ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

Date:

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಐದನೇ ಶಾಖೆ ನಗರದ ಮಿಷನ್ ಕಂಪೌಂಡ್ ರಸ್ತೆಯ ಸನಿಲ್ ಪ್ಲಾಜಾ ಕಟ್ಟಡದಲ್ಲಿ ರವಿವಾರ ಉದ್ಘಾಟನೆಗೊಂಡಿತು.

- Advertisement -
WhatsApp Image 2026 10 25 at 7.59.53 PM 1

ಮೂಲ್ಕಿ ಸೀಮೆ ಅರಮನೆಯ ಅರಸ ಎಂ. ದುಗ್ಗಣ್ಣ ಸಾವಂತ್ ಅವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಹಕಾರಿ ಸಂಸ್ಥೆಗಳು ತಮ್ಮ ಲಾಭದ ಒಂದು ಭಾಗವನ್ನು ಸಾಮಾಜಿಕ ಹಾಗೂ ಶೈಕ್ಷಣಿಕ ಸೇವೆಗಳಿಗೆ ವಿನಿಯೋಗಿಸುವ ಮೂಲಕ ಇತರ ಸಂಸ್ಥೆಗಳಿಗೆ ಮಾದರಿಯಾಗಬೇಕು ಎಂದರು. ಸಂಸ್ಥೆಯ ಅಧ್ಯಕ್ಷ ಎಚ್. ವಸಂತ್ ಬೆರ್ನಾರ್ಡ್ ಹಾಗೂ ಸಿಬ್ಬಂದಿ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ಸಂಸ್ಥೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತಗೊಳಿಸದೆ ರಾಜ್ಯಮಟ್ಟದಲ್ಲಿ ವಿಸ್ತರಿಸುವಂತಾಗಲಿ ಎಂದು ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...
WhatsApp Image 2026 10 25 at 7.59.54 PM 1

ಮಾಜಿ ಸಚಿವ ಅಭಯಚಂದ್ರ ಜೈನ್ ದೀಪ ಪ್ರಜ್ವಲಿಸಿ ಮಾತನಾಡಿ, ಕೇವಲ ಐದು ವರ್ಷಗಳಲ್ಲಿ ಐದು ಶಾಖೆಗಳನ್ನು ಆರಂಭಿಸಿರುವುದು ಗಮನಾರ್ಹ ಸಾಧನೆ. ಅಧ್ಯಕ್ಷ ವಸಂತ್ ಬೆರ್ನಾರ್ಡ್, ನಿರ್ದೇಶಕರು ಹಾಗೂ ಸಿಬ್ಬಂದಿಯ ಪ್ರಾಮಾಣಿಕ ಪರಿಶ್ರಮದಿಂದ ಸಂಸ್ಥೆ ಅಭಿವೃದ್ಧಿ ಹೊಂದುವುದರ ಜತೆಗೆ ಹಲವರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ ಎಂದರು.

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಕೆಲವೊಮ್ಮೆ ಹೆಚ್ಚು ಸಮಯ ಕಾಯಬೇಕಾಗುತ್ತದೆ. ಆದರೆ ಸಹಕಾರಿ ಸಂಸ್ಥೆಗಳು ಗ್ರಾಹಕರ ಅಗತ್ಯಗಳಿಗೆ ತ್ವರಿತವಾಗಿ ಸ್ಪಂದಿಸಿ ಸಾಲ ಸೌಲಭ್ಯಗಳನ್ನು ಒದಗಿಸುವ ಮೂಲಕ ನೆರವಾಗುತ್ತವೆ. ಪ್ರಿಯದರ್ಶಿನಿ ಸೊಸೈಟಿ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು.

WhatsApp Image 2026 10 25 at 7.59.54 PM

ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಡಾ. ಐಕಳ ಬಾವ ದೇವಿಪ್ರಸಾದ ಶೆಟ್ಟಿ ಅವರು ಪ್ರಿಯದರ್ಶಿನಿ ಸ್ವಸಹಾಯ ಗುಂಪಿಗೆ ಚಾಲನೆ ನೀಡಿ ಮಾತನಾಡಿ, ಗ್ರಾಹಕರು ಸಂಸ್ಥೆಗೆ ಬಂದಾಗ ಪ್ರೀತಿಯಿಂದ ಸೇವೆ ನೀಡುವುದೇ ಪ್ರಿಯದರ್ಶಿನಿಯ ಪ್ರಮುಖ ಉದ್ದೇಶವಾಗಿದೆ ಎಂದರು.

ಪರಸ್ಪರ ಸಹಕಾರ ಮತ್ತು ಸಹಾಯ ಸಹಕಾರಿ ತತ್ವದ ಮೂಲ ಆಶಯ. ಈ ತತ್ವವನ್ನು ಮೈಗೂಡಿಸಿಕೊಂಡು ವಸಂತ್ ಬೆರ್ನಾರ್ಡ್ ಅವರು ಹಳೆಯಂಗಡಿಯಲ್ಲಿ ಸಂಸ್ಥೆಯನ್ನು ಸ್ಥಾಪಿಸಿ ಜನರ ವಿಶ್ವಾಸ ಗಳಿಸಿದ್ದಾರೆ. ಮಹಿಳೆಯರ ಸ್ವಾವಲಂಬನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸ್ವಸಹಾಯ ಗುಂಪುಗಳನ್ನು ರಚಿಸಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

WhatsApp Image 2026 10 25 at 7.59.55 PM

ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಸಂಸ್ಥೆಯೊಂದನ್ನು ಆರಂಭಿಸುವುದಕ್ಕಿಂತ ಅದನ್ನು ನಿರಂತರವಾಗಿ ಮುನ್ನಡೆಸುವುದು ಸವಾಲಿನ ಕೆಲಸ. ಇಂತಹ ಸಂದರ್ಭದಲ್ಲಿ ಪ್ರಿಯದರ್ಶಿನಿ ಸೊಸೈಟಿ ಉಡುಪಿಯಲ್ಲಿ ಶಾಖೆ ಆರಂಭಿಸಿರುವುದು ಸಂತಸದ ವಿಚಾರ. ಸಂಸ್ಥೆ ಇನ್ನಷ್ಟು ಶಾಖೆಗಳನ್ನು ತೆರೆದು ಬೆಳೆಯಲಿ ಎಂದು ಹಾರೈಸಿದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಶುಭ ಹಾರೈಸಿದರು. ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್., ಉಡುಪಿ ಜಿಲ್ಲಾ ಕೇಂದ್ರ ಸಹಕಾರಿ ಯೂನಿಯನ್ ಹಾಗೂ ಬಡಗಬೆಟ್ಟು ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಪಡುಕುತ್ಯಾರ್ ಸರಸ್ವತಿ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಬಿ. ಸೂರ್ಯಕುಮಾರ್, ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ, ಹೈಟೆಕ್ ಮೆಡಿಕೇರ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಟಿ.ಎಸ್. ರಾವ್, ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಶ್ರೀಧರ್ ದೇವಾಡಿಗ, ಡಾ. ಬೆರಿಲ್ ಎ. ಬೆರ್ನಾರ್ಡ್, ಮೂಲ್ಕಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷೆ ಶರ್ಲಿ ಸುಮಾಲಿನಿ ಹಾಗೂ ಕಟ್ಟಡದ ಮಾಲಕ ಶಂಭು ಎ. ಸನಿಲ್ ಮುಖ್ಯ ಅತಿಥಿಗಳಾಗಿದ್ದರು.

WhatsApp Image 2026 10 25 at 7.59.55 PM 2

ಸೊಸೈಟಿಯ ಅಧ್ಯಕ್ಷ ಎಚ್. ವಸಂತ್ ಬೆರ್ನಾರ್ಡ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪೂಜಾರಿ ವಂದಿಸಿದರು. ಪ್ರಕಾಶ್ ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿಸಿದರು.

ಸಂಸ್ಥೆಯ ಉಪಾಧ್ಯಕ್ಷ ವಿಜಯಕುಮಾರ್ ಸನಿಲ್, ನಿರ್ದೇಶಕರಾದ ಉಮಾನಾಥ್ ಜೆ. ಶೆಟ್ಟಿಗಾರ್, ಧನಂಜಯ ಮಟ್ಟು, ಗೌತಮ್ ಜೈನ್, ಗಣೇಶ ಪ್ರಸಾದ್ ದೇವಾಡಿಗ, ಜೈಕೃಷ್ಣ ಕೋಟ್ಯಾನ್, ಡಾ. ಶೆರಿಲ್ ಆಯೋನಾ ಐಮನ್, ರೇಖಾ ಶೆಟ್ಟಿ, ಹರೀಶ್ ಎನ್. ಪುತ್ರನ್, ನವೀನ್ ಸಾಲ್ಯಾನ್, ಮೋಹನದಾಸ್, ಅನಿಲ್ ಪೂಜಾರಿ, ರಜಿಯಾ ಭಾನು, ಕರಿಯ ಕಾಡಿಗ, ಶಾಖಾ ಪ್ರಬಂಧಕಿ ನಿಶಾ ಸುಹೈಲ್ ಡೇನಿಯಲ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

WhatsApp Image 2026 10 25 at 7.59.55 PM 1
eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಪ್ರಧಾನ ಕಚೇರಿ ಉದ್ಘಾಟನೆ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಅನೇಕ ಪ್ರತಿಷ್ಠಿತ ಹಣಕಾಸು ಸಂಸ್ಥೆಗಳ ತವರೂರಾಗಿದ್ದು,...

ಕುಡಚಿ–ಬಾಗಲಕೋಟೆ ರೈಲು ಮಾರ್ಗ ಕಾಮಗಾರಿ ವಿಳಂಬ: ಶೀಘ್ರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ

ಕುಡಚಿ–ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯಲ್ಲಿ ರೈಲ್ವೆ ಇಲಾಖೆ ವಿಳಂಬ ಮಾಡುತ್ತಿರುವುದು ಹಾಗೂ...

ಹಾವೇರಿ | ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಬೋಗಸ್ ಮತದಾನ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ

"​ಇತ್ತೀಚೆಗೆ ಜರುಗಿದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಾವೇರಿ ನಗರದ ಮತಗಟ್ಟೆ...

ಬಾಗಲಕೋಟೆ | ಎರಡು ಎಕರೆ ಜಮೀನಿಗಾಗಿ ಅತ್ತಿಗೆ ಮೇಲೆ ಬುಲೆರೊ ಹಾಯಿಸಿ ಕೊಲೆ ಯತ್ನ!

ಬೆಟ್ಟದಷ್ಟು ಆಸ್ತಿ ಇದ್ದರೂ ಎರಡು ಎಕರೆ ಜಮೀನಿನ ವಿವಾದಕ್ಕೆ ರಕ್ತಸಂಬಂಧವನ್ನೇ ಮರೆತು...