ಉಡುಪಿ | ವಿಜ್ಞಾನ ಬರಹಕ್ಕೆ ಸ್ಪಷ್ಟತೆಯಿತ್ತವರು ಕಾರಂತರು : ರಘುನಂದನ

Date:

ಸಾಹಿತ್ಯ, ವಿಜ್ಞಾನ ಮತ್ತು ಪರಿಸರದ ಬಗ್ಗೆ ಡಾ. ಕೋಟ ಶಿವರಾಮ ಕಾರಂತರಿಗೆ ಅಪಾರ ಕಾಳಜಿ ಇತ್ತು. ನಮ್ಮ ನಾಡು, ಕಾಡು ಹಾಗೂ ಇಡೀ ಲೋಕದ ಬಗ್ಗೆ ಅವರಿಗಿದ್ದ ಬದ್ಧತೆಯ ಕಾರಣದಿಂದಲೇ ವಿಶ್ವ ಪರಿಸರ ಸಂಘಟನೆಯ ಎರಡು ಮಹತ್ವದ ವರದಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದರು. ವಿಜ್ಞಾನ ಕುರಿತ ಬರಹಗಳು ಹೇಗೆ ಸರಳ, ಸ್ಪಷ್ಟ ಮತ್ತು ಓದುಗರಿಗೆ ಅರ್ಥವಾಗುವಂತೆ ಇರಬೇಕು ಎಂಬುದನ್ನು ಕಾರಂತರು ತಮ್ಮ ಕೃತಿಗಳ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಕವಿ, ನಾಟಕಕಾರ ಹಾಗೂ ನಿರ್ದೇಶಕ ರಘುನಂದನ ಹೇಳಿದರು.

- Advertisement -

ಡಾ. ಶಿವರಾಮ ಕಾರಂತ ಟ್ರಸ್ಟ್, ಉಡುಪಿ ಜಿಲ್ಲೆ ಹಾಗೂ ರಥಬೀದಿ ಗೆಳೆಯರು (ರಿ.), ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ರೆಡ್ ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ನಡೆದ ತಮ್ಮ ಹೊಸ ಕೃತಿ **‘ಎಮ್ಮವರು ಬೆಸಗೊಂಡರೆ ಮದುವೆಯಾಗಲಿ ಹೀಗೆ’ ಪುಸ್ತಕ ವಾಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ತಮ್ಮ ಕೃತಿಯ ಕುರಿತು ಮಾತನಾಡಿದ ರಘುನಂದನ, ‘ಎಮ್ಮವರು ಬೆಸಗೊಂಡರೆ ಮದುವೆಯಾಗಲಿ ಹೀಗೆ’ ಕೃತಿಯ ಆಕೃತಿ ಮತ್ತು ವಸ್ತು ಪರಸ್ಪರ ಪೂರಕವಾಗಿವೆ. ಪಂಚಭೂತಗಳಾದ ಮಣ್ಣು, ನೀರು, ಬೆಂಕಿ, ಗಾಳಿ ಮತ್ತು ಆಕಾಶದ ಕುರಿತ ಪ್ರಾಕೃತಿಕ ಕಾಳಜಿಯನ್ನು ಕೇಂದ್ರವಾಗಿಟ್ಟುಕೊಂಡು ಹೊಸ ತಲೆಮಾರಿನ ಯುವಜನರು ಮದುವೆ ಹಾಗೂ ಬದುಕಿನ ಕುರಿತು ಹೊಸ ದೃಷ್ಟಿಕೋನ ಹೊಂದುವಂತೆ ಈ ಕೃತಿಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

WhatsApp Image 2026 07 31 at 10.44.35 PM

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಆಶಯ ಭಾಷಣ ಮಾಡಿದರು.

ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಸ್ವಾಗತಿಸಿದರು. ರಥಬೀದಿ ಗೆಳೆಯರು ಉಡುಪಿ ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್, ಕಾರ್ಯದರ್ಶಿ ಸುಬ್ರಹ್ಮಣ್ಯ ಜೋಷಿ ಉಪಸ್ಥಿತರಿದ್ದರು. ಸಂತೋಷ್ ನಾಯಕ್ ಪಟ್ಲ ಕಾರ್ಯಕ್ರಮ ನಿರೂಪಿಸಿದರು.

ಇದಾದ ಬಳಿಕ ರಘುನಂದನ ಅವರು ತಮ್ಮ ‘ಎಮ್ಮವರು ಬೆಸಗೊಂಡರೆ ಮದುವೆಯಾಗಲಿ ಹೀಗೆ’ ಕೃತಿಯ ಆಯ್ದ ಭಾಗಗಳ ವಾಚನ ನಡೆಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ...

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು...

ವಿಜಯಪುರ | ಡಾ. ಅಣ್ಣಾಭಾವು ಸಾಠೆ ಅವರಿಗೆ ‘ಭಾರತ ರತ್ನ’ ನೀಡಿ; ರಾಜ್ಯದಲ್ಲಿ ಜಯಂತಿ ಆಚರಿಸಿ

ಲೋಕಶಾಹಿರ ಡಾ. ಅಣ್ಣಾಭಾವು ಸಾಠೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ...

ರಾಯಚೂರು | ರಕ್ತನಿಧಿ ಕೇಂದ್ರ ಸ್ಥಾಪನೆ ಜೀವ ರಕ್ಷಣೆಯ ಮಹತ್ವದ ಕಾರ್ಯ: ಸಂಸದ ಜಿ.ಕುಮಾರ ನಾಯಕ

ರಕ್ತ ನಿಧಿ ಕೇಂದ್ರ ಬಹಳ ಅವಶ್ಯಕವಾಗಿದ್ದು ಇಂತಹ ಮಹತ್ವದ ಕಾರ್ಯಗಳು ಜನರ...