ಉಡುಪಿ | ಪೆರ್ಡೂರು–ಬೈರಂಪಳ್ಳಿ–ಅಣ್ಣಾಲು ಸಂಪರ್ಕ ಸೇತುವೆಗೆ 5 ಕೋಟಿ ರೂ ಅನುದಾನ

Date:

ಬಜಗೋಳಿಯ ತೆಂಕಬೆಟ್ಟು ರಾಜ್ಯ ಹೆದ್ದಾರಿಯಲ್ಲಿ ಪೆರ್ಡೂರು–ಬೈರಂಪಳ್ಳಿ–ಅಣ್ಣಾಲು ಸಂಪರ್ಕ ಸೇತುವೆಯನ್ನು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಕಾಮಗಾರಿಯನ್ನು ನಿಗದಿತ ಕಾಲಾವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಸೂಚನೆ ನೀಡಿದರು.

- Advertisement -

ಉಡುಪಿ ತಾಲೂಕಿನ ಪೆರ್ಡೂರು–ಬೈರಂಪಳ್ಳಿ–ಅಣ್ಣಾಲು ಸಂಪರ್ಕ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಉಡುಪಿ ಜಿಲ್ಲೆಯಲ್ಲಿ ಒಟ್ಟು 9 ಸೇತುವೆಗಳ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಇವುಗಳಲ್ಲಿ ಪೆರ್ಡೂರು–ಬೈರಂಪಳ್ಳಿ–ಅಣ್ಣಾಲು ಸಂಪರ್ಕ ಸೇತುವೆಯೂ ಒಂದಾಗಿದ್ದು, ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಿ ಗುಣಮಟ್ಟ ಕಾಯ್ದುಕೊಂಡು ಪೂರ್ಣಗೊಳಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳ ರಸ್ತೆ ಹಾಗೂ ಇತರ ಮೂಲಸೌಕರ್ಯ ಅಭಿವೃದ್ಧಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ನೀಡಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 25 ಕೋಟಿ ರೂ. ಅನುದಾನ ಒದಗಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ವೇಗವನ್ನು ಮತ್ತಷ್ಟು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವ ಮೂಲಕ ಸಹಕರಿಸಿದ್ದಾರೆ. ಮಳೆಗಾಲ ಆರಂಭವಾಗುವ ಮುನ್ನವೇ ಕಾಮಗಾರಿ ಪೂರ್ಣಗೊಳ್ಳಬೇಕಿದೆ ಎಂದು ಹೇಳಿದರು.

ಜಿಲ್ಲೆಯ ಭೌಗೋಳಿಕ ಪರಿಸರ ಹಾಗೂ ಅಧಿಕ ಮಳೆಯಿಂದಾಗಿ ಹಲವು ರಸ್ತೆಗಳು ಹಾಳಾಗಿದ್ದು, ಅವುಗಳ ದುರಸ್ತಿ ಮತ್ತು ಮರುನಿರ್ಮಾಣಕ್ಕೆ ಸರ್ಕಾರ ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ವಿನಯ್ ಕುಮಾರ್ ಸೊರಕೆ, ಜಯಾನಂದ ಹೆಗ್ಡೆ, ಕಿಶನ್ ಹೆಗ್ಡೆ ಕೊಳ್ಕೆಬೈಲು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ ಆರೋಗ್ಯ ಕೇಂದ್ರ

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು...

ವಿಜಯಪುರ |ಕೃಷಿ ಮಹಾವಿದ್ಯಾಲಯದಲ್ಲಿ 7 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂದರ್ಶನ

ವಿಜಯಪುರ ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ವಿಷಯಗಳ 7...