ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

Date:

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸಾಲಿಗ್ರಾಮದ ಗುಂಡ್ಮಿ ಸಮೀಪ ನಡೆದಿದೆ.

- Advertisement -

ಗೋಕರ್ಣದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕವನ್ನು ದಾಟಿ ಚರಂಡಿಗೆ ಬಿದ್ದಿದೆ ಎನ್ನಲಾಗಿದೆ. ಈ ವೇಳೆ ಕಾರಿನಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...
WhatsApp Image 2026 11 29 at 12.00.06 AM

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಪಘಾತದಲ್ಲಿ ರಿಕ್ಷಾ ಚಾಲಕ ಹಾಗೂ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಮೆರುಗು: ಸಿರೆನಾ ಲಕ್ಸುರಿ ಬೀಚ್ ರೆಸಾರ್ಟ್ ಉದ್ಘಾಟನೆ

ಉಡುಪಿ ನಗರದ ಮಲ್ಪೆ ಪಡುಕರೆಯಲ್ಲಿ ಸುಮಾರು 9 ಎಕರೆ ವಿಶಾಲ ಪ್ರದೇಶದಲ್ಲಿ...

ರಾಯಚೂರು | ಇ-ಕೆವೈಸಿಯಲ್ಲಿ ರಾಯಚೂರು ಪ್ರಗತಿ: ಆಹಾರ ಧಾನ್ಯ ವಿತರಣೆಗೆ ವೇಗ ಹೆಚ್ಚಿಸಲು ಸಚಿವ ರಿಜ್ವಾನ್ ಅರ್ಷದ್ ಸೂಚನೆ

ಇ-ಕೆವೈಸಿ ಪ್ರಕ್ರಿಯೆಯಲ್ಲಿ ರಾಯಚೂರು ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದ್ದು, ಆಹಾರ ಧಾನ್ಯಗಳ...

ಯಾದಗಿರಿ | ಗೃಹರಕ್ಷಕರಿಗೆ ವರ್ಷಪೂರ್ತಿ ಕರ್ತವ್ಯ, ಸಮಾನ ವೇತನಕ್ಕೆ ಆಗ್ರಹ; ಡಿ.1ರಂದು ಬೆಳಗಾವಿ ಚಲೋ

ಪೊಲೀಸರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕಾನೂನು ಸುವ್ಯವಸ್ಥೆ ಕಾಪಾಡುವ ಗೃಹರಕ್ಷಕ ದಳದ...