ಉಡುಪಿ | ಯಾರು ಮತ ಹಾಕಬೇಕು ಎಂಬುದನ್ನು ಸರ್ಕಾರವೇ ನಿರ್ಧರಿಸುತ್ತಿದೆ : ಪ್ರೊ. ವಿ.ಎಸ್. ಶ್ರೀಧರ್

Date:

ರಾಜ್ಯದ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಅಭಿಯಾನದ ಕರಪತ್ರವನ್ನು ಇಂದು ಉಡುಪಿ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿ ಜಾಥಕ್ಕೆ ಜಾಲನೆ ನೀಡಲಾಯಿತು.

- Advertisement -

ಜೂನ್ 13ರಿಂದ 18ರವರೆಗೆ ರಾಜ್ಯಾದ್ಯಂತ ನಡೆಯಲಿರುವ ಈ ಜನಜಾಗೃತಿ ಜಾಥಾ ಮೂಲಕ ಮತದಾರರಲ್ಲಿ ಎಸ್‌ಐಆರ್ (ವಿಶೇಷ ಸಮಗ್ರ ಪರಿಷ್ಕರಣೆ) ಪ್ರಕ್ರಿಯೆ ಕುರಿತು ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳನ್ನು ಒಳಗೊಂಡಂತೆ ಐದು ಮಾರ್ಗಗಳಲ್ಲಿ ಜಾಥಾವನ್ನು ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಮಾರ್ಗ-5ರಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಜಾಥಾ ಸಂಚರಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...
WhatsApp Image 2026 06 13 at 10.46.22 PM

ಈ ಕುರಿತು ಈ ದಿನ.ಕಾಮ್ ಜೊತೆ ಮಾತನಾಡಿದ ಎಸ್‌ಐಆರ್ ಜನಜಾಗೃತಿ ಜಾಥಾದ ಸಂಚಾಲಕ ಪ್ರೊ. ವಿ.ಎಸ್. ಶ್ರೀಧರ್, ಪ್ರಜಾಪ್ರಭುತ್ವದಲ್ಲಿ ಜನರು ಸರ್ಕಾರವನ್ನು ಆಯ್ಕೆ ಮಾಡಬೇಕು. ಆದರೆ ಎಸ್‌ಐಆರ್ ಜಾರಿಗೆ ಬಂದ ನಂತರ ಸರ್ಕಾರಗಳೇ ಮತದಾರರನ್ನು ಆಯ್ಕೆ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದರು.

“ಯಾರು ಮತ ಹಾಕಬೇಕು, ಯಾರು ಮತದಾನದ ಹಕ್ಕಿನಿಂದ ವಂಚಿತರಾಗಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ. ಆದರೂ ಅದು ಆ ಪಾತ್ರವನ್ನು ವಹಿಸಿಕೊಳ್ಳುತ್ತಿರುವಂತಿದೆ. ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳನ್ನೇ ತಿರುಚುವ ಪ್ರಯತ್ನ ನಡೆಯುತ್ತಿದೆ. ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಅನೇಕ ಸಾಮಾಜಿಕ ಮತ್ತು ರಾಜಕೀಯ ತಲ್ಲಣಗಳು ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಜನರು ಇದನ್ನು ಗಂಭೀರವಾಗಿ ಪರಿಗಣಿಸಿ ವಿರೋಧಿಸಬೇಕು” ಎಂದು ಅವರು ಹೇಳಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಸರ್ಕಾರದ ಕರ್ತವ್ಯವಾಗಿದ್ದು, ಚುನಾವಣಾ ಆಯೋಗದ ಕೆಲಸವಲ್ಲ ಎಂದು ಪ್ರತಿಪಾದಿಸಿದ ಅವರು, “ಎಸ್‌ಐಆರ್ ಎನ್ನುವುದು ಈ ಹಿಂದೆ ಜಾರಿಗೆ ತರಲು ಯತ್ನಿಸಲಾದ ಎನ್‌ಆರ್‌ಸಿ ಮತ್ತು ಸಿಎಎ ಪ್ರಕ್ರಿಯೆಗಳ ಮುಂದುವರಿದ ಭಾಗವಾಗಿದೆ. ಇದರ ಪರಿಣಾಮವಾಗಿ ದೇಶದ ಪ್ರಜಾಸತ್ತಾತ್ಮಕ ಸ್ವರೂಪದಲ್ಲಿ ಮೂಲಭೂತ ಬದಲಾವಣೆಗಳು ಸಂಭವಿಸುವ ಅಪಾಯವಿದೆ. ಇದು ಕೇವಲ ಮತದಾರರ ಪಟ್ಟಿ ಪರಿಷ್ಕರಣೆ ಮಾತ್ರವಲ್ಲ; ದೊಡ್ಡ ರಾಜಕೀಯ ಯೋಜನೆಯ ಭಾಗವಾಗಿಯೇ ಇದನ್ನು ಅರ್ಥಮಾಡಿಕೊಳ್ಳಬೇಕು” ಎಂದು ಅಭಿಪ್ರಾಯಪಟ್ಟರು.

WhatsApp Image 2026 06 13 at 10.46.22 PM 1

“ಈವರೆಗೆ ಮತದಾರರು ಸರ್ಕಾರವನ್ನು ಆಯ್ಕೆ ಮಾಡುತ್ತಿದ್ದರು. ಆದರೆ ಎಸ್‌ಐಆರ್ ನಂತರ ಸರ್ಕಾರಗಳೇ ಮತದಾರರನ್ನು ಆಯ್ಕೆ ಮಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಅನೇಕ ರಾಜ್ಯಗಳಲ್ಲಿ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಲಾಗುತ್ತಿದೆ. ಇದರಿಂದ ಕೋಟ್ಯಂತರ ಮಂದಿ ಮತದಾನದ ಹಕ್ಕಿನಿಂದ ವಂಚಿತರಾಗುವ ಅಪಾಯವಿದೆ. ಇಂತಹವರಿಗೆ ನ್ಯಾಯಾಲಯಗಳಿಂದಲೂ ಸಮರ್ಪಕ ನೆರವು ದೊರೆಯುತ್ತಿಲ್ಲ. ಮತದಾನದ ಹಕ್ಕು ಕಳೆದುಕೊಂಡವರ ಪೌರತ್ವದ ಮೇಲೆಯೂ ಪ್ರಶ್ನೆಗಳು ಉದ್ಭವಿಸುವ ಸಾಧ್ಯತೆ ಇದೆ. ಈ ಕುರಿತು ಸರ್ಕಾರ, ನ್ಯಾಯಾಲಯ ಮತ್ತು ಚುನಾವಣಾ ಆಯೋಗ ಮೌನ ವಹಿಸಿರುವುದು ಆತಂಕಕಾರಿ” ಎಂದು ಅವರು ಹೇಳಿದರು.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಮತದಾರರಿಂದ ಪೌರತ್ವವನ್ನು ಸಾಬೀತುಪಡಿಸುವ ದಾಖಲೆಗಳನ್ನು ಕೇಳುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾದ ಕ್ರಮವಾಗಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಸಹಬಾಳ್ವೆ ಉಡುಪಿ ಜಿಲ್ಲಾ ಸಂಚಾಲಕ ಪ್ರೊ ಫಣಿರಾಜ್‌, ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ಕ್ರೈಸ್ತ ಒಕ್ಕೂಟದ ಪ್ರಶಾಂತ್ ಜತ್ತನ್ನ, ಜಿಲ್ಲಾ ಮುಸ್ಲಿಮ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಕಟಪಾಡಿ, ಪ್ರಮುಖರಾದ ಶ್ಯಾಮ್‌ರಾಜ್ ಬಿರ್ತಿ, ಇದ್ರೀಸ್ ಹೂಡೆ, ಶಶಿಧರ್ ಗೊಲ್ಲ, ಅಬ್ದುಲ್ ಅಝೀಝ್ ಉದ್ಯಾವರ ಉಪಸ್ಥಿತರಿದ್ದರು.

ರಾಜ್ಯದ ವಿವಿಧ ಜಿಲ್ಲೆಗಳನ್ನು ಒಳಗೊಂಡಂತೆ ಐದು ಮಾರ್ಗಗಳಲ್ಲಿ ಜನಜಾಗೃತಿ ಅಭಿಯಾನ ನಡೆಯಲಿದೆ.

ಮಾರ್ಗ-1ರಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳು,
ಮಾರ್ಗ-2ರಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳು ಒಳಗೊಂಡಿವೆ.
ಮಾರ್ಗ-3ರಲ್ಲಿ ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳು,
ಮಾರ್ಗ-4ರಲ್ಲಿ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳು ಸೇರಿವೆ.
ಮಾರ್ಗ-5ರಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಜಾಥಾ ಸಂಚರಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲಿದೆ.

WhatsApp Image 2026 06 13 at 10.46.51 PM
WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...