ಉಡುಪಿ | ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ ಸದೃಢ : ಎಸ್ಪಿ ಹರಿರಾಮ್ ಶಂಕರ್

Date:

ಉಡುಪಿ ನಗರದ ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗದ ಪ್ರಯುಕ್ತ ಮಲ್ಪೆ ಬೀಚ್ ನಲ್ಲಿ ಇಂದು ಬೆಳಿಗ್ಗೆ ಬೀಚ್ ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಯಿತು.

- Advertisement -

ಕ್ರೀಡೋತ್ಸವಕ್ಕೆ ಚಾಲನೆ ನೀಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ಮಕ್ಕಳು ಮೊಬೈಲ್ ಅನ್ನು ಪಕ್ಕಕ್ಕಿಟ್ಟು ಲಗೋರಿಯಂತಹ ಕ್ರೀಡಾ ಚಟುವಟಿಕೆಗಳಲ್ಲಿ‌ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢಗೊಳ್ಳುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...
1010899593

ಮಹಾರುದ್ರಯಾಗದ ಜೊತೆ ಕ್ರೀಡೆಯಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿರುವುದು ಬಹಳ ಸಂತೋಷದ ವಿಚಾರ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ಆಯೋಜನೆಗೊಳ್ಳಬೇಕು. ಇದಕ್ಕೆ ಪೊಲೀಸ್ ಇಲಾಖೆಯ ಸಹಕಾರ, ಪ್ರೋತ್ಸಾಹ ಸದಾ ಇರಲಿದೆ ಎಂದರು.

ಮಹಾರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಸಾಮಾಜಿಕ ಬದ್ಧತೆಯನ್ನು ಕಲಿಸಬೇಕು. ಕರಾವಳಿ ಜಿಲ್ಲೆಯ ಮಕ್ಕಳ ಶಿಕ್ಷಣಕ್ಕೆ ತಕ್ಕಂತೆ ಉದ್ಯೋಗ ಲಭಿಸುತ್ತಿಲ್ಲ. ಮಕ್ಕಳನ್ನು ವಿದ್ಯಾವಂತರನ್ನಾಗಿ‌ ಮಾಡುವುದರ ಜೊತೆ ಅವರಿಗೆ ಸೂಕ್ತ ಉದ್ಯೋಗ ಕಲ್ಪಿಸುವ ಕೆಲಸ ಆಗಬೇಕು. ಆ ನಿಟ್ಟಿನಲ್ಲಿ ನಾಳೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದೇವೆ. ಏಳೂವರೆ ಸಾವಿರ ಉದ್ಯೋಗ ಅವಕಾಶಗಳು ಲಭ್ಯವಿರಲಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ಕಲಿತಿರುವ ಮಕ್ಕಳಿಗೆ ಹೆಚ್ಚು‌ ಆದ್ಯತೆ ಸಿಗುವ ಉದ್ಯೋಗವನ್ನು ಕಲ್ಪಿಸುತ್ತಿದ್ದೇವೆ ಎಂದರು.
ಕ್ರೀಡಾ ಸಮಿತಿ ಸಂಚಾಲಕ ಶಾನ್ ರಾಜ್ ಕೋಟ್ಯಾನ್, ಸಮಾಜ ಸೇವಕ ಪಾಡುರಂಗ ಮಲ್ಪೆ, ಸಮಿತಿಯ ಸಂಚಾಲಕರಾದ ತಾರಾನಾಥ ಪೂಜಾರಿ, ನಂದಕಿಶೋರ್ ಮೊದಲಾದವರು‌ ಉಪಸ್ಥಿತರಿದ್ದರು. ಸತೀಶ್ ಚಿತ್ರಾಪುರ ಕಾರ್ಯಕ್ರಮ ನಿರೂಪಿಸಿದರು.

ಲಗೋರಿ, ಕೈರಂಪಣಿ ಬಲೆ ಬೀಸುವ ಸ್ಪರ್ಧೆ, ಮರಳಿನಲ್ಲಿ ಶಿವನ ಕಲಾಕೃತಿ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...