ಉಡುಪಿ | ಯುವಜನತೆಗೆ ಉದ್ಯೋಗ ಕಲ್ಪಿಸುವುದು ಸಮಾಜದ ಜವಾಬ್ದಾರಿ: ಡಾ. ಎಚ್.ಎಸ್. ಬಲ್ಲಾಳ್

Date:

ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್‌ರಾಜ್ ಕಾಂಚನ್ ನೇತೃತ್ವದ ಮಹಾರುದ್ರ ಯಾಗದ ಪ್ರಯುಕ್ತ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಏರ್ಪಡಿಸಲಾದ ಬೃಹತ್ ಉದ್ಯೋಗ ಮೇಳಕ್ಕೆ ಸೋಮವಾರ ಚಾಲನೆ ನೀಡಲಾಯಿತು.

- Advertisement -

ಮೇಳವನ್ನು ಉದ್ಘಾಟಿಸಿದ ಮಣಿಪಾಲ ಮಾಹೆಯ ಪ್ರೊಚಾನ್ಸಲೆರ್ ಡಾ. ಎಚ್.ಎಸ್.ಬಲ್ಲಾಳ್ ಮಾತನಾಡಿ, ಧಾರ್ಮಿಕ ಕಾರ್ಯಕ್ರಮದ ಜೊತೆ ಪ್ರಸಾದ್‌ರಾಜ್ ಕಾಂಚನ್ ಯುವಜನತೆಗೆ ಅನುಕೂಲವಾಗುವ ಕಾರ್ಯ ಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ. ನಮ್ಮ ದೇಶದ 140ಕೋಟಿ ಜನಸಂಖ್ಯೆಯಲ್ಲಿ ಶೇ.40ರಷ್ಟು 25ವರ್ಷ ಕೆಳಗಿನ ಯುವ ಜನತೆ ಇದ್ದಾರೆ. ಇವರೇ ನಮ್ಮ ದೇಶದ ಆಸ್ತಿಯಾಗಿದ್ದಾರೆ. ಇವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆ ಉದ್ಯೋಗ ಕೂಡ ಕಲ್ಪಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
1010919179

ಉತ್ತಮ ಉದ್ಯೋಗ ಸಿಕ್ಕಿದರೆ ಯುವಜನತೆಯ ಭವಿಷ್ಯ ಕೂಡ ಉತ್ತಮ ವಾಗಿರಲು ಸಾಧ್ಯವಾಗುತ್ತದೆ. ನಮ್ಮ ದೇಶದಲ್ಲಿ ಶೇ.70ರಷ್ಟು ಜನ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದಾರೆ. ಇವರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವುದರಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ. ಅದರಲ್ಲೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಲಿಂಗ ಸಮಾನತೆ ಸಾಧಿಸಬಹುದು ಎಂದು ಅವರು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆಯನ್ನು ವಹಿಸಿದ್ದ ಮಹಾರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿ ಯಲ್ಲಿರುವ ಉಡುಪಿ ಜಿಲ್ಲೆಯ ಯುವಜನತೆ ಸರಿಯಾದ ಉದ್ಯೋಗ ಸಿಗದೆ ಹೊರರಾಜ್ಯ, ಹೊರ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮಲ್ಲಿನ ಪ್ರತಿಭೆಗಳಿಗೆ ನಮ್ಮಲ್ಲಿಯೇ ಉದ್ಯೋಗ ನೀಡುವುದ ರಿಂದ ನಮ್ಮ ಜಿಲ್ಲೆ ಆರ್ಥಿಕವಾಗಿ ಮತ್ತಷ್ಟು ಪ್ರಗತಿ ಸಾಧಿಸುತ್ತದೆ. ಈ ನಿಟ್ಟಿನಲ್ಲಿ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದರು.

ಉದ್ಯೋಗಾವಾಶಗಳ ಜೊತೆಗೆ ಸ್ಥಳೀಯವಾಗಿ ಬೇಡಿಕೆ ಇರುವ ಉದ್ಯಮ ಗಳ ಬಗ್ಗೆಯೂ ಯುವಜನತೆಗೆ ಮಾಹಿತಿ ನೀಡುವ ಕಾರ್ಯ ಮಾಡಲಾಗು ತ್ತದೆ. ಕರಾವಳಿಯಲ್ಲಿ ಇದೀಗ ಪ್ರವಾಸೋದ್ಯಮ ಕ್ಷೇತ್ರ ತುಂಬಾ ವೇಗವಾಗಿ ಬೆಳೆಯುತ್ತಿದೆ. ಇದರಲ್ಲಿ ವಿಫಲ ಅವಕಾಶ ಕೂಡ ಇದೆ. ಇದನ್ನು ನಮ್ಮ ಸ್ಥಳೀಯ ಯುವಜನತೆ ಬಳಸಿಕೊಂಡು ಅಭಿವೃದ್ಧಿ ಕಾಣಬೇಕು ಎಂದು ಅವರು ತಿಳಿಸಿದರು.

1010919180

ಶ್ರೀನಿವಾಸ್ ಯೂನಿವರ್ಸಿಟಿ ಇದರ ಇಂಟರ್‌ನ್ಯಾಷನಲ್ ಕೊಲೆಬ್ರೆಷನ್ಸ್ ನಿರ್ದೇಶಕಿ ಡಾ.ದಿವ್ಯಾರಾಣಿ ಪ್ರದೀಪ್ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಉದ್ಯೋಗ ಮೇಳ ಪ್ರಸಾದ್‌ರಾಜ್ ಕಾಂಚನ್ ಅವರ ಕನಸು ಆಗಿದ್ದು, ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತರಿಗೆ ಉದ್ಯೋಗ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಇದರಲ್ಲಿ 70 ಕಂಪೆನಿಗಳು ಭಾಗವಹಿಸಿದ್ದು, ಸುಮಾರು 7 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳನ್ನು ಒದಗಿಸಿದೆ. ಇದರಲ್ಲಿ ಸಂಜೆಯವರೆಗೆ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಎಚ್‌ಪಿಆರ್ ಗ್ರೂಪ್ ಆಫ್ ಇನ್ಸಿಟಿಟ್ಯೂಷನ್ಸ್ನ ಅಧ್ಯಕ್ಷ ಹರಿಪ್ರಸಾದ್ ರೈ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಕೊಡವೂರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಉಪಸ್ಥಿತರಿದ್ದರು. ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...