ಉಡುಪಿ | ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ : ದಿನಕರ ಹೇರೂರು

Date:

ವೀರ ವನಿತೆ ಒನಕೆ ಓಬವ್ವ ಎಂಬ ಹೆಸರು ಕೇಳಿದಾಗ ಪ್ರತಿಯೊಬ್ಬರಲ್ಲೂ ರೋಮಾಂಚನ ಮೂಡುತ್ತದೆ. ಧೈರ್ಯ, ಸಾಹಸ ಹಾಗೂ ಕೆಚ್ಚೆದೆಯ ಹೋರಾಟಕ್ಕೆ ಹೆಸರಾದ ಓಬವ್ವ, ಶತ್ರುಗಳ ದಾಳಿಯಿಂದ ಚಿತ್ರದುರ್ಗ ಕೋಟೆಯನ್ನು ರಕ್ಷಿಸುವ ಮೂಲಕ ನಾರಿಶಕ್ತಿಯ ಪ್ರತೀಕವಾಗಿ ಇಂದಿಗೂ ಚಿರಸ್ಥಾಯಿಯಾಗಿದ್ದಾರೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು.

- Advertisement -

ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಓಬವ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ನಾಡಿನ ಸಮೃದ್ಧಿ ಹಾಗೂ ಅಭಿವೃದ್ಧಿಗೆ ಅನೇಕ ಮಹನೀಯರು ಮತ್ತು ಮಹಿಳೆಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅಂತಹ ವೀರ ಮಹಿಳೆಯರಲ್ಲಿ ಒನಕೆ ಓಬವ್ವ ಕೂಡ ಪ್ರಮುಖರು. ಅವರ ಸಾಹಸಗಾಥೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಹಾಗೂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಉದ್ದೇಶದಿಂದ ಸರಕಾರ ಇಂತಹ ಮಹಾನ್ ಚೇತನಗಳ ಜಯಂತಿಯನ್ನು ಆಚರಿಸುತ್ತಿದೆ ಎಂದರು.

ಹೈದರಾಲಿಯ ಸೈನ್ಯ ಚಿತ್ರದುರ್ಗ ಕೋಟೆಯ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ರಹಸ್ಯ ಕಿಂಡಿಯ ಮೂಲಕ ಕೋಟೆಯೊಳಗೆ ನುಸುಳಲು ಯತ್ನಿಸಿದ ಶತ್ರು ಸೈನಿಕರನ್ನು ಒನಕೆಯನ್ನೇ ಆಯುಧವನ್ನಾಗಿಸಿಕೊಂಡು ಒಬ್ಬೊಬ್ಬರಾಗಿ ಸದೆಬಡಿದು ಕೋಟೆಯನ್ನು ರಕ್ಷಿಸಿದ ಓಬವ್ವರ ಸಾಹಸ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ. ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಸೇರಿದಂತೆ ಅನೇಕ ವೀರ ಮಹಿಳೆಯರು ದೇಶ ಮತ್ತು ನಾಡಿನ ರಕ್ಷಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ತ್ಯಾಗ, ಸಾಹಸ ಹಾಗೂ ಕೆಚ್ಚೆದೆಯ ಬದುಕು ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಹೆಣ್ಣುಮಕ್ಕಳು ತಮ್ಮ ಆತ್ಮರಕ್ಷಣೆಯ ಜೊತೆಗೆ ದೇಶದ ರಕ್ಷಣೆಯನ್ನೂ ಮಾಡಬಲ್ಲರು ಎಂಬುದಕ್ಕೆ ಒನಕೆ ಓಬವ್ವ ಸೇರಿದಂತೆ ಅನೇಕ ವೀರ ಮಹಿಳೆಯರ ಜೀವನಗಾಥೆಗಳೇ ಸಾಕ್ಷಿ. ಅವರ ಸಮರ್ಪಣಾ ಭಾವ ಎಲ್ಲರಿಗೂ ಮಾದರಿಯಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ದೈಹಿಕ ಕಸರತ್ತು ಹಾಗೂ ಆತ್ಮರಕ್ಷಣೆಯ ತರಬೇತಿ ನೀಡಲು ಪ್ರೋತ್ಸಾಹಿಸಬೇಕು ಎಂದರು.

ಒನಕೆ ಓಬವ್ವರ ಕುರಿತು ಉಪನ್ಯಾಸ ನೀಡಿದ ನಿವೃತ್ತ ಕನ್ನಡ ಉಪನ್ಯಾಸಕಿ ನಳಿನಾದೇವಿ ಎಂ.ಆರ್. ಮಾತನಾಡಿ, 18ನೇ ಶತಮಾನದಲ್ಲಿ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಪಾಳೆಯಗಾರ ಮದಕರಿ ನಾಯಕ ಆಳುತ್ತಿದ್ದರು. ಅವರ ಅರಮನೆಯ ಕಾವಲುಗಾರನ ಪತ್ನಿಯಾಗಿದ್ದ ಓಬವ್ವ ಮನೆವಾರ್ತೆಯ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರೂ, ನಾಡಿನ ರಕ್ಷಣೆಯ ವಿಚಾರದಲ್ಲಿ ಅಪಾರ ಧೈರ್ಯ ಮತ್ತು ಹೋರಾಟದ ಮನೋಭಾವ ಹೊಂದಿದ್ದರು.

ಹೈದರಾಲಿಯ ಸೈನಿಕರು ಚಿತ್ರದುರ್ಗ ಕೋಟೆಯನ್ನು ಮುತ್ತಿಗೆ ಹಾಕಿದ ಸಂದರ್ಭದಲ್ಲಿ, ಪತಿ ಊಟ ಮಾಡುತ್ತಿದ್ದುದರಿಂದ ಅವರನ್ನು ಎಬ್ಬಿಸದೆ, ಒನಕೆಯನ್ನೇ ಆಯುಧವನ್ನಾಗಿ ಮಾಡಿಕೊಂಡು ಶತ್ರು ಸೈನಿಕರನ್ನು ಎದುರಿಸಿ ಕೋಟೆಯನ್ನು ರಕ್ಷಿಸಲು ಹೋರಾಡಿದರು. ಈ ಹೋರಾಟದಲ್ಲಿ ವೀರಮರಣವನ್ನಪ್ಪಿದ ಓಬವ್ವರ ಅಪ್ರತಿಮ ಸಾಹಸ, ಧೈರ್ಯ ಮತ್ತು ಸಮಯಪ್ರಜ್ಞೆ ಸ್ತ್ರೀಶಕ್ತಿಯ ಪ್ರತೀಕವಾಗಿದೆ. ಅವರ ಸಾಹಸಗಾಥೆ ಪ್ರತಿಯೊಬ್ಬರಲ್ಲೂ ಧೈರ್ಯ ಮತ್ತು ದೇಶಪ್ರೇಮದ ಮನೋಭಾವವನ್ನು ಬೆಳೆಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಉಪತಹಶೀಲ್ದಾರ್ ನವನೀತ್, ಜಿಲ್ಲಾಡಳಿತದ ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಇಲಾಖೆಯ ಸಿಬ್ಬಂದಿ ವರ್ಷಾ ಬಿ. ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಡಾ. ಶೇಖ್ ಅಬೂಬಕರ್ ಅಹ್ಮದ್ ಕಾಂತಪುರಂಗೆ ಸಜ್ಜನ ಸಿರಿ ಪ್ರಶಸ್ತಿ ಪ್ರದಾನ

ಮಂಗಳೂರು: ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ನೀಡಲ್ಪಡುವ 'ಸಜ್ಜನ ಸಿರಿ ಪ್ರಶಸ್ತಿ'...

ದಕ್ಷಿಣ ಕನ್ನಡ | SIR ವಿರುದ್ಧ SKSSF ವತಿಯಿಂದ ನ.13ರಂದು ಜಿಲ್ಲೆಯ ಏಳು ವಲಯಗಳಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು:SIR (ವಿಶೇಷ ತೀವ್ರ ಪರಿಷ್ಕರಣೆ) ವಿರುದ್ಧ SKSSF ದಕ್ಷಿಣ ಕನ್ನಡ ವೆಸ್ಟ್...

ದಕ್ಷಿಣ ಕನ್ನಡ | ಪರವಾನಿಗೆ ರಹಿತ ಜಾನುವಾರು ಸಾಗಾಟ : ನಾಲ್ವರ ವಿರುದ್ದ ಎಫ್‌ಐ‌ಆರ್

ಬಂಟ್ವಾಳ: ಪರಿವಾನಿಗೆ ರಹಿತವಾಗಿ ಪಿಕಪ್ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ಆರೋಪದ ಮೇರೆಗೆ...

ಮುಂಡಗೋಡ | ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಾರ್ವಜನಿಕರ ಆಗ್ರಹ

ಮುಂಡಗೋಡ ತಾಲೂಕಿನ ಸಿಂಗ್ನಹಳ್ಳಿ ಗ್ರಾಮದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ...