ಉಡುಪಿ | ಪಾದಚಾರಿಗಳ ಮೇಲೆ ಉರುಳುವ ಭೀತಿಯಲ್ಲಿ ಅಪಾಯಕಾರಿ ತೆಂಗಿನ ಮರ

Date:

ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಿಂದ ಸರ್ವಿಸ್ ಬಸ್ ನಿಲ್ದಾಣವನ್ನು ಸಂಪರ್ಕಿಸುವ ರಸ್ತೆಯ ಸಮೀಪದಲ್ಲಿರುವ ಎತ್ತರದ ತೆಂಗಿನ ಮರವು ಪಾದಚಾರಿಗಳ ಪಾಲಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಮರವು ನಡೆ ರಸ್ತೆಯತ್ತ ವಾಲಿಕೊಂಡಿದ್ದು, ಅದರಲ್ಲಿರುವ ಒಣಗಿದ ತೆಂಗಿನಕಾಯಿಗಳು ಹಾಗೂ ಒಣಗಿದ ಗರಿಗಳು ಆಗಾಗ್ಗೆ ರಸ್ತೆಗೆ ಉದುರುತ್ತಿವೆ. ಇದರಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರಲ್ಲಿ ಆತಂಕ ಮೂಡಿದೆ.

- Advertisement -

ಈ ರಸ್ತೆಯಲ್ಲಿ ದಿನನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ಪಾದಚಾರಿಗಳ ಓಡಾಟವೂ ನಿರಂತರವಾಗಿರುತ್ತದೆ. ಹಿರಿಯ ನಾಗರಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನಾನಾ ವಯೋಮಾನದವರು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಇಂತಹ ಜನನಿಬಿಡ ಪ್ರದೇಶದಲ್ಲಿ ಅಪಾಯದ ಸ್ಥಿತಿಯಲ್ಲಿರುವ ತೆಂಗಿನ ಮರ ಇರುವುದು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಬೇಕಾದ ವಿಷಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಗಾಳಿಯ ವೇಗಕ್ಕೆ ಅಥವಾ ಮರದ ಒಣಗಿದ ಭಾಗಗಳ ದುರ್ಬಲತೆಯಿಂದ ತೆಂಗಿನಕಾಯಿ, ಒಣಗಿದ ಗರಿಗಳು ಉರುಳಿ ಪಾದಚಾರಿಗಳ ತಲೆಯ ಮೇಲೆ ಬಿದ್ದರೆ ಗಂಭೀರ ಗಾಯಗಳಾಗುವ ಸಾಧ್ಯತೆಯಿದೆ. ವಿಶೇಷವಾಗಿ ವಾಹನ ಸಂಚಾರದ ನಡುವೆ ಇಂತಹ ಘಟನೆ ಸಂಭವಿಸಿದರೆ ಪ್ರಾಣಾಪಾಯಕ್ಕೂ ಕಾರಣವಾಗಬಹುದು. ಅನಾಹುತ ಸಂಭವಿಸಿದ ಬಳಿಕ ಎಚ್ಚೆತ್ತುಕೊಳ್ಳುವುದಕ್ಕಿಂತ ಮುನ್ನೆಚ್ಚರಿಕೆ ವಹಿಸುವುದು ಸಂಬಂಧಪಟ್ಟ ಇಲಾಖೆಗಳ ಜವಾಬ್ದಾರಿಯಾಗಿದೆ.

ಸಾರ್ವಜನಿಕರ ಸುರಕ್ಷತೆಗಾಗಿ ಸಂಬಂಧಪಟ್ಟ ನಗರಸಭೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರದ ಅಪಾಯದ ಸ್ಥಿತಿಯನ್ನು ಪರಿಶೀಲಿಸಬೇಕು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ನಿಯಮಾನುಸಾರ ಅಪಾಯಕಾರಿಯಾಗಿರುವ ಮರವನ್ನು ಕಟಾವು ಮಾಡಿ ತೆರವುಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಈ ಕುರಿತು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಜನರ ಜೀವಕ್ಕೆ ಅಪಾಯ ತಂದೊಡ್ಡಬಹುದಾದ ಈ ಮರವನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿದ್ದಾರೆ. ಯಾರಾದರೂ ಪ್ರಾಣ ಕಳೆದುಕೊಂಡ ಬಳಿಕ ಕ್ರಮ ಕೈಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಾರದು. ಸಾರ್ವಜನಿಕರ ಜೀವ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ, ಸಂಭವನೀಯ ಅನಾಹುತವನ್ನು ತಡೆಯಲು ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಹೋರಾಟ

ಅಕ್ಷರ ದಾಸೋಹ ಕಾರ್ಯಕರ್ತೆಯರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ...

ಬಾಗಲಕೋಟೆ |ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ...