ಉಡುಪಿ | ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ: ಸದಸ್ಯತ್ವದ ಕಾರ್ಡ್ ವಿತರಣೆ

Date:

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ ಉಡುಪಿ, ಜಿಲ್ಲಾ ಸರ್ವೇಕ್ಷಣ ಘಟಕ(ಎನ್‌ಸಿಡಿ), ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ, ಆದರ್ಶ ಆಸ್ಪತ್ರೆ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ ಇವುಗಳ ಸಹಯೋಗದೊಂದಿಗೆ ಪತ್ರಕರ್ತರಿಗೆ ಉಚಿತ ಆರೋಗ್ಯ ಶಿಬಿರವನ್ನು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.

- Advertisement -

ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸಂಘದ 2026-27ನೇ ಸಾಲಿನ ಸದಸ್ಯತ್ವ ಕಾರ್ಡ್‌ಗಳನ್ನು ವಿತರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...
1011432000

ಜಿಲ್ಲಾ ಸರ್ಜನ್ ಡಾ.ಎಚ್.ಅಶೋಕ್ ಮಾತನಾಡಿ, ಒತ್ತಡದ ವೃತ್ತಿ ಬದುಕಿನಲ್ಲಿರುವ ಪತ್ರಕರ್ತರು ದಿನಕ್ಕೆ 45 ನಿಮಿಷ ವ್ಯಾಯಮ, ವಾಕಿಂಗ್‌ಗೆ ಮೀಸಲಿರಿಸಬೇಕು. ಈ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಬೇಕು. ಪ್ರತಿ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆಯನ್ನು ಮಾಡಬೇಕು ಎಂದು ಹೇಳಿದರು.

ವಾರ್ತಾಧಿಕಾರಿ ಮಂಜುನಾಥ್ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ಜಿಲ್ಲಾ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ, ವಂದಿಸಿದರು. ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಕಾರ್ಯಕ್ರಮ ನಿರೂಪಿಸಿದರು.

1011432001

ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಇಸಿಜಿ, ಹಿಮೋಗ್ಲೋಬಿನ್ ಪರೀಕ್ಷೆ, ಕೊಲೆಸ್ಟ್ರಾಲ್, ಕಣ್ಣಿನ ಪರೀಕ್ಷೆಗಳನ್ನು ನಡೆಸಲಾಯಿತು. ಅಸಾಂಕ್ರಮಿಕ ರೋಗಿಗಳ ಬಗ್ಗೆ ಜೀವನ ಶೈಲಿ ಮಾರ್ಪಡು ಬಗ್ಗೆ ಮಾಹಿತಿ, ಪಿಜಿಯೋ ಥೆರಪಿ, ತಂಬಾಕು ದುಷ್ಪಾರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಶಿಬಿರದಲ್ಲಿ 100 ಕ್ಕೂ ಅಧಿಕ ಪತ್ರಕರ್ತರು ಭಾಗವಹಿಸಿ ಪ್ರಯೋಜನ ಪಡೆದು ಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...