ಉಡುಪಿ | ಸಾರ್ವಜನಿಕರ ಸಮಸ್ಯೆಗಳಿಗೆ ನಿರ್ಲಕ್ಷ್ಯ ತೋರಿದರೆ ಕ್ರಮ: ಸಚಿವ ರಿಜ್ವಾನ್ ಅರ್ಷದ್

Date:

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಬಂದಾಗ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರ ಕೆಲಸಗಳಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಎಚ್ಚರಿಕೆ ನೀಡಿದರು.

- Advertisement -

ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್. ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಜಿಲ್ಲೆಯ ಉಸ್ತುವಾರಿ ಸಚಿವರಾದ ಬಳಿಕ ಏಳು ಬಾರಿ ಜಿಲ್ಲೆಗೆ ಭೇಟಿ ನೀಡಿದ್ದು, ಸರ್ಕಾರಿ ಕಚೇರಿಗಳ ಕಾರ್ಯವೈಖರಿಯನ್ನು ಗಮನಿಸುತ್ತಿದ್ದೇನೆ. ಸಾರ್ವಜನಿಕರ ಕೆಲಸಗಳನ್ನು ನಿಯಮಾನುಸಾರ ತಮ್ಮ ಹಂತದಲ್ಲೇ ಮಾಡಿಕೊಡಲು ಸಾಧ್ಯವಿದ್ದರೆ ತಕ್ಷಣ ಸ್ಪಂದಿಸಬೇಕು. ಮೇಲಧಿಕಾರಿಗಳು ಅಥವಾ ಜನಪ್ರತಿನಿಧಿಗಳ ಮಟ್ಟದಲ್ಲಿ ಪರಿಹರಿಸಬೇಕಾದ ಸಮಸ್ಯೆಗಳಿದ್ದರೆ ಗಮನಕ್ಕೆ ತರಬೇಕು. ಒಂದಕ್ಕಿಂತ ಹೆಚ್ಚು ಇಲಾಖೆಗಳ ಸಹಕಾರ ಅಗತ್ಯವಿರುವ ಕೆಲಸಗಳಲ್ಲಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜವಾಬ್ದಾರಿಯನ್ನು ಮತ್ತೊಂದು ಇಲಾಖೆಯ ಮೇಲೆ ಹಾಕಿ ನುಣುಚಿಕೊಳ್ಳುವುದು ಸರಿಯಲ್ಲ ಎಂದರು.

ಜಿಲ್ಲೆಯಲ್ಲಿ ವಾಡಿಕೆ ಮಳೆಯ ಕೊರತೆಯಿಂದ ಅಂತರ್ಜಲ ಮಟ್ಟ ಕುಸಿಯುವ ಸಾಧ್ಯತೆಯಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು. ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸುವ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಕಂದಾಯ ಇಲಾಖೆಯ ನಮೂನೆ 53, 54 ಮತ್ತು 94ಸಿ ಅಡಿಯಲ್ಲಿ ಜಮೀನು ಹಾಗೂ ನಿವೇಶನಕ್ಕಾಗಿ ಸಲ್ಲಿಸಿರುವ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಅರ್ಜಿಗಳನ್ನು ಪೋರ್ಟಲ್‌ನಲ್ಲಿ ಸರಿಯಾಗಿ ದಾಖಲಿಸದಿರುವುದರಿಂದಲೂ ಸಮಸ್ಯೆಯಾಗುತ್ತಿದೆ. ಅರ್ಹ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕು. ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದರು.

108 ಆಂಬುಲೆನ್ಸ್‌ಗಳ ನಿರ್ವಹಣೆಗೆ ಸಿಬ್ಬಂದಿ ಕೊರತೆ ಇರುವುದನ್ನು ಪ್ರಸ್ತಾಪಿಸಿದ ಸಚಿವರು, ಪ್ರಸ್ತುತ ಲಭ್ಯವಿರುವ ಸಿಬ್ಬಂದಿಯನ್ನು ಸಮರ್ಪಕವಾಗಿ ಬಳಸಿಕೊಂಡು ಜನರಿಗೆ ಉತ್ತಮ ಸೇವೆ ನೀಡಲು ಯೋಜನೆ ರೂಪಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಡೀಮ್ಡ್ ಫಾರೆಸ್ಟ್ ಸರ್ವೇ ಕಾರ್ಯವನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು. ಕುಡಿಯುವ ನೀರು ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಅರಣ್ಯ ಇಲಾಖೆಯ ಅನುಮತಿ ಅಗತ್ಯವಿರುವ ಪ್ರಸ್ತಾವನೆಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ರಾಜ್ಯಮಟ್ಟದಲ್ಲಿ ಪರಿಹರಿಸಬೇಕಾದ ಸಮಸ್ಯೆಗಳನ್ನು ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಶಾಲೆಗಳ ದುರಸ್ತಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದು, ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪಠ್ಯಪುಸ್ತಕ ವಿತರಿಸುವುದು ಹಾಗೂ ಗುಣಮಟ್ಟದ ಶೂಗಳನ್ನು ಒದಗಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮಧ್ಯಾಹ್ನದ ಬಿಸಿಯೂಟ ಯೋಜನೆಯ ಸಮರ್ಪಕ ಅನುಷ್ಠಾನದೊಂದಿಗೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.

ವಾರಾಹಿ ಯೋಜನೆಯಡಿ 326 ಕೋಟಿ ರೂ. ವೆಚ್ಚದಲ್ಲಿ 18 ತಿಂಗಳೊಳಗೆ ರೈತರಿಗೆ ನೀರಾವರಿ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿತ್ತು. ಆದರೆ ಈಗಾಗಲೇ 200 ಕೋಟಿ ರೂ. ವೆಚ್ಚ ಮಾಡಿದ್ದರೂ, ಕಾಮಗಾರಿ ಆರಂಭವಾಗಿ ಎಂಟು ವರ್ಷ ಕಳೆದರೂ ರೈತರಿಗೆ ನೀರಾವರಿ ಸೌಲಭ್ಯ ತಲುಪಿಲ್ಲ. ಮೀಸಲು ಅರಣ್ಯ ವ್ಯಾಪ್ತಿಯ ತಾಂತ್ರಿಕ ಸಮಸ್ಯೆಯಿಂದ ಯೋಜನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಭೆ ಕರೆದು ಸಮಸ್ಯೆ ಪರಿಹರಿಸಬೇಕು ಎಂದು ತಿಳಿಸಿದರು.

ಹೆಜಮಾಡಿ ಬಂದರಿನ ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸಮುದ್ರ ಕೊರೆತ ತಡೆ ಕಾಮಗಾರಿಗೆ ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಮೀನುಗಾರಿಕಾ ಬಂದರಿನಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿರ್ವಹಿಸಬೇಕು ಎಂದರು.

ಸಾಮಾನ್ಯ ಜನರಿಗೆ ಮನೆ ನಿರ್ಮಾಣಕ್ಕೆ ಮರಳು ಸುಲಭವಾಗಿ ಲಭ್ಯವಾಗುತ್ತಿಲ್ಲ ಹಾಗೂ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ ಎಂಬ ದೂರುಗಳ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು. ಡಿಎಂಎಫ್ ನಿಧಿ ಹಂಚಿಕೆಗೂ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗಳು ಪೂರ್ಣಗೊಂಡಿದ್ದರೂ ನಿರಂತರ ನೀರು ಪೂರೈಕೆಯಾಗುತ್ತಿಲ್ಲ. ನೀರಿನ ಮೂಲಗಳ ಲಭ್ಯತೆ ಆಧರಿಸಿ ಸಮರ್ಪಕವಾಗಿ ನೀರು ಸರಬರಾಜು ಮಾಡಬೇಕು. ನೀರಿನ ಮಾದರಿಗಳನ್ನು ನಿರಂತರವಾಗಿ ಪರೀಕ್ಷಿಸಬೇಕು ಎಂದರು.

ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ ಆಹಾರ ಒದಗಿಸುವುದರೊಂದಿಗೆ ಕುಡಿಯುವ ನೀರಿನ ಫಿಲ್ಟರ್‌ಗಳನ್ನು ಕಾಲಕಾಲಕ್ಕೆ ಬದಲಾಯಿಸಬೇಕು. ಸಕ್ಷಂ ಅಂಗನವಾಡಿ ಯೋಜನೆಯಡಿ ಪ್ರತಿ ಅಂಗನವಾಡಿಗೆ ನೀಡಿರುವ ಒಂದು ಲಕ್ಷ ರೂ. ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಗುಂಡಿಗಳನ್ನು ಆದ್ಯತೆಯ ಮೇರೆಗೆ ದುರಸ್ತಿಪಡಿಸಬೇಕು. ರಸ್ತೆ ಬದಿಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆರವುಗೊಳಿಸುವ ಕಾರ್ಯವನ್ನೂ ತ್ವರಿತವಾಗಿ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ವಿ. ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಡಾ. ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಡಿಎಫ್‌ಒ ರಥ್ರೇನ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಹಾಲಿನ ದರ ಏರಿಕೆ ಹಿಂಪಡೆಯಿರಿ, ಬಸ್ ದರ ಹೆಚ್ಚಳ ಕೈಬಿಡಿ: ಎಎಪಿ ಆಗ್ರಹ

ಹಾಲಿನ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ರಾಜ್ಯದ ಸಾರಿಗೆ ಸಂಸ್ಥೆಗಳ...

ಹಾವೇರಿ | ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಾವೇರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು...

ವಿಜಯಪುರ | ಗಾಂಧಿ ಚಿಂತನೆಗಳು ಇಂದಿಗೂ ಪ್ರಸ್ತುತ: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ ಮತ್ತು ಮಾನವೀಯ ಮೌಲ್ಯಗಳ ಮೂಲಕ ಜಗತ್ತಿಗೆ ಶಾಂತಿ ಹಾಗೂ...

ಉಡುಪಿ | ಯುವ ಪೀಳಿಗೆಗೆ ಕಾರಂತರು ಪ್ರೇರಣೆ : ಕೆ.ಪಿ. ಶೆಣೈ

ಕಾರಂತರು ಪ್ರಕೃತಿಯ ಬಗ್ಗೆ ಅಪಾರ ಪ್ರೀತಿ ಹೊಂದಿದವರು. ಸಮಾಜದಲ್ಲಿ ಪ್ರತಿ ಹಂತದಲ್ಲೂ...