ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

Date:

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಹಾಗೂ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವತಿಯಿಂದ ರೈತರಿಗೆ ಕೃಷಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಬುಧವಾರ ನಡೆಯಿತು

- Advertisement -

ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಗೆ ಕೇಂದ್ರ ಸರ್ಕಾರ ಪೂರಕವಾಗಿ ಸ್ಪಂದಿಸುತ್ತಿದ್ದು, ಇದಕ್ಕಾಗಿ ಪ್ರತ್ಯೇಕ ಸಹಕಾರ ಸಚಿವಾಲಯವನ್ನೂ ಸ್ಥಾಪಿಸಿದೆ. ಸಹಕಾರಿ ವ್ಯವಸ್ಥೆಯ ಪ್ರಯೋಜನಗಳು ಜನಸಾಮಾನ್ಯರ ಮನೆಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...
WhatsApp Image 2026 11 18 at 10.59.32 PM

ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವತಿಯಿಂದ ರೈತರಿಗೆ ಕೃಷಿ ಪ್ರೋತ್ಸಾಹ ಧನ ಪ್ರತಿ ಎಕರೆಗೆ ಹೆಚ್ಚುವರಿಯಾಗಿ 3 ಸಾವಿರ ರೂ. ನೀಡುವ ಪ್ರಸ್ತಾಪ ಸ್ವಾಗತಾರ್ಹ. ಆದರೆ, ಕೃಷಿಯನ್ನೇ ಅವಲಂಬಿಸಿರುವ ರೈತರ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಕಲ್ಪಿಸಬೇಕಾಗಿದೆ. ಇಂದಿಗೂ ಶೇ.61.93ರಷ್ಟು ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ಇತ್ತೀಚೆಗೆ ಕಬ್ಬು ಬೆಳೆಗಾರರ ಹೋರಾಟ ಸೇರಿದಂತೆ ರೈತರ ಪ್ರತಿಭಟನೆಗಳು ಕೃಷಿ ವಲಯದ ಸಂಕಷ್ಟವನ್ನು ಪ್ರತಿಬಿಂಬಿಸಿವೆ. ರೈತರು ಸಂಘಟಿತರಾಗಿ ಹೋರಾಟಕ್ಕಿಳಿದರೆ ಅವರನ್ನು ತಡೆಯುವುದು ಸುಲಭವಲ್ಲ ಎಂದರು.

ಬೇಟೆಯಾಡುವ ಜೀವನ ಪದ್ಧತಿಯಿಂದ ಕೃಷಿ ಬದುಕಿಗೆ, ಅಲ್ಲಿಂದ ಆಧುನಿಕ ಜೀವನದತ್ತ ಮನುಷ್ಯ ಬೆಳೆದು ಬಂದಿರುವುದು ಇತಿಹಾಸದ ಮಹತ್ವದ ಬೆಳವಣಿಗೆಯಾಗಿದೆ. ಒಂದು ಕಾಲದಲ್ಲಿ ಆಹಾರ, ಬಟ್ಟೆ ಮತ್ತು ವಸತಿಯೇ ಮನುಷ್ಯನ ಮೂಲಭೂತ ಅಗತ್ಯಗಳಾಗಿದ್ದವು. ಇಂದು ಅವುಗಳನ್ನು ಮೀರಿ ಉತ್ತಮ ಜೀವನ ರೂಪಿಸಿಕೊಳ್ಳುವತ್ತ ಸಮಾಜ ಮುನ್ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಉಳಿತಾಯದ ಮನೋಭಾವ ಮತ್ತು ಆರ್ಥಿಕ ಶಿಸ್ತು ಪ್ರತಿಯೊಬ್ಬರಲ್ಲೂ ಬೆಳೆಯಬೇಕು ಎಂದು ಹೇಳಿದರು.

WhatsApp Image 2026 11 18 at 10.59.31 PM 2

ಹಿಂದೆ ಕೃಷಿಯೇ ಬದುಕಿನ ಪ್ರಮುಖ ಆಧಾರವಾಗಿತ್ತು. ಆದರೆ, ಕಾಲ ಬದಲಾದಂತೆ ಶಿಕ್ಷಣ ಮತ್ತು ವಿವಿಧ ಅವಕಾಶಗಳು ಮನುಷ್ಯನ ಬದುಕಿಗೆ ಹೊಸ ಆಯಾಮ ನೀಡಿವೆ. ನನ್ನ ಬಾಲ್ಯದಲ್ಲಿಯೂ ಕುಟುಂಬದ ಬದುಕು ಕೃಷಿಗೆ ಸೀಮಿತವಾಗಿತ್ತು. ನಮ್ಮ ಕುಟುಂಬಕ್ಕೆ ಸೇರಿದ ಸುಮಾರು 40 ಎಕರೆ ಜಮೀನು ಭೂಮಸೂದೆ ಕಾಯ್ದೆಯಡಿ ಕೈತಪ್ಪಿದ ಬಳಿಕ, ಒಂದು ಜೊತೆ ಬಟ್ಟೆಯೊಂದಿಗೆ ಊರು ಬಿಟ್ಟು 45 ವರ್ಷಗಳ ಹಿಂದೆ ಬಳ್ಳಾರಿಗೆ ತೆರಳಿ ಬದುಕು ಕಟ್ಟಿಕೊಂಡೆ. ಹೀಗಾಗಿ ಬಡತನ, ಹಸಿವು ಮತ್ತು ಅವಮಾನದ ಅನುಭವ ನನಗಿದೆ ಎಂದು ತಮ್ಮ ಜೀವನಾನುಭವ ಹಂಚಿಕೊಂಡರು.

ಬಡತನ ಕಲಿಸುವ ಪಾಠವನ್ನು ಸಿರಿತನ ಕಲಿಸಲಾರದು. ಜೀವನದಲ್ಲಿ ಕಷ್ಟಗಳು, ಅವಮಾನಗಳು ಮತ್ತು ಅನುಮಾನಗಳು ಎದುರಾಗುವುದು ಸಹಜ. ಆದರೆ, ಅವುಗಳನ್ನೆಲ್ಲ ಎದುರಿಸಿ ಮುನ್ನಡೆದಾಗ ಅದೇ ಜೀವನ ನಮ್ಮನ್ನು ಗೌರವಿಸುತ್ತದೆ. ಪ್ರತಿಯೊಂದು ಅನುಭವವೂ ಬದುಕಿಗೆ ಪಾಠವಾಗಿದ್ದು, ಅವುಗಳಿಂದ ಕಲಿತು ಮುನ್ನಡೆಯುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಸಮಾಜದ ಜನರೆಲ್ಲರೂ ಒಗ್ಗಟ್ಟಿನಿಂದ ಮುನ್ನಡೆದಾಗ ಮಾತ್ರ ಸಮಾಜದ ಪ್ರಗತಿ ಸಾಧ್ಯ. ಇಂದಿನ ಪರಿಸ್ಥಿತಿಯಲ್ಲಿ ಜನರ ನಿರೀಕ್ಷೆಗಳು ಹೆಚ್ಚಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿವೆ ಎಂದು ಹೇಳಿದರು.

WhatsApp Image 2026 11 18 at 10.59.31 PM 1

ಹಿಂದೆ ನಮ್ಮ ಜಿಲ್ಲೆಯಲ್ಲಿ ಸಿಂಡಿಕೇಟ್ ಬ್ಯಾಂಕ್, ವಿಜಯ ಬ್ಯಾಂಕ್ ಹಾಗೂ ಕಾರ್ಪೊರೇಷನ್ ಬ್ಯಾಂಕ್‌ನಂತಹ ರಾಷ್ಟ್ರೀಕೃತ ಬ್ಯಾಂಕ್‌ಗಳು ಜನರಿಗೆ ಉತ್ತಮ ಸೇವೆ ನೀಡುತ್ತಿದ್ದವು. ಆದರೆ, ಲಾಭದಲ್ಲಿದ್ದ ವಿಜಯ ಬ್ಯಾಂಕ್ ಅನ್ನು ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸಲಾಗಿದೆ. ಇದರಿಂದ ವಿಜಯ ಬ್ಯಾಂಕ್‌ನ ಹೆಸರು ಕಣ್ಮರೆಯಾಗಿದೆ. ಬ್ಯಾಂಕಿನ ಉನ್ನತಿಗಾಗಿ ಸುಂದರರಾಮ ಶೆಟ್ಟಿಯವರು ಸಾಕಷ್ಟು ಶ್ರಮಿಸಿದ್ದರು. ಅದೇ ರೀತಿ ಸಿಂಡಿಕೇಟ್ ಬ್ಯಾಂಕ್ ಅನ್ನು ಕೆನರಾ ಬ್ಯಾಂಕ್‌ನೊಂದಿಗೆ ಹಾಗೂ ಕಾರ್ಪೊರೇಷನ್ ಬ್ಯಾಂಕ್ ಅನ್ನು ಯೂನಿಯನ್ ಬ್ಯಾಂಕ್‌ನೊಂದಿಗೆ ವಿಲೀನಗೊಳಿಸಲಾಗಿದೆ ಎಂದು ತಿಳಿಸಿದರು.

ಒಂದು ಕಾಲದಲ್ಲಿ ಈ ಬ್ಯಾಂಕ್‌ಗಳಲ್ಲಿ ಸುಮಾರು 50 ಸಾವಿರ ಮಂದಿ ಉದ್ಯೋಗದಲ್ಲಿದ್ದರು. ಈ ಉದ್ಯೋಗಗಳು ಸಾವಿರಾರು ಕುಟುಂಬಗಳ ಜೀವನೋಪಾಯಕ್ಕೆ ಆಧಾರವಾಗಿದ್ದವು. ಆದರೆ, ಬ್ಯಾಂಕ್‌ಗಳ ವಿಲೀನದ ಬಳಿಕ ಪರಿಸ್ಥಿತಿಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಭಾಷೆಯ ಸಮಸ್ಯೆಯೂ ಎದುರಾಗುತ್ತಿದೆ. ಕೆಲವು ಕಡೆ ಹಿಂದಿ, ಮಲಯಾಳಂ, ತಮಿಳು ಸೇರಿದಂತೆ ವಿವಿಧ ಭಾಷೆಗಳಲ್ಲಿ ವ್ಯವಹಾರ ನಡೆಯುವುದರಿಂದ ಸ್ಥಳೀಯ ಜನರಿಗೆ ಸಂವಹನ ನಡೆಸಲು ಕಷ್ಟವಾಗುತ್ತಿದೆ. ಇದರಿಂದ ರಾಷ್ಟ್ರೀಕೃತ ಬ್ಯಾಂಕ್‌ಗಳು ಜನಸಾಮಾನ್ಯರಿಂದ ಸ್ವಲ್ಪ ದೂರವಾಗಿವೆ ಎಂಬ ಭಾವನೆಯೂ ಮೂಡಿದೆ ಎಂದರು.

ಈ ರೀತಿಯ ಸಮಸ್ಯೆಗಳನ್ನು ನಿವಾರಿಸಿ ಜನರಿಗೆ ಸುಲಭವಾಗಿ ಬ್ಯಾಂಕಿಂಗ್ ಸೇವೆ ತಲುಪಿಸಬೇಕಾದರೆ ಸಹಕಾರಿ ಬ್ಯಾಂಕ್‌ಗಳ ಮೇಲೆ ಹೆಚ್ಚಿನ ಅವಲಂಬನೆ ಬೆಳೆಸಿಕೊಳ್ಳಬೇಕು. ಸಹಕಾರಿ ಬ್ಯಾಂಕ್‌ಗಳನ್ನು ಬಲಪಡಿಸುವ ಮೂಲಕ ಸ್ಥಳೀಯ ಜನರಿಗೆ ಉತ್ತಮ ಸೇವೆ ಒದಗಿಸುವುದರ ಜತೆಗೆ ಸಮಾಜದ ಆರ್ಥಿಕ ಪ್ರಗತಿಗೂ ಹೆಚ್ಚಿನ ಅವಕಾಶ ಕಲ್ಪಿಸಬಹುದು ಎಂದು ಅಭಿಪ್ರಾಯಪಟ್ಟರು.

ಪಡುಬಿದ್ರಿ ವ್ಯವಸಾಯಿ ಸೊಸೈಟಿಯ ಅಧ್ಯಕ್ಷ ವೈ.ಸುಧೀರ್ ಕುಮಾರ್ ಮಾತನಾಡಿ, ಪಡುಬಿದ್ರಿ ವ್ಯವಸಾಯಿಕ ಸಂಘದ ಮೂಲಕ ರೈತರಿಗೆ ನಿರಂತರ ಸಹಕಾರ ಮಾಡುವ ಮೂಲಕ ಕೃಷಿಕರಿಗೆ ನಿರಂತರ ಪ್ರೋತ್ಸಾಹ ನೀಡಲಾಗುತ್ತಿದೆ. ಇದರೊಂದಿಗೆ ಸಾಮಾಜಿಕ ಕಾರ್ಯದಲ್ಲೂ ಸಂಸ್ಥೆನ ಕೈಜೋಡಿಸಿದೆ ಎಂದರು.

WhatsApp Image 2026 11 18 at 10.59.31 PM

ಸನ್ಮಾನ: ಸಹಕಾರ ರತ್ನ ಪ್ರಶಸ್ತಿ ಸ್ವೀಕರಿಸಿದ ಪಡುಬಿದ್ರಿ ವ್ಯವಸಾಯಿ ಸೊಸೈಟಿಯ ಅಧ್ಯಕ್ಷ ವೈ.ಸುಧೀರ್, ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ನಿರ್ದೇಶಕ ಸತೀಶ್ ಕುಂದರ್, ಹೆಬ್ರಿಯ ಬೆಳ್ವೆ ವ್ಯವಸಾಯ ಸಹಕಾರಿ ಸಂಘದ ಎಸ್.ಜಯರಾಮ ಶೆಟ್ಟಿ, ಉದ್ಯಾವರ ಪಿತ್ರೋಡಿ ಮೀನುಗಾರಿಕಾ ಮೀನು ಉತ್ಪನ್ನ ಸಾಮಾಗ್ರಿಗಳ ಸಹಕಾರಿ ಸಂಘದ ಗಿರೀಶ್ ವಿ.ಸುವರ್ಣ ಅವರನ್ನು ಸನ್ಮಾನಿಸಲಾಯಿತು.

ವಿತರಣೆ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ವತಿಯಿಂದ ೧೯೪ ರೈತರಿಗೆ ತಲಾ ರೂ. 3000 ಕೃಷಿ ಪ್ರೋತ್ಸಾಹ ಧನ ಹಾಗೂ ವೈದ್ಯಕೀಯ ಸಹಾಯ ಧನ, ದೈನಿಕ ಠೇವಣಿ ಸಂಗ್ರಹಗಾರರಿಗೆ ಬ್ಯಾಗ್‌ಗಳನ್ನು ವಿತರಿಸಲಾಯಿತು.

ಉಡುಪಿ ಜಿಲ್ಲಾ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ಗಂಗಾಧರ ಶೆಟ್ಟಿ, ಅನಿಲ್ ಕುಮಾರ್, ಸುರೇಶ್ ರಾವ್, ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್, ಕುಂದಾಪುರ ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕ ಜೆ.ಸುಧೀರ್ ಕುಮಾರ್, ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ.ಎಚ್, ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ಪಡುಬಿದ್ರಿ ವ್ಯವಸಾಯಿಕ ಸೊಸೈಟಿಯ ಉಪಾಧ್ಯಕ್ಷ ಗುರುರಾಜ್ ಪೂಜಾರಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಚಳಗೇರಿಯಲ್ಲಿ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ; 103 ಮಂದಿಗೆ ಚಿಕಿತ್ಸೆ

ಚಳಗೇರಿ ಗ್ರಾಮದಲ್ಲಿ ಸರ್ಕಾರಿ ಆಯುರ್ವೇದ ಆಸ್ಪತ್ರೆ, ಗ್ರಾಮ ಅಭಿವೃದ್ಧಿ ಸಮಿತಿ ಚಳಗೇರಿ...

ಯಲ್ಲಾಪುರ | ಆರತಿಬೈಲ್ ಘಟ್ಟದಲ್ಲಿ ಕರಿ ಚಿರತೆ ಸಾವು; ವಾಹನ ಡಿಕ್ಕಿ ಶಂಕೆ

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರ ಆರತಿಬೈಲ್ ಘಟ್ಟದ ಬಳಿ ಸುಮಾರು ಎರಡು...

ಬಾಗೇಪಲ್ಲಿ| ಡಿಸಿಸಿ ಬ್ಯಾಂಕ್ ನನ್ನ ಹೃದಯಕ್ಕೆ ಸಮಾನ, ಬ್ಯಾಂಕಿನ ಸಾಧನೆಗೆ ಹಿನ್ನಡೆಯಾಗುವ ಕೆಲಸ ಸಹಿಸುವುದಿಲ್ಲ– ಕೊತ್ತನೂರು ಮಂಜುನಾಥ್

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ನನ್ನ ಹೃದಯಕ್ಕೆ ಸಮಾನವಾಗಿದೆ....

ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು...