ಉಡುಪಿ | ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದ ಪಾತ್ರ ಮುಖ್ಯ: ಡಿಎಫ್‌ಓ ಸಿವರಾಮ್ ಬಾಬು

Date:

ಪರಿಸರ ದಿನಾಚರಣೆ ಎಂಬುದು ಕೇವಲ ಒಂದೇ ದಿನದಲ್ಲಿ ಮಾಡುವ ಆಚರಣೆಯಲ್ಲ. ಪ್ರತಿದಿನ ಮಾಡಬೇಕಾದ ಕಾರ್ಯ. ಒಂದು ದಿನ ಗಿಡ ನೆಟ್ಟರೆ ಸಾಲದು, ಅದನ್ನು ಪ್ರತಿದಿನ ಪೋಷಿಸಬೇಕು. ಅದೇ ರೀತಿ ಪರಿಸರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೂಡ ಮಾಡಬೇಕು. ಇದರಲ್ಲಿ ಮಾಧ್ಯಮದವರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ. ಹೇಳಿದ್ದಾರೆ.

- Advertisement -

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಪತ್ರಿಕಾ ಭವನದ ಆವರಣದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇಡೀ ಪರಿಸರ ವ್ಯವಸ್ಥೆಯ ಪ್ರತಿಯೊಂದು ಕೂಡ ಬಹಳ ಮುಖ್ಯವಾಗಿ ರುತ್ತದೆ. ಒಂದು ಅಳಿದು ಹೋದರೂ ಅದರ ಪ್ರಾಮುಖ್ಯತೆ ನಮಗೆ ಅರ್ಥ ಆಗುತ್ತದೆ. ಹಾಗಾಗಿ ನಾವು ಇಡೀ ಪರಿಸರ ವ್ಯವಸ್ಥೆಯನ್ನು ಕಾಪಾಡ ಬೇಕಾಗುತ್ತದೆ. ಇಂದು ಮುಂಗಾರು ತುಂಬಾ ಕ್ಷಿಣಿಸಿ ಶೇ.೬೦ರಷ್ಟು ಮಳೆ ಕಡಿಮೆ ಆಗಿದೆ. ಇದಕ್ಕೆ ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಯೇ ಕಾರಣವಾಗಿದೆ. ಆದುದರಿಂದ ಪರಿಸರವನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

1011362240

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿದರು. ಸಂಘದ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಪತ್ರಿಕಾ ಭವನ ಸಮಿತಿಯ ಸಹಸಂಚಾಲಕ ಗಣೇಶ್ ಕಲ್ಯಾಣ ಪುರ, ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಂಘದ ಸದಸ್ಯ ಅಜಿತ್ ಆರಾಡಿ ವಂದಿಸಿದರು. ಯಶೋಧಾ ಕೇಶವ ಕಾರ್ಯಕ್ರಮ ನಿರೂಪಿಸಿದರು. ಪತ್ರಿಕಾ ಭವನದ ಸುತ್ತಮುತ್ತ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಈ ಸಸಿಗಳ ಪ್ರಾಯೋಜಕತ್ವವನ್ನು ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...