೀಸ್ ಠಾಣೆಯ ಬೀಟ್ ಪೊಲೀಸ್ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರೌಡಿ ಅಸಾಮಿ ನಿಖಿಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಜುಲೈ 13ರಂದು ಹಂದಾಡಿ–ಮಟಪಾಡಿ ಗ್ರಾಮ ಗಸ್ತು ಕರ್ತವ್ಯದಲ್ಲಿದ್ದ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಕಿಶನ್ ಅವರು, ಪೊಲೀಸ್ ಉಪನಿರೀಕ್ಷಕರ ಸೂಚನೆಯಂತೆ ಸಂಜೆ 7 ಗಂಟೆಗೆ ರೌಡಿ ಅಸಾಮಿ ನಿಖಿಲ್‌ನನ್ನು ಪರಿಶೀಲಿಸಲು ಆತನ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ನಿಖಿಲ್‌ಗೆ ಮೊಬೈಲ್ ಮೂಲಕ ಕರೆ ಮಾಡಿ ವಿಚಾರಿಸಿದಾಗ, ಅವಾಚ್ಯ ಶಬ್ದಗಳಿಂದ ನಿಂದಿಸಿ, “ನೀನು ಅಲ್ಲೇ ಇರು, ಬಂದು ನಿನ್ನನ್ನು ಕೊಂದು ಹಾಕುತ್ತೇನೆ” ಎಂದು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಬಳಿಕ ರಾತ್ರಿ 8.30ರ ಸುಮಾರಿಗೆ ಮತ್ತೆ ಪದೇ ಪದೇ ಕರೆ ಮಾಡಿ, “ನೀನು ಯಾಕೆ ನನ್ನ ಮನೆ ಹತ್ತಿರ ಬಂದಿದ್ದೀಯಾ, ಈಗ ಬಾ” ಎಂದು ನಿಂದಿಸುತ್ತಾ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಮೂಲಕ ಸರ್ಕಾರಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪವೂ ದಾಖಲಾಗಿದೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 132, 351(2) ಹಾಗೂ 352ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ನಿಖಿಲ್ (ತಂದೆ: ಕೃಷ್ಣ), ಬೇಳೂರು ಜೆಡ್ಡು, ಹಂದಾಡಿ ಗ್ರಾಮ, ಬ್ರಹ್ಮಾವರ ತಾಲೂಕು ನಿವಾಸಿಯಾಗಿದ್ದು, ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.

ಪೊಲೀಸರ ಮಾಹಿತಿ ಪ್ರಕಾರ, ನಿಖಿಲ್ ವಿರುದ್ಧ ಈಗಾಗಲೇ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಒಂದು ಸುಲಿಗೆ ಪ್ರಕರಣ ಹಾಗೂ ಒಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದ್ದು, ಆತ ರೌಡಿ ಅಸಾಮಿಯಾಗಿ ಗುರುತಿಸಿಕೊಂಡಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...