ಉಡುಪಿ | ವಿದ್ಯಾರ್ಥಿಗಳ ಮೇಲಿನ ಕ್ರೂರ ಲಾಠಿ ಚಾರ್ಜ್ ಖಂಡನೀಯ : ಪ್ರಶಾಂತ್ ಜತ್ತನ್ನ

Date:

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸದೆ ಇರುವುದು ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ತಿಂಗಳಿಗೂ ಹೆಚ್ಚು ಕಾಲ ನಡೆದ ಹೋರಾಟದ ಕುರಿತು ಮೋದಿ ಸರ್ಕಾರ ತೋರಿದ ಸರ್ವಾಧಿಕಾರಿ ಧೋರಣೆ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಲಾಠಿ ಪ್ರಹಾರ ಮತ್ತು ಅಶ್ರುವಾಯು ಪ್ರಯೋಗ ನಡೆಸಿರುವುದು ಖಂಡನೀಯ ಎಂದು ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತ್ ಜತ್ತನ್ನ ತೀವ್ರವಾಗಿ ಖಂಡಿಸಿದ್ದಾರೆ.

- Advertisement -

ನೀಟ್ ಪರೀಕ್ಷೆಯ ಅಕ್ರಮಗಳಿಂದಾಗಿ ದೇಶದಲ್ಲಿ ಸುಮಾರು 30 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾವಿಗೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಉತ್ತರಿಸದಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರೇ ನೇರ ಹೊಣೆ ಹೊರಬೇಕು. ದೇಶದ ಯುವಜನರು ಬೆರಳಿನಿಂದ ಮತ ಹಾಕಿದರೆ, ಬಿಜೆಪಿ ಸರ್ಕಾರ ಆ ಯುವಕರ ಬೆರಳನ್ನೇ ಮುರಿಯುವ ಕೆಲಸ ಮಾಡುತ್ತಿದೆ
ನೀಟ್ ಸೇರಿದಂತೆ ಸೂಕ್ಷ್ಮ ವಿಷಯದ ಬಗ್ಗೆ ಚರ್ಚೆಗೆ ಸಂಸತ್ತಿನಲ್ಲಿ ಅವಕಾಶ ನೀಡುತ್ತಿಲ್ಲ. ಪ್ರತಿಪಕ್ಷದವರುವರು ಮಾತನಾಡಲು ನಿಂತರೆ ಅವರನ್ನು ಆಡಳಿತ ಪಕ್ಷದವರು ಹಗುರವಾಗಿ ನಡೆದುಕೊಳ್ಳುತ್ತಾರೆ. ಹೋರಾಟಕ್ಕೆ ಯಾವುದೇ ಜಾತಿ, ಮತ, ಧರ್ಮವಿಲ್ಲ. ದೇಶದ ಯುವಕರು ತಮ್ಮ ಭವಿಷ್ಯಕ್ಕಾಗಿ ನಡೆಸುತ್ತಿರುವ ಈ ಹೋರಾಟಕ್ಕೆ ಪ್ರತಿಯೊಬ್ಬರ ಬೆಂಬಲ ಅಗತ್ಯವಾಗಿದೆ. ಬಿಜೆಪಿ ಭಾವನಾತ್ಮಕವಾಗಿ ಯುವಕರನ್ನು ಬಳಸಿಕೊಳ್ಳುತ್ತಿದೆ ಆದರೆ ಅದೇ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದೆ. ಅಂತಹ ಪ್ರತಿಭಟನೆ ನಡೆಸಿದ ಸೋನಮ್ ವಾಂಗ್ಚುಕ್ ಅವರನ್ನು ಬಂಧಿಸಿರುವುದು, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ಸರಿಯಲ್ಲ.
ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಕೇಂದ್ರ ಸರಕಾರ ತನ್ನ ಹಠಮಾರಿ ಧೋರಣೆಯನ್ನು ಕೈಬಿಟ್ಟು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಡೆಯಬೇಕು. ದೇಶದ ಯುವಜನರ ಭವಿಷ್ಯದ ಕನಸುಗಳನ್ನು ಚಿವುಟುವ ಕಾರ್ಯವನ್ನು ಮುಂದುವರೆಸಿದರೆ ಇದನ್ನು ದೇಶದ ಜನತೆ ಗಮನಿಸುತ್ತಿದ್ದು ಮುಂಬರುವ ದಿನದಲ್ಲಿ ಕೇಂದ್ರ ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ.

ಸರ್ಕಾರವು ಪ್ರಜಾಪ್ರಭುತ್ವ ಮೌಲ್ಯಗಳನ್ನು ಗೌರವಿಸಿ ಸೋನಮ್ ವಾಂಗ್ಚುಕ್ ಅವರ ವಿರುದ್ಧ ಕೈಗೊಂಡಿರುವ ಕ್ರಮ ಕೂಡಲೇ ಹಿಂಪಡೆಯಬೇಕು. ಪ್ರತಿಭಟನಾಕಾರರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯುವ ಜತೆಗೆ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ |ಬೀಳಗಿಯಲ್ಲಿ ಜಾನಪದ ಸಂಭ್ರಮ: 20 ಚೌಡಕಿ ಗಾಯನ ತಂಡಗಳಿಂದ ಸಾಂಪ್ರದಾಯಿಕ ಹಾಡುಗಳ ಅನಾವರಣ

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ, ಲಿಂಗೈಕ್ಯ...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ...

ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ...

ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ...