ಉಡುಪಿ | ಪ್ರದೀಪ್ ಪೂಜಾರಿ ಸಾವಿನ ಪ್ರಕರಣ: ಮೂರು ಪ್ರಕರಣಗಳ ತನಿಖೆ ಸಿಐಡಿಗೆ ಹಸ್ತಾಂತರ

Date:

ಪೆರ್ಡೂರಿನ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ಆದೇಶ ಹೊರಡಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

- Advertisement -

ಅ.28ರಂದು ಯುವತಿಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಆರೋಪದಡಿ ಪ್ರದೀಪ್ ಪೂಜಾರಿ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದೇ ದಿನ ರಾತ್ರಿ ಪ್ರದೀಪ್ ಪೂಜಾರಿ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿತ್ತು. ಬಳಿಕ ಅ.30ರಂದು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸದಿರುವುದು, ಪೊಲೀಸ್ ಕಸ್ಟಡಿಯಲ್ಲಿ ಸಾವು ಸಂಭವಿಸಿರುವುದು ಹಾಗೂ ಪ್ರಕರಣದ ನಿರ್ವಹಣೆಯಲ್ಲಿ ಲೋಪ ಎಸಗಿದ ಆರೋಪ ಎದುರಿಸುತ್ತಿದ್ದ ಹಿರಿಯಡ್ಕ ಪೊಲೀಸ್ ಉಪನಿರೀಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿ ಮೃತರ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದವು.

ಈ ಹಿನ್ನೆಲೆಯಲ್ಲಿ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಮೂರು ಪ್ರಕರಣಗಳ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಪೊಲೀಸ್ ಇಲಾಖೆ ಆದೇಶಿಸಿದೆ.

ಇದೇ ವೇಳೆ ಪ್ರಕರಣದ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಹಿರಿಯಡ್ಕ ಪೊಲೀಸ್ ಠಾಣೆಯ ಎಸ್ಸೈ ಅವರನ್ನು ಶಿಸ್ತು ಕ್ರಮದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಅಲ್ಲದೆ, ಆಸ್ಪತ್ರೆಯಲ್ಲಿ ಕಾವಲು ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನೂ ಈಗಾಗಲೇ ಅಮಾನತುಗೊಳಿಸಲಾಗಿದೆ.

ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರಿಗೆ ವಹಿಸಲಾಗಿತ್ತು. ತನಿಖೆಯ ವೇಳೆ ಓರ್ವ ಅಪ್ರಾಪ್ತ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ- ಸ್ವಾಗತ : ಶುಭದರಾವ್

ಪ್ರದೀಪ್ ಪೂಜಾರಿ ಆತ್ಮಹತ್ಯೆಯ ಬಗ್ಗೆ ದಿನ‌ ಕಳೆದಂತೆ ಅನೇಕ ಸಂಶಯಗಳು ಹುಟ್ಟಿಕೊಂಡಿದ್ದು...

ಮಂಗಳೂರಿನಲ್ಲಿ ಮುಕ್ತಾಯಗೊಂಡ ಯೂತ್ ಪಾರ್ಲಿಮೆಂಟ್

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್...

ದಕ್ಷಿಣ ಕನ್ನಡ | ನವೆಂಬರ್ 12 ರಂದು ಬೃಹತ್ ಉದ್ಯೋಗ ಮೇಳ

ದಕ್ಷಿಣ ಕನ್ನಡ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಸುಳ್ಯ ಪಂಚ ಗ್ಯಾರಂಟಿಗಳ...

ಮೂಡಬಿದ್ರೆ | ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ಜಮೀಯ್ಯತುಲ್ ಫಲಾಹ್ ಮೂಡಬಿದ್ರೆ ತಾಲೂಕು ಘಟಕದ ವತಿಯಿಂದ 23 ಅರ್ಹ ವಿದ್ಯಾರ್ಥಿಗಳಿಗೆ...