ಉಡುಪಿ | 22 ವರ್ಷಗಳಿಂದ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಬಂಧನ

Date:

2002ರಲ್ಲಿ ಉಡುಪಿಯ ಕುಕ್ಕಿಕಟ್ಟೆಯಲ್ಲಿ ನಡೆದಿದ್ದ ಮುಖ್ಯ ಶಿಕ್ಷಕ ಮನೋಹರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ, ಕಳೆದ 22 ವರ್ಷಗಳಿಂದ ದುಬೈನಲ್ಲಿ ತಲೆಮರೆಸಿಕೊಂಡಿದ್ದ ರಾಜೇಶ್ ಕೇಶವ ಆಚಾರ್ಯ (51) ಎಂಬಾತನನ್ನು ಪೊಲೀಸರು ಬಂಧಿಸಿ ಭಾರತಕ್ಕೆ ಕರೆತಂದಿದ್ದಾರೆ.

- Advertisement -

2002ರಲ್ಲಿ ಮುಖ್ಯ ಶಿಕ್ಷಕರಾಗಿದ್ದ ಮನೋಹರ ಶೆಟ್ಟಿ ಅವರನ್ನು ವಿನೋದ್ ಶೆಟ್ಟಿಗಾರ್ ಹಾಗೂ ಇತರರೊಂದಿಗೆ ಸೇರಿ ಕೊಲೆಗೈದ ಪ್ರಕರಣದಲ್ಲಿ ಉಡುಪಿಯ ರಾಜೇಶ್ ಕೇಶವ ಆಚಾರ್ಯ ಆರೋಪಿಯಾಗಿದ್ದ. ಈ ಪ್ರಕರಣದಲ್ಲಿ ಈತನನ್ನು ಈ ಹಿಂದೆ ಬಂಧಿಸಲಾಗಿತ್ತು. ಬಳಿಕ ನ್ಯಾಯಾಂಗ ಬಂಧನದಿಂದ ಬಿಡುಗಡೆಯಾಗಿದ್ದ ಆರೋಪಿ, 2004ರಿಂದ ನ್ಯಾಯಾಲಯದ ಮುಂದಿನ ವಿಚಾರಣೆಗೆ ಹಾಜರಾಗದೆ ದುಬೈಗೆ ತೆರಳಿ ತಲೆಮರೆಸಿಕೊಂಡಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ ಅಧಿಕಾರದ ಹಂಚಿಕೆ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಕ್ಷೇತ್ರಗಳ ಗಡಿ ಬದಲಾವಣೆಯಿಂದ ದಲಿತ, ಆದಿವಾಸಿ,...

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

ಕಳೆದ 22 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂಟರ್‌ಪೋಲ್ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಪೊಲೀಸ್, ಮಂಗಳೂರು ಪೊಲೀಸ್ ಹಾಗೂ ಸಿಐಡಿ ಗುಪ್ತಚರ ವಿಭಾಗದ ಪೊಲೀಸರು ದುಬೈನಲ್ಲಿ ಬಂಧಿಸಿ ಭಾರತಕ್ಕೆ ಕರೆತಂದಿದ್ದಾರೆ.

ಬಂಧಿತ ಆರೋಪಿಯನ್ನು ಇಂದು ಉಡುಪಿ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಬಂಡವಾಳಶಾಹಿ ಮತ್ತು ರಾಜಕೀಯದ ಅಪವಿತ್ರ ಮೈತ್ರಿಯ ಕರಾಳ ಮುಖವೇ ಕೋಮುವಾದ: ಎ ನಾರಾಯಣ್‌

ಬಂಡವಾಳಶಾಹಿಗಳು ಮತ್ತು ರಾಜಕೀಯ ಅಧಿಕಾರದ ಮೈತ್ರಿಗಳು ಕೋಮುವಾದಿ ಶಕ್ತಿಗಳ ಜೊತೆ ಮಾಡಿಕೊಂಡಿರುವ...

ಹಿರಿಯ ಕವಯಿತ್ರಿ ಸ. ಉಷಾ ನಿಧನ: ಕನ್ನಡ ಮಹಿಳಾ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ

ಹಿರಿಯ ಕವಯಿತ್ರಿ ಹಾಗೂ ಸಾಹಿತಿ ಸ. ಉಷಾ ಅವರು ಅನಾರೋಗ್ಯದಿಂದ ನಿಧನರಾಗಿರುವುದು...

ಮೈಸೂರಿನಲ್ಲಿ ಮೂರು ಹೊಸ ಕನ್ನಡ ಕಿರುಚಿತ್ರಗಳಿಗೆ ಮುಹೂರ್ತ

ರೋಲಿಂಗ್ ಮೀಡಿಯಾ ಹೌಸ್, ಮೈಸೂರು ಫಿಲ್ಮ್ ಇನ್ಸ್ಟಿಟ್ಯೂಟ್ ಹಾಗೂ ಎಂ.ಟಿ.ಜಿ ಪ್ರೊಡಕ್ಷನ್ಸ್...