ಉಡುಪಿ | ಟ್ರಸ್ಟಿಗಳ ಜವಾಬ್ದಾರಿ ಎಲ್ಲಿದೆ? ರಾಮಮಂದಿರ ವಿವಾದದ ಸುತ್ತ ಹೆಚ್ಚುತ್ತಿರುವ ಪ್ರಶ್ನೆಗಳು

Date:

ದೇಶ-ವಿದೇಶದ ಕೋಟ್ಯಂತರ ಹಿಂದೂಗಳ ಭಕ್ತಿಯ ಕೇಂದ್ರವಾಗಿರುವ ಅಯೋಧ್ಯೆಯ ರಾಮಮಂದಿರದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆಯ ನಡುವೆಯೇ ರಾಮಮಂದಿರ ಟ್ರಸ್ಟ್ ಸದಸ್ಯರೂ ಆಗಿರುವ ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೀಡಿರುವ ಹೇಳಿಕೆ ಹಾಗೂ ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳು ಪ್ರಕರಣಕ್ಕೆ ಹೊಸ ತಿರುವು ನೀಡಿವೆ.

- Advertisement -

ಉಡುಪಿಯಲ್ಲಿ ಇತ್ತೀಚಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ರಾಮಮಂದಿರದಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯಬಾರದಿತ್ತು ಎಂದು ಸ್ಪಷ್ಟಪಡಿಸಿದರು. ಆರೋಪಗಳು ಸತ್ಯವಾಗಿದ್ದರೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ ಅವರು, ರಾಜ್ಯ ಸರ್ಕಾರದ ಎಸ್‌ಐಟಿ ತನಿಖೆಯನ್ನು ಸ್ವಾಗತಿಸಿದರು. ತನಿಖೆ ಪಾರದರ್ಶಕವಾಗಿ ನಡೆದು ಸತ್ಯಾಸತ್ಯತೆ ಶೀಘ್ರದಲ್ಲೇ ಹೊರಬರಲಿ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತಾವು ಟ್ರಸ್ಟ್ ಸದಸ್ಯರಾಗಿರುವ ಹಿನ್ನೆಲೆಯಲ್ಲಿ ಸಭೆಗಳಲ್ಲಿ ಹಲವು ಸಲಹೆಗಳನ್ನು ನೀಡುತ್ತಿದ್ದೆ. ಸಂಬಂಧಪಟ್ಟವರು ಕ್ರಮ ಕೈಗೊಳ್ಳುವುದಾಗಿ ತಿಳಿಸುತ್ತಿದ್ದರು. ಟ್ರಸ್ಟ್ ಸದಸ್ಯನಾಗಿ ವಿಶ್ವಾಸ ಇಟ್ಟು ಸಲಹೆ ನೀಡುವುದೇ ನನ್ನ ಪಾತ್ರವಾಗಿತ್ತು ಎಂದು ಅವರು ಹೇಳಿದ್ದರು. ರಾಮಮಂದಿರಕ್ಕೆ 200 ಕೆ.ಜಿ. ಬೆಳ್ಳಿ ನೀಡಿದರೂ ರಶೀದಿ ನೀಡಿಲ್ಲ ಎಂಬ ಸಿಂಧಿ ಸಮುದಾಯದ ಆರೋಪಕ್ಕೆ ಪ್ರತಿಕ್ರಿಯಿಸಿದ ಶ್ರೀಗಳು, ದೊಡ್ಡ ಮೊತ್ತದ ದೇಣಿಗೆ ನೀಡುವವರು ಸ್ಥಳದಲ್ಲೇ ಅಧಿಕೃತ ರಶೀದಿ ಪಡೆಯುವುದು ಅಗತ್ಯ. ದೇಣಿಗೆ ಸ್ವೀಕರಿಸುವವರಿಗೂ ರಶೀದಿ ನೀಡುವ ಜವಾಬ್ದಾರಿ ಇದೆ. ರಶೀದಿ ನೀಡದಿರುವುದು ದೊಡ್ಡ ತಪ್ಪು. ಆರೋಪಗಳಲ್ಲಿ ವಾಸ್ತವಾಂಶ ಇದ್ದರೆ ತನಿಖೆಯಲ್ಲಿ ಅದು ಬಹಿರಂಗವಾಗಬೇಕು ಎಂದರು.

ರಾಮಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಟ್ರಸ್ಟಿಗಳ ಅಧಿಕೃತ ವಾಟ್ಸಾಪ್‌ ಗುಂಪಿನಲ್ಲಿ ಅಥವಾ ವೈಯಕ್ತಿಕವಾಗಿ ಯಾವುದೇ ಮಾಹಿತಿ ಬಂದಿಲ್ಲ. ಆದ್ದರಿಂದ ಈ ಬೆಳವಣಿಗೆಯ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಭಕ್ತರು ದೇವಸ್ಥಾನಕ್ಕೆ ಅಪಾರ ದೇಣಿಗೆ ನೀಡುವುದಕ್ಕಿಂತ ಸಮಾಜಸೇವೆಗೆ ಆದ್ಯತೆ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಪೇಜಾವರ ಶ್ರೀ, ಬಡವರಿಗೆ ಮನೆ ನಿರ್ಮಿಸಿ ಕೊಡುವುದು, ದೀನ-ದಲಿತರಿಗೆ ನೆರವಾಗುವುದು ಕೂಡ ನಿಜವಾದ ರಾಮಸೇವೆಯೇ ಆಗಿದೆ ಎಂದರು. ನೂರು ಕೆಜಿ ಬೆಳ್ಳಿ ಕೊಡುವುದಕ್ಕಿಂತ ಸಾವಿರ ಮನೆಗಳನ್ನು ನಿರ್ಮಿಸಿ ಕೊಡುವುದು ಸಮಾಜಕ್ಕೂ ಧರ್ಮಕ್ಕೂ ಹೆಚ್ಚಿನ ಸೇವೆಯಾಗುತ್ತದೆ ಎಂದು ತಿಳಿಸಿದರು.

ಪೇಜಾವರ ಶ್ರೀ ಸೇರಿ ಟ್ರಸ್ಟಿಗಳ ವಿರುದ್ಧ ತನಿಖೆಗೆ ಆಗ್ರಹ – ಕೋಟ ನಾಗೇಂದ್ರ ಪುತ್ರನ್

ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್, ರಾಮಮಂದಿರದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಪೇಜಾವರ ಶ್ರೀ ಸೇರಿದಂತೆ ಎಲ್ಲ ಟ್ರಸ್ಟಿಗಳ ಪಾತ್ರದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಟ್ರಸ್ಟಿಯಾಗಿ ಅಕ್ರಮದ ಬಗ್ಗೆ ಮೊದಲೇ ಮಾಹಿತಿ ಇದ್ದಿದ್ದರೆ ಅದನ್ನು ಬಹಿರಂಗವಾಗಿ ವಿರೋಧಿಸಿ ಕ್ರಮಕ್ಕೆ ಒತ್ತಾಯಿಸಬೇಕಾಗಿತ್ತು. ಈಗ ಸ್ವಾಮೀಜಿಯವರೇ ಮೊದಲೇ ಸಲಹೆ ನೀಡಿದ್ದೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಆ ಹೇಳಿಕೆಗಳನ್ನೂ ತನಿಖೆಯ ವ್ಯಾಪ್ತಿಗೆ ತರಬೇಕು ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದೆ ಎಂದು ಆರೋಪಿಸಿದ ಅವರು, ರಾಮಮಂದಿರಕ್ಕೆ ದೇಣಿಗೆ ನೀಡುವುದಕ್ಕಿಂತ ಸಮಾಜಸೇವೆ ಮಾಡಬೇಕು ಎಂಬ ಪೇಜಾವರ ಶ್ರೀ ಅವರ ಸಲಹೆಯೂ ಈಗ ಮಹತ್ವ ಪಡೆದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಲಿ : ಸುರೇಶ್ ಶೆಟ್ಟಿ ಬನ್ನಂಜೆ

ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ ಕೂಡ ಪ್ರಕರಣದ ಕುರಿತು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ರಾಮಮಂದಿರದ ಹೆಸರಿನಲ್ಲಿ ಸಂಗ್ರಹವಾದ ದೇಣಿಗೆ ಹಣ ದುರುಪಯೋಗವಾಗಿದ್ದರೆ ಅದರ ಹೊಣೆ ಯಾರು ಎಂಬುದು ತನಿಖೆಯಿಂದ ಬಹಿರಂಗವಾಗಬೇಕು. ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಭಕ್ತರು ಭಕ್ತಿಭಾವದಿಂದ ನೀಡಿದ ದೇಣಿಗೆಯ ಪ್ರತಿಯೊಂದು ರೂಪಾಯಿಯೂ ದೇವರ ಸೇವೆಗೆ ಬಳಕೆಯಾಗಬೇಕು. ಹಣ ದುರುಪಯೋಗವಾಗಿದ್ದರೆ ಅದು ಕೋಟ್ಯಾಂತರ ಭಕ್ತರ ನಂಬಿಕೆಗೆ ಮಾಡಿದ ದ್ರೋಹವಾಗುತ್ತದೆ ಎಂದು ಅವರು ಆರೋಪಿಸಿದರು. ಪೇಜಾವರ ಶ್ರೀ ಅವರು ಈ ವಿಚಾರದಲ್ಲಿ ಸಮಗ್ರ ಮಾಹಿತಿ ಪಡೆದು ಸ್ಪಷ್ಟ ನಿಲುವು ಪ್ರಕಟಿಸಬೇಕು. ತನಿಖೆ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಒತ್ತಡವಿಲ್ಲದೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂದು ಆಗ್ರಹಿಸಿದರು.

ರಾಮಮಂದಿರ ಅವ್ಯವಹಾರದ ಆರೋಪದ ಹಿನ್ನೆಲೆಯಲ್ಲಿ ನಡೆಯುತ್ತಿರುವ ತನಿಖೆ ದೇಶದ ಗಮನ ಸೆಳೆದಿದೆ. ಒಂದೆಡೆ ಟ್ರಸ್ಟ್ ಸದಸ್ಯರಾಗಿರುವ ಪೇಜಾವರ ಶ್ರೀ, ಆರೋಪ ಸತ್ಯವಾಗಿದ್ದರೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ನಾಯಕರು ಟ್ರಸ್ಟಿಗಳ ಪಾತ್ರ ಸೇರಿದಂತೆ ಸಂಪೂರ್ಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸುತ್ತಿದ್ದಾರೆ. ರಾಜಕೀಯ ಮತ್ತು ಧಾರ್ಮಿಕ ವಲಯಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣದಲ್ಲಿ ತನಿಖೆಯ ಅಂತಿಮ ವರದಿಯೇ ಆರೋಪಗಳ ಸತ್ಯಾಸತ್ಯತೆಯನ್ನು ನಿರ್ಧರಿಸಲಿದೆ. ಅಷ್ಟರ ತನಕ ಭಕ್ತರ ಗಮನವೂ ತನಿಖೆಯ ಮೇಲೆಯೇ ನೆಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...