ಉಡುಪಿ | ನೆಲ್ಲಿಕಟ್ಟೆ ಖಾಲಿ ಜಾಗಕ್ಕೆ ವಾಣಿಜ್ಯ ಯೋಜನೆ ಬೇಡ, ಪಾರ್ಕಿಂಗ್ ವ್ಯವಸ್ಥೆ ಬೇಕು

Date:

ಉಡುಪಿ ನಗರದ ಮಧ್ಯಭಾಗದಲ್ಲಿರುವ ನೆಲ್ಲಿಕಟ್ಟೆಯ ಹಿಂದಿನ ಶ್ರೀ ವಿಶ್ವೇಶ್ವರಯ್ಯ ದೈನಂದಿನ ತರಕಾರಿ ಮಾರುಕಟ್ಟೆ ಪ್ರದೇಶವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಶುಲ್ಕ ಸಹಿತ ವಾಹನ ನಿಲುಗಡೆ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸಬೇಕೆಂದು ಉಡುಪಿ ನಾಗರಿಕ ಕಲ್ಯಾಣ ವೇದಿಕೆ ಈಗಾಗಲೇ ಉಡುಪಿ ಜಿಲ್ಲಾಧಿಕಾರಿಗಳಿಗೆ ವಿಸ್ತೃತ ಮನವಿ ಸಲ್ಲಿಸಿದೆ. ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ ವಾಹನ ದಟ್ಟಣೆ ಮತ್ತು ಪಾರ್ಕಿಂಗ್ ಸಮಸ್ಯೆಯ ನಡುವೆಯೇ ಈ ಮನವಿ ಸಾರ್ವಜನಿಕ ವಲಯದಲ್ಲಿ ಹೆಚ್ಚಿನ ಗಮನ ಸೆಳೆಯುತ್ತಿದೆ.

- Advertisement -
1010906872

ಇತ್ತೀಚೆಗೆ ಉಡುಪಿ ನಗರ ಸಭೆಯು ಹಳೆಯ ಸರ್ಕಾರಿ ಬಸ್ ನಿಲ್ದಾಣದ ದಕ್ಷಿಣ ಭಾಗದಲ್ಲಿರುವ ಶ್ರೀ ಸಾವಿರಾ ಧೂಮಾವತಿ ದೈವಸ್ಥಾನದ ಸುತ್ತಲಿನ ಅಂಗಡಿ ಮತ್ತು ಕಚೇರಿ ಕಟ್ಟಡಗಳನ್ನು ತೆರವುಗೊಳಿಸಿದ್ದು, ಅದರ ನಂತರ ವಿಶಾಲವಾದ ಸರ್ಕಾರಿ ಜಾಗ ಖಾಲಿಯಾಗಿದೆ. ಸುಮಾರು ಒಂದು ಎಕರೆ ವಿಸ್ತೀರ್ಣ ಹೊಂದಿರುವ ಈ ಪ್ರದೇಶವನ್ನು ಮತ್ತೆ ವಾಣಿಜ್ಯ ಉದ್ದೇಶಗಳಿಗೆ ಬಳಸುವುದಕ್ಕಿಂತ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಕರ್ಯವಾಗಿ ರೂಪಿಸಬೇಕೆಂಬುದು ನಾಗರಿಕ ಸಂಘಟನೆಗಳ ಆಗ್ರಹವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಉಡುಪಿ ನಾಗರಿಕ ಕಲ್ಯಾಣ ವೇದಿಕೆಯ ನಿರ್ದೇಶಕರಾದ ಪ್ರೊ ಕೆ. ಸದಾಶಿವ ರಾವ್, “ಉಡುಪಿ ನಗರದಲ್ಲಿ ವಾಹನಗಳ ಸಂಖ್ಯೆ ಅಪಾರವಾಗಿ ಏರಿಕೆಯಾಗಿದೆ. ಆದರೆ ಅದರ ಅನುಪಾತದಲ್ಲಿ ಪಾರ್ಕಿಂಗ್ ವ್ಯವಸ್ಥೆ ಅಭಿವೃದ್ಧಿಯಾಗಿಲ್ಲ. ನಗರದ ಬಹುತೇಕ ರಸ್ತೆಗಳಲ್ಲಿ ವಾಹನ ನಿಲುಗಡೆಗೇ ಸ್ಥಳವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ನೆಲ್ಲಿಕಟ್ಟೆಯ ಖಾಲಿ ಸರ್ಕಾರಿ ಜಾಗವನ್ನು ಸಾರ್ವಜನಿಕ ಪಾರ್ಕಿಂಗ್ ಪ್ರದೇಶವನ್ನಾಗಿ ರೂಪಿಸುವುದು ಕಾಲದ ಅಗತ್ಯವಾಗಿದೆ” ಎಂದು ತಿಳಿಸಿದ್ದಾರೆ.

1010906878

ಒಂದು ಕಾಲದಲ್ಲಿ “ಉಡುಪಿ ಸಂತೆಕಟ್ಟೆ” ಎಂದು ಪ್ರಸಿದ್ಧವಾಗಿದ್ದ ಈ ಪ್ರದೇಶವು ದಶಕಗಳ ಕಾಲ ಜಿಲ್ಲೆಯ ವ್ಯಾಪಾರ ಚಟುವಟಿಕೆಗಳ ಕೇಂದ್ರವಾಗಿತ್ತು. 1980ರ ದಶಕದವರೆಗೆ ವಾರದ ಸಂತೆಗಳು ಇಲ್ಲಿ ನಡೆಯುತ್ತಿದ್ದರೆ, ನಂತರ ಸುಮಾರು 2020ರವರೆಗೆ ದೈನಂದಿನ ತರಕಾರಿ ಮತ್ತು ಸಣ್ಣ ವ್ಯಾಪಾರ ಮಾರುಕಟ್ಟೆಯಾಗಿ ಕಾರ್ಯನಿರ್ವಹಿಸಿತ್ತು. ಉಡುಪಿ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಇದೇ ಸ್ಥಳವನ್ನು ಅವಲಂಬಿಸುತ್ತಿದ್ದರು. ಹೀಗಾಗಿ ಈ ಜಾಗಕ್ಕೆ ಉಡುಪಿಯ ಆರ್ಥಿಕ ಮತ್ತು ಸಾಮಾಜಿಕ ಬದುಕಿನೊಂದಿಗೆ ಐತಿಹಾಸಿಕ ನಂಟೂ ಇದೆ.

ಮನವಿಯಲ್ಲಿ ಉಡುಪಿ ನಗರದ ಈಗಿನ ಪಾರ್ಕಿಂಗ್ ಬಿಕ್ಕಟ್ಟಿನ ಚಿತ್ರಣವನ್ನು ವಿವರವಾಗಿ ಉಲ್ಲೇಖಿಸಲಾಗಿದೆ. ನಗರ ಸಭೆ, ಬಿಎಸ್‌ಎನ್ಎಲ್ ಕಚೇರಿ, ಮುಖ್ಯ ಅಂಚೆ ಕಚೇರಿ, ಸರ್ಕಾರಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು, ಬ್ಯಾಂಕುಗಳು, ಔಷಧ ಅಂಗಡಿಗಳು, ಸಿಟಿ ಬಸ್ ನಿಲ್ದಾಣ, ಸರ್ವೀಸ್ ಬಸ್ ನಿಲ್ದಾಣ, ಪ್ರಮುಖ ವ್ಯಾಪಾರ ಮಳಿಗೆಗಳು ಮತ್ತು ರಥಬೀದಿಯಲ್ಲಿರುವ ಶ್ರೀ ಕೃಷ್ಣ ಮಠ ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳಿಗೆ ಆಗಮಿಸುವವರಿಗೆ ತಮ್ಮ ವಾಹನಗಳನ್ನು ಸುರಕ್ಷಿತವಾಗಿ ನಿಲ್ಲಿಸಲು ಸೂಕ್ತ ಸ್ಥಳವೇ ಇಲ್ಲದಾಗಿದೆ ಎಂದು ನಾಗರಿಕ ಸಂಘಟನೆಗಳು ಆರೋಪಿಸಿವೆ.

ಉಡುಪಿ ನಗರದಲ್ಲಿ ಈಗ ಲಭ್ಯವಿರುವ ಪ್ರಮುಖ ಪಾರ್ಕಿಂಗ್ ವ್ಯವಸ್ಥೆ ಎಂದರೆ ರಥಬೀದಿ ಸಮೀಪದ ರಾಜಾಂಗಣ ಪಾರ್ಕಿಂಗ್ ಪ್ರದೇಶ ಮಾತ್ರ. ಅದನ್ನೂ ಅಂದಿನ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಮಠಾಧೀಶರು ಸಾರ್ವಜನಿಕರ ಅನುಕೂಲಕ್ಕಾಗಿ ಒದಗಿಸಿದ್ದರು ಎಂದು ಮನವಿಯಲ್ಲಿ ಸ್ಮರಿಸಲಾಗಿದೆ. ಆದರೆ ಆ ಪ್ರದೇಶವೂ ಪ್ರತಿದಿನ ಪ್ರವಾಸಿಗರ ವಾಹನಗಳಿಂದ ತುಂಬಿ ಹೋಗುತ್ತಿರುವುದರಿಂದ ಸಾಮಾನ್ಯ ನಾಗರಿಕರಿಗೆ ಅಲ್ಲಿ ವಾಹನ ನಿಲ್ಲಿಸಲು ಅವಕಾಶ ಸಿಗುವುದು ಕಷ್ಟಕರವಾಗಿದೆ. ವಿಶೇಷವಾಗಿ ಹಬ್ಬಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ರಜಾದಿನಗಳಲ್ಲಿ ಉಡುಪಿ ನಗರ ಸಂಪೂರ್ಣ ಸಂಚಾರ ದಟ್ಟಣೆಗೆ ಒಳಗಾಗುತ್ತದೆ ಎಂದು ಉಲ್ಲೇಖಿಸಲಾಗಿದೆ.

1010906873

ಇದೇ ವೇಳೆ ಉದ್ಯೋಗಕ್ಕಾಗಿ ಮಂಗಳೂರು, ಕುಂದಾಪುರ ಮತ್ತು ಕಾರ್ಕಳ ಭಾಗಗಳಿಗೆ ಪ್ರಯಾಣಿಸುವವರು ತಮ್ಮ ವಾಹನಗಳನ್ನು ದಿನಪೂರ್ತಿ ನಿಲ್ಲಿಸಲು ಸುರಕ್ಷಿತ ಜಾಗವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಿರಿಯ ನಾಗರಿಕರು, ಮಹಿಳೆಯರು, ಸಣ್ಣ ವ್ಯಾಪಾರಿಗಳು, ಹೂವು ಮತ್ತು ಹಣ್ಣು ವ್ಯಾಪಾರಿಗಳು, ಖಾಸಗಿ ಕಚೇರಿ ಉದ್ಯೋಗಿಗಳು ಹಾಗೂ ಆಸ್ಪತ್ರೆಗೆ ಬರುವ ರೋಗಿಗಳ ಕುಟುಂಬಸ್ಥರು ಕೂಡ ಪಾರ್ಕಿಂಗ್ ಕೊರತೆಯಿಂದ ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ನಗರದ ಪಾರ್ಕಿಂಗ್ ಸಮಸ್ಯೆಗೆ ದಶಕಗಳ ಹಿಂದಿನ ನಗರ ಯೋಜನಾ ವೈಫಲ್ಯವೇ ಮೂಲ ಕಾರಣ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ. ಅನೇಕ ವಾಣಿಜ್ಯ ಕಟ್ಟಡಗಳಿಗೆ ಅನುಮತಿ ನೀಡುವ ವೇಳೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸದಿರುವುದು, ಕಟ್ಟಡ ನಿರ್ಮಾಣ ಪೂರ್ಣಗೊಂಡ ನಂತರವೂ ಅಕ್ಯುಪೆನ್ಸಿ ಪ್ರಮಾಣಪತ್ರ ನೀಡುವ ಮುನ್ನ ಪರಿಶೀಲನೆ ನಡೆಸದಿರುವುದು ಮತ್ತು ರಸ್ತೆ ಸಾಮರ್ಥ್ಯಕ್ಕಿಂತ ಹೆಚ್ಚು ವ್ಯಾಪಾರ ಚಟುವಟಿಕೆಗಳಿಗೆ ಅವಕಾಶ ನೀಡಿರುವುದರಿಂದ ಇಂದಿನ ಸಮಸ್ಯೆ ಗಂಭೀರ ರೂಪ ಪಡೆದಿದೆ ಎಂದು ಹೇಳಲಾಗಿದೆ.

1010903035

ಇದೀಗ ಸರ್ಕಾರದ ಒಡೆತನದಲ್ಲೇ ಖಾಲಿ ಜಾಗ ಲಭ್ಯವಿರುವುದು ದೊಡ್ಡ ಅವಕಾಶವಾಗಿದ್ದು, ಭೂಸ್ವಾಧೀನ ಅಥವಾ ಪರಿಹಾರದಂತಹ ಯಾವುದೇ ತೊಡಕುಗಳಿಲ್ಲದ ಕಾರಣ ತಕ್ಷಣವೇ ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದು ಮನವಿ ತಿಳಿಸಿದೆ. ನಗರ ಸಭೆಯ ಮುಖ್ಯ ಕರ್ತವ್ಯ ನಾಗರಿಕರಿಗೆ ಮೂಲಸೌಕರ್ಯ ಒದಗಿಸುವುದೇ ಹೊರತು ಕೇವಲ ವಾಣಿಜ್ಯ ಆದಾಯ ಗಳಿಸುವುದಲ್ಲ ಎಂದು ಸಂಘಟನೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಒಂದು ವೇಳೆ ಭವಿಷ್ಯದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸುವ ಯೋಜನೆ ಕೈಗೊಳ್ಳಲಾಗಿದ್ದರೂ, ಭೂಗತ ಮಹಡಿ, ನೆಲಮಹಡಿ ಹಾಗೂ ಮೇಲಿನ ಮೂರು ಮಹಡಿಗಳನ್ನು ಕಡ್ಡಾಯವಾಗಿ ಪಾರ್ಕಿಂಗ್‌ಗೆ ಮೀಸಲಿಡಬೇಕು ಎಂದು ಸಲಹೆ ನೀಡಲಾಗಿದೆ. ರೈಲ್ವೆ ನಿಲ್ದಾಣಗಳು ಮತ್ತು ವಿಮಾನ ನಿಲ್ದಾಣಗಳ ಮಾದರಿಯಲ್ಲಿ ದೀರ್ಘಾವಧಿ ವಾಹನ ನಿಲುಗಡೆ ವ್ಯವಸ್ಥೆ ರೂಪಿಸಿ ನಿಗದಿತ ಶುಲ್ಕ ವಸೂಲಿ ಮಾಡುವ ಮೂಲಕ ನಗರ ಸಭೆಗೆ ಆದಾಯವೂ ಲಭಿಸಬಹುದು ಎಂದು ಮನವಿಯಲ್ಲಿ ಸೂಚಿಸಲಾಗಿದೆ.

1010848710

ಈ ನಡುವೆ ತೆರವುಗೊಳಿಸಿದ ಜಾಗವನ್ನು ಕಾಂಕ್ರೀಟ್ ಕಂಬಗಳು ಮತ್ತು ಮುಳ್ಳುತಂತಿಗಳಿಂದ ಸುತ್ತುವರಿದು ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗುತ್ತಿರುವುದರ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ. ಇದರಿಂದ ಈಗಾಗಲೇ ತೀವ್ರವಾಗಿರುವ ಪಾರ್ಕಿಂಗ್ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳಲಿದೆ ಎಂದು ನಾಗರಿಕ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಉಡುಪಿ ನಾಗರಿಕ ಕಲ್ಯಾಣ ವೇದಿಕೆ, ಹಿರಿಯ ನಾಗರಿಕರ ಸಂಘ, ನಿವೃತ್ತ ಬ್ಯಾಂಕ್ ನೌಕರರ ಸಂಘ ಸೇರಿದಂತೆ ಹಲವು ಸಂಘಟನೆಗಳು ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ನೆಲ್ಲಿಕಟ್ಟೆಯ ಸರ್ಕಾರಿ ಜಾಗವನ್ನು ಸಾರ್ವಜನಿಕರ ಅಗತ್ಯಕ್ಕೆ ಅನುಗುಣವಾಗಿ ಶಾಶ್ವತ ಪಾರ್ಕಿಂಗ್ ವ್ಯವಸ್ಥೆಯಾಗಿ ಘೋಷಿಸಬೇಕೆಂದು ಒತ್ತಾಯಿಸಿವೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...