ಉಡುಪಿ | ರಿಫಾ ಚೇಂಬರ್‌ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ವತಿಯಿಂದ ಆರೋಗ್ಯ ಜಾಗೃತಿ, ನವೋದ್ಯಮ ಯೋಜನೆಗಳ ಪರಿಚಯ

Date:

ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಉಡುಪಿ ವಲಯದ ಮಾಸಿಕ ಸಭೆಯು ಬುಧವಾರ ಮಣಿಪಾಲ ಇನ್ ಹೋಟೆಲ್‌ನಲ್ಲಿ ನಡೆಯಿತು.

- Advertisement -

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನ್ಯಾಚುರೋಪತಿ ಮತ್ತು ಆಯುರ್ವೇದ ತಜ್ಞ ಡಾ. ಮೊಹಮ್ಮದ್ ರಫೀಕ್ ಮಾತನಾಡಿ, ಇಂದಿನ ಉದ್ಯಮಿಗಳು ಮತ್ತು ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ಪ್ರಮುಖ ಸವಾಲು ಒತ್ತಡ (ಸ್ಟ್ರೆಸ್) ಆಗಿದ್ದು, ಸಂಪತ್ತಿನ ಸೃಷ್ಟಿ ಮತ್ತು ವ್ಯವಹಾರದ ಒತ್ತಡಗಳ ನಡುವೆ ಆರೋಗ್ಯವನ್ನು ನಿರ್ಲಕ್ಷಿಸುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ತಿಬ್-ಎ-ನಬವಿ (ಪ್ರವಾದಿ ವೈದ್ಯಶಾಸ್ತ್ರ)ಯ ಮಹತ್ವವನ್ನು ವಿವರಿಸಿದ ಅವರು, ಪ್ರವಾದಿ ಮುಹಮ್ಮದ್ ಅವರ ಜೀವನ ಮಾರ್ಗದರ್ಶನವನ್ನು ಅನುಸರಿಸುವ ಮೂಲಕ ದೈಹಿಕ, ಮಾನಸಿಕ, ಭಾವನಾತ್ಮಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು. ಆರೋಗ್ಯಕರ ಜೀವನಶೈಲಿಗೆ ಸಂಬಂಧಿಸಿದ ಹಲವು ಉಪಯುಕ್ತ ಸಲಹೆಗಳನ್ನು ಅವರು ನೀಡಿದರು.

WhatsApp Image 2026 06 19 at 10.04.32 PM

ವ್ಯವಹಾರಿಕ ಅಧಿವೇಶನದಲ್ಲಿ ಜಲೀಲ್ ಸತ್ತಾರ್ ಹಾಗೂ ತಂಡವು LOXBOT Pvt Ltd ಸಂಸ್ಥೆಯನ್ನು ಪರಿಚಯಿಸಿತು. ಅಪಘಾತಗಳು ಹಾಗೂ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಜೀವ ರಕ್ಷಣೆಯನ್ನು ಉದ್ದೇಶವಾಗಿಟ್ಟುಕೊಂಡು ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಲಾಯಿತು.

ಯುವ ಉದ್ಯಮಿ ಅಬೂಬಕ್ಕರ್ ಸಂಸ್ಥೆಯ ದೃಷ್ಟಿಕೋನ ಹಾಗೂ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಹೂಡಿಕೆದಾರರನ್ನು ವ್ಯವಹಾರಿಕ ನಿಯಮಾವಳಿಗಳ ಆಧಾರದ ಮೇಲೆ ಸಹಭಾಗಿತ್ವಕ್ಕೆ ಆಹ್ವಾನಿಸಿದರು. ಸಂಸ್ಥೆಯಲ್ಲಿ ರಿಫಾ ಸದಸ್ಯರು ಪಾಲುದಾರರಾಗಿರುವ ಹಿನ್ನೆಲೆಯಲ್ಲಿ ಯೋಜನೆಯ ಪ್ರಾತ್ಯಕ್ಷಿಕೆಗೆ ವೇದಿಕೆ ಒದಗಿಸಲಾಗಿದೆ ಹೊರತು, ಇದು ರಿಫಾದ ಅಧಿಕೃತ ಯೋಜನೆಯಲ್ಲ ಎಂದು ಸ್ಪಷ್ಟಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ಉಡುಪಿ ವಲಯದ ರಿಫಾ ಅಧ್ಯಕ್ಷ ಮೊಹಮ್ಮದ್ ಆಸಿಫ್ ಇಕ್ಬಾಲ್ ವಹಿಸಿದ್ದರು. ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಹೀರ್ ಅಹ್ಮದ್ ರಿಫಾ ಸಂಸ್ಥೆಯ ಪರಿಚಯ ಮಾಡಿಕೊಟ್ಟರು. ಫೈಝ್ ಅಹ್ಮದ್ ಕುರ್‌ಆನ್ ಪಠಿಸಿದರು. ಶಕೀಲ್ ಅಹ್ಮದ್ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ರಿಫಾ ಸದಸ್ಯರು, ಉದ್ಯಮಿಗಳು ಹಾಗೂ ಸ್ಥಳೀಯ ಸಮುದಾಯದ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...