ಉಡುಪಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಹೋರಾಟ ಮುಂದುವರಿಕೆ: ಯಾತ್ರಿ ಸಂಘ ನಿರ್ಧಾರ

Date:

ಉಡುಪಿ ರೈಲ್ವೆ ಯಾತ್ರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಧೀರಜ್ ಎನ್. ಶಾಂತಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಉಡುಪಿಯ ಹಿಂದಿ ಪ್ರಚಾರ ಸಭಾಭವನದಲ್ಲಿ ನಡೆಯಿತು.

- Advertisement -

ಭಾರತದಲ್ಲಿ ರೈಲು ಸಂಪರ್ಕ ಆರಂಭಗೊಂಡು ಸುಮಾರು ಒಂದು ಶತಮಾನದ ಬಳಿಕ ಉಡುಪಿಗೆ ರೈಲ್ವೆ ಸಂಪರ್ಕದ ಭಾಗ್ಯ ದೊರೆತಿದೆ. ರೈಲ್ವೆ ನಿಲ್ದಾಣದ ಅಭಿವೃದ್ಧಿಯ ದೃಷ್ಟಿಯಿಂದ ದೇಶದ ಪ್ರಮುಖ ರೈಲ್ವೆ ನಿಲ್ದಾಣಗಳ ಗುಣಮಟ್ಟವನ್ನು ತಲುಪುವ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳು ಆಶಾದಾಯಕವಾಗಿವೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯನ್ನು ಉಡುಪಿ ರೈಲ್ವೆ ನಿಲ್ದಾಣದಲ್ಲಿ ಅನುಷ್ಠಾನಗೊಳಿಸಿ, ಕಾಮಗಾರಿಗಳನ್ನು ಶೀಘ್ರ ಆರಂಭಿಸುವಂತೆ ಒತ್ತಾಯಿಸಲು ಸಂಘದ ಹೋರಾಟವನ್ನು ಮುಂದುವರಿಸಲು ಸಭೆ ಸರ್ವಾನುಮತದಿಂದ ನಿರ್ಣಯ ಕೈಗೊಂಡಿತು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸುವ ಮತ್ತು ನಿರಂತರವಾಗಿ ಒತ್ತಡ ಹೇರುವ ಪ್ರಕ್ರಿಯೆಯನ್ನು ಮುಂದುವರಿಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಸಂಘದ ನಿರ್ದೇಶಕರು ಹಾಗೂ ಸದಸ್ಯರಾದ ಸದಾನಂದ ಅಮೀನ್, ರಾಧಾಕೃಷ್ಣ ರಾವ್, ಜಯರಾಮ್ ಪ್ರಭು, ರತ್ನಶ್ರೀ ಆಚಾರ್ಯ, ಹೇಮನಾಥ ಹೆಗ್ಡೆ, ಪಿ.ಎನ್. ರವೀಂದ್ರ, ಅಪ್ರಾಯ ಶೆಟ್ಟಿಗಾರ್, ಮಹಮ್ಮದ್ ಮೌಲಾ, ಶ್ರೀನಿವಾಸ ಶೆಟ್ಟಿ ತೊನ್ಸೆ, ರವೀಶ್ ಕೋಟ್ಯಾನ್, ರವಿ ಪೂಜಾರಿ ಹಿರಿಯಡ್ಕ, ತಿಲಕನಾಥ್ ಮಂಜೇಶ್ವರ, ಐವಾನ್ ಡಿಸೋಜ, ನಾರಾಯಣ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಯು. ಅಜಿತ್ ಕುಮಾರ್ ಶೆಣೈ ಲೆಕ್ಕಪತ್ರಗಳನ್ನು ಮಂಡಿಸಿದರು. ನಿರ್ದೇಶಕ ಜನಾರ್ದನ್ ಕೋಟ್ಯಾನ್ ಸ್ವಾಗತಿಸಿದರು. ಜಾನ್ ರೆಬೆಲ್ಲೊ ವಂದಿಸಿದರು. ಪ್ರಭಾಕರ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...

ವಿಜಯನಗರ | ಮಹಿಳೆಯ ಬ್ಯಾಗ್‌ನಿಂದ ₹50 ಸಾವಿರ ಹಣ ಕಳವು

ಹಗರಿಬೊಮ್ಮನಹಳ್ಳಿ ಪಟ್ಟಣದ ಬಸವೇಶ್ವರ ಬಜಾರ್‌ನ ಸ್ಟೇಟ್ ಬ್ಯಾಂಕ್‌ನಿಂದ ಹಣ ತೆಗೆದುಕೊಂಡು ಬರುತ್ತಿರುವ...