ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

Date:

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ ಸಹಕಾರಿ ಪಾಲುದಾರಿಕೆಯನ್ನು ಬಲಪಡಿಸುವ ಕುರಿತ ಜಿಲ್ಲಾ ಮಟ್ಟದ ಕಾರ್ಯಕ್ರಮ ನವೆಂಬರ್ 18ರಂದು ಪಡುಬಿದ್ರಿಯಲ್ಲಿ ನಡೆಯಲಿದೆ.

- Advertisement -

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಸಹಕಾರ ಇಲಾಖೆ ಉಡುಪಿ ಜಿಲ್ಲೆ ಹಾಗೂ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ. ಇವರ ಸಂಯುಕ್ತ ಆಶ್ರಯದಲ್ಲಿ ಬೆಳಿಗ್ಗೆ 9.30ಕ್ಕೆ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ವೈ. ಲಕ್ಷ್ಮಣ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಕಾರ್ಯಕ್ರಮವನ್ನು ವಕೀಲರಾದ ಸುಧೀರ್ ಮರೋಳಿ, ಕೊಪ್ಪ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹಾಗೂ ಸಹಕಾರ ರತ್ನ ಪುರಸ್ಕೃತ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ. ಸುಧೀರ್ ಕುಮಾರ್ ಕೃಷಿ ಪ್ರೋತ್ಸಾಹಧನ ವಿತರಣೆ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಸಹಕಾರ ಸಂಘಗಳ ಉಪನಿಬಂಧಕಿ ಕೆ.ಆರ್. ಲಾವಣ್ಯ ಹಾಗೂ ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಜೆ. ಸುಧೀರ್ ಕುಮಾರ್ ಭಾಗವಹಿಸಲಿದ್ದಾರೆ.

ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ಮತ್ತು ಆಡಳಿತಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

73ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನವೆಂಬರ್ 14ರಿಂದ 20ರವರೆಗೆ ದೇಶಾದ್ಯಂತ ಆಚರಿಸಲಾಗುತ್ತಿದೆ. ಈ ವರ್ಷದ ಸಪ್ತಾಹದ ಧ್ಯೇಯವಾಕ್ಯ ‘ಸಹಕಾರ ಸಂಸ್ಥೆಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲ್ಯಾಧಾರಿತ ವೃತ್ತಿಪರ ಸೇವೆ’ ಎಂಬುದಾಗಿದೆ.

ಇದರ ಅಂಗವಾಗಿ ಉಡುಪಿ ಜಿಲ್ಲೆಯಾದ್ಯಂತ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಕಾರವಾರ: ವಿದೇಶಕ್ಕೆ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಉದ್ದೇಶದಿಂದ ಖರೀದಿದಾರರನ್ನು ಹುಡುಕುತ್ತಿದ್ದ...

ಹಾಸನ | ನಡು ರಸ್ತೆಯಲ್ಲೇ ಮಹಿಳೆಯರ ಹೊಡೆದಾಟ 

ಹಾಸನ ನಗರದ ವ್ಯಾಪ್ತಿಯಲ್ಲಿ ನಡು ರಸ್ತೆಯಲ್ಲಿ ಇಬ್ಬರು ಮಹಿಳೆಯರು ಚಪ್ಪಲಿಯಿಂದ ಪರಸ್ಪರ...

ಕೋಲಾರ | ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಖಜಾಂಚಿಯಾಗಿ ಜಿ ಎಚ್ ನಾಗರಾಜ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ನೂತನ ಖಜಾಂಚಿಯನ್ನಾಗಿ ಚಿಕ್ಕಬಳ್ಳಾಪುರದ ಜಿ.ಹೆಚ್. ನಾಗರಾಜ್...