ಉಡುಪಿ | ಟಯರ್ ಸ್ಪೋಟದಿಂದ ಮೀನಿನ ಲಾರಿ ಪಲ್ಟಿ; ಚಾಲಕ ಅಪಾಯದಿಂದ ಪಾರು

Date:

ಉಡುಪಿ ನಗರದ ಅಂಬಾಗಿಲು ಸಮೀಪ ಮಂಗಳೂರಿನಿಂದ ಹೂಡೆ ತೋನ್ಸೆಯ ಖಾಸಗಿ ಫಿಶ್ ಮಿಲ್‌ಗೆ ಕಟ್ಟಿಂಗ್ ಮಾಡಲು ಮೀನು ಸಾಗಿಸುತ್ತಿದ್ದ ಲಾರಿಯೊಂದು ಟಯರ್ ಸ್ಪೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಮುಂಜಾನೆ ಸಂಭವಿಸಿದೆ.

- Advertisement -

ಮಂಗಳೂರಿನಿಂದ ಮೀನು ಸಾಗಿಸಿಕೊಂಡು ಬರುತ್ತಿದ್ದ ಲಾರಿಯ ಹಿಂಬದಿ ಟಯರ್ ಏಕಾಏಕಿ ಸ್ಪೋಟಗೊಂಡಿದ್ದು, ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಗೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸಿದ ವೇಳೆ ಲಾರಿಯಲ್ಲಿ ಚಾಲಕ ಒಬ್ಬರೇ ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...
1011015970

ಅಪಘಾತದ ಪರಿಣಾಮ ಕೆಲಕಾಲ ವಾಹನ ಸಂಚಾರದಲ್ಲಿ ಅಸ್ತವ್ಯಸ್ತತೆ ಉಂಟಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಸೇರಿ ವಾಹನ ಸಂಚಾರವನ್ನು ಸುಗಮಗೊಳಿಸಿದರು. ಪಲ್ಟಿಯಾದ ಲಾರಿಯಿಂದ ಮೀನು ಹಾಗೂ ಇತರೆ ವಸ್ತುಗಳು ರಸ್ತೆ ಬದಿಗೆ ಚೆಲ್ಲಾಪಿಲ್ಲಿಯಾಗಿದ್ದವು.

ಈ ಘಟನೆ ಮತ್ತೆ ರಸ್ತೆ ಸುರಕ್ಷತೆ ಕುರಿತು ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ವಿಶೇಷವಾಗಿ ಭಾರೀ ವಾಹನಗಳಲ್ಲಿ ಟಯರ್ ನಿರ್ವಹಣೆ, ವಾಹನಗಳ ತಾಂತ್ರಿಕ ಪರಿಶೀಲನೆ ಹಾಗೂ ಅತಿಭಾರ ಸಾಗಣೆ ಕುರಿತು ಕಟ್ಟುನಿಟ್ಟಿನ ಕ್ರಮ ಅಗತ್ಯವಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ರಸ್ತೆ ಅಪಘಾತ ತಡೆಗಟ್ಟಲು ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಭಾರೀ ವಾಹನಗಳಿಗೆ ನಿಯಮಿತ ಫಿಟ್ನೆಸ್ ತಪಾಸಣೆ, ಚಾಲಕರಿಗೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ, ರಾತ್ರಿ ವೇಳೆ ವೇಗ ನಿಯಂತ್ರಣ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತುರ್ತು ಸೇವಾ ವ್ಯವಸ್ಥೆ ಬಲಪಡಿಸುವುದು ಅಗತ್ಯವಾಗಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಭಾರೀ ವಾಹನಗಳ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆ, ರಸ್ತೆ ಸುರಕ್ಷತೆ ಕುರಿತು ಇನ್ನಷ್ಟು ಕಾಳಜಿ ವಹಿಸಬೇಕಾದ ಅವಶ್ಯಕತೆ ಎದುರಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಕೋಮು ಸಂಘರ್ಷ; 14 ಜನರ ಬಂಧನ

ಕಾರಟಗಿ ತಾಲ್ಲೂಕಿನ ಹಾಲಸಮುದ್ರ ಗ್ರಾಮದಲ್ಲಿ ಗೌರಿ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ ಸಂದರ್ಭದಲ್ಲಿ,...

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ...

ಯಾದಗಿರಿ | ಬಂಡೋಳ್ಳಿಯಲ್ಲಿ ವಾಲ್ಮೀಕಿ ಶಾಖಾ ಮಠಕ್ಕೆ ಅಡಿಗಲ್ಲು; ಶಿಕ್ಷಣಕ್ಕೆ ₹25 ಕೋಟಿ ಅನುದಾನ

ಸುರಪುರ ಸಂವಿಧಾನ ಒದಗಿಸಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಹಾಗೂ ಸರ್ಕಾರದ ವಿವಿಧ...