ಉಡುಪಿ | ನಕ್ಸಲ್‌ ಪ್ರಕರಣಗಳ ಕುರಿತು ಜಿಲ್ಲಾ ಪೊಲೀಸ್‌ ಪ್ರಕಟಣೆ

Date:

ಉಡುಪಿ ಜಿಲ್ಲೆಯಲ್ಲಿ ನಕ್ಸಲ್‌ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಗಳ ಕುರಿತು ಪೊಲೀಸ್‌ ಹಾಗೂ ನ್ಯಾಯಾಂಗ ವಲಯಗಳಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬಂದಿವೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 68 ನಕ್ಸಲ್‌ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 39 ಪ್ರಕರಣಗಳು ಮಾನ್ಯ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿವೆ. ಉಳಿದಂತೆ 28 ಪ್ರಕರಣಗಳು ವಿಲೇವಾರಿಯಾಗಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

- Advertisement -

ನ್ಯಾಯಾಂಗ ಪ್ರಕ್ರಿಯೆಯ ಭಾಗವಾಗಿ, ಒಂದು ಪ್ರಕರಣದಲ್ಲಿ Split CC (ವಿಭಜಿತ ಆರೋಪಪಟ್ಟಿ) ರೂಪುಗೊಂಡಿದ್ದು, ಇನ್ನೂ ಮೂರು ಆರೋಪಿತರ ವಿರುದ್ಧ ಹೆಚ್ಚುವರಿ ದಾಖಲಾತಿ (Additional Filing) ಸಲ್ಲಿಸಲು ಬಾಕಿ ಇರುವುದು ತಿಳಿದುಬಂದಿದೆ. ಇದಲ್ಲದೆ, ಒಂದು ಪ್ರಕರಣ ಸಿಐಡಿ ತನಿಖೆಯಲ್ಲಿದ್ದು, ವಿಶೇಷ ತನಿಖಾ ತಂಡವು ಅಗತ್ಯ ದಾಖಲೆ ಸಂಗ್ರಹ ಹಾಗೂ ಪುರಾವೆಗಳ ಪರಿಶೀಲನೆ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕಳೆದ ಆರು ತಿಂಗಳ ಅವಧಿಯಲ್ಲಿ, ನ್ಯಾಯಾಂಗ ವಿಚಾರಣೆಯಲ್ಲಿರುವ 39 ಪ್ರಕರಣಗಳಲ್ಲಿ 11 ಮಂದಿ ನಕ್ಸಲ್‌ ಆರೋಪಿತರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಎಲ್ಲ ಪ್ರಕರಣಗಳಲ್ಲಿ ನ್ಯಾಯಾಲಯವು ಚಾರ್ಜ್‌ಫ್ರೇಮ್‌ (ಆರೋಪ ರೂಪಣೆ) ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಇದೀಗ ಪ್ರಕರಣಗಳು ಪೂರ್ಣ ಪ್ರಮಾಣದ ನ್ಯಾಯಾಲಯದ ವಿಚಾರಣೆಯ ಹಂತದಲ್ಲಿವೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 12 22 at 3.24.23 PM 1
WhatsApp Image 2025 12 22 at 3.24.23 PM
WhatsApp Image 2025 12 22 at 3.24.22 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹೂಡೆಯಲ್ಲಿ ನವಜಾತ ಶಿಶು ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ SDPI ಮನವಿ

ಉಡುಪಿ ನಗರದ ಹೂಡೆ ಪ್ರದೇಶದಲ್ಲಿ ಕಳೆದ ಸೆಪ್ಟೆಂಬರ್ 7ರಂದು ನಡೆದ ನವಜಾತ...

ಉಡುಪಿ | ಆದಿದ್ರಾವಿಡ ಸಹಕಾರ ಸಂಘದಿಂದ ಶೇ.15 ಡಿವಿಡೆಂಡ್ ಘೋಷಣೆ

ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ...

ಉಡುಪಿ | ಯುಪಿಐ ವಹಿವಾಟಿಗೆ ತೆರಿಗೆ: ಬಿಜೆಪಿ–ಮೋದಿ ಆಡಳಿತದ ಡೋಂಗಿ ಬಣ್ಣ ಬಯಲು : ಸುರೇಶ್ ಶೆಟ್ಟಿ ಬನ್ನಂಜೆ

ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ...

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಹತ್ಯೆ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿ – ಪೊಲೀಸ್ ಸ್ಪಷ್ಟೀಕರಣ

ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಕೆಲವು...