ಉಡುಪಿ | ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಹದ್ದಿನಬೆಟ್ಟು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಪ್ರಶಸ್ತಿ

Date:

ಸೇವೆ ಮಾಡುವ ಕಾಯಕ ಭಗವಂತನ ಇಚ್ಛೆ. ನಾನು ಇಲ್ಲಿ ಕೇವಲ ಮಧ್ಯವರ್ತಿಯಷ್ಟೇ ಎಂದು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿ ಹದ್ದಿನಬೆಟ್ಟು ಅಧ್ಯಕ್ಷ ಅವಿನಾಶ್ ಶೆಟ್ಟಿ ಗುಂಡ್ಮಿ ಹೇಳಿದರು.

- Advertisement -

ಹದ್ದಿನಬೆಟ್ಟಿನಲ್ಲಿ ಸೋಮವಾರ ನಡೆದ ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿಯ 29ನೇ ವರ್ಷದ ಶ್ರೀ ಗಣೇಶ ಆರಾಧನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ಫೌಂಡೇಶನ್ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ವಿವಿಧ ಸಾಮಾಜಿಕ ಕಾರ್ಯಗಳನ್ನು ನಡೆಸುತ್ತಿದೆ. ಹದ್ದಿನಬೆಟ್ಟಿನ ಗಣೇಶೋತ್ಸವವು ಸರ್ವಧರ್ಮ ಸಮನ್ವಯದ ಕೇಂದ್ರವಾಗಿ ರೂಪುಗೊಂಡು ಸಾಮರಸ್ಯದ ಬದುಕಿಗೆ ಮುನ್ನುಡಿ ಬರೆಯುತ್ತಿರುವುದು ಉತ್ಸವದ ಮೆರಗನ್ನು ಹೆಚ್ಚಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ₹50 ಸಾವಿರ ನಗದು ಪುರಸ್ಕಾರದೊಂದಿಗೆ ಶ್ರೀ ಗಣೇಶ ಆರಾಧನೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹರೇಕಳ ಹಾಜಬ್ಬ, “ನಮ್ಮೂರಿನ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಕಿತ್ತಳೆ ಮಾರಿ ಶಾಲೆ ಕಟ್ಟಿದ್ದೇನೆ. ಆಗಿನ ಶಾಸಕ ಯು.ಟಿ. ಫರೀದ್ ಸೇರಿದಂತೆ ಅನೇಕರು ಈ ಕಾರ್ಯಕ್ಕೆ ಕೈಜೋಡಿಸಿದ್ದರು. ಇದೀಗ ಹದ್ದಿನಬೆಟ್ಟು ಸಮಿತಿಯಿಂದ ದೊರೆತಿರುವ ಈ ಗೌರವವು ನನ್ನ ಶೈಕ್ಷಣಿಕ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದೆ” ಎಂದರು.

ಇದೇ ವೇಳೆ ಯುವ ಕಲಾವಿದ ನಿರಜ್ ಅವರು ತಾವು ರಚಿಸಿದ ಚಿತ್ರವನ್ನು ಹರೇಕಳ ಹಾಜಬ್ಬರಿಗೆ ಹಸ್ತಾಂತರಿಸಿದರು.

ಸಾಮಾಜಿಕ ಸೇವಾ ಕಾರ್ಯಕ್ರಮಗಳ

ಸಾನ್ವಿ ಗ್ರೂಪ್–ಅವಿನಾಶ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಶೈಕ್ಷಣಿಕ ದತ್ತು ಸ್ವೀಕಾರ ಕಾರ್ಯಕ್ರಮದ ಅಂಗವಾಗಿ ಬ್ರಹ್ಮಾವರ ತಾಲೂಕಿನ 30 ವಿದ್ಯಾರ್ಥಿಗಳಿಗೆ ತಲಾ ₹5 ಸಾವಿರದಂತೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಎರಡು ಸ್ಥಳೀಯ ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರಿಗೆ ಒಂದು ವರ್ಷದ ಮಾಸಿಕ ಗೌರವಧನ ನೀಡುವ ವ್ಯವಸ್ಥೆ ಮಾಡಲಾಯಿತು. ಆರು ಮಂದಿ ಅನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಿಸುವುದರೊಂದಿಗೆ ಹಲವು ಸಾಮಾಜಿಕ ಕಾರ್ಯಗಳನ್ನು ಇದೇ ವೇದಿಕೆಯಲ್ಲಿ ನೆರವೇರಿಸಲಾಯಿತು.

ಉತ್ಸವದ ಅಂಗವಾಗಿ ಆಯೋಜಿಸಿದ್ದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಾವರ ಎಸ್‌ಎಂಎಸ್ ಕಾಲೇಜಿನ ಪ್ರಾಂಶುಪಾಲ ಡಾ. ರಾಬರ್ಟ್ ರೋಡ್ರಿಗಸ್ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ ಹಾಗೂ ರಥಶಿಲ್ಪಿ ರಾಜಗೋಪಾಲ್ ಆಚಾರ್ಯ ಉಪಸ್ಥಿತರಿದ್ದರು.

ಸಮಿತಿ ಕಾರ್ಯದರ್ಶಿ ಚಂದ್ರ ಮೊಗವೀರ ಸ್ವಾಗತಿಸಿ, ಬಹುಮಾನ ಪತ್ರ ವಾಚಿಸಿ ವಂದಿಸಿದರು. ಸಮಿತಿಯ ಸೂರಜ್ ವಿದ್ಯಾರ್ಥಿವೇತನದ ಫಲಾನುಭವಿಗಳ ಪಟ್ಟಿಯನ್ನು ವಾಚಿಸಿದರು. ಅಶೋಕ್ ಭಂಡಾರಿ ಲೆಕ್ಕಪತ್ರ ಮಂಡಿಸಿದರು. ಸಮಿತಿಯ ಗೌರವಾಧ್ಯಕ್ಷ ರಾಮದೇವ ಐತಾಳ್ ಪ್ರಶಸ್ತಿ ಪತ್ರ ವಾಚಿಸಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ರಾಜ್ಯ ಸರ್ಕಾರ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಯಾದಗಿರಿ | ಮಕ್ಕಳ ಸುರಕ್ಷತೆ ಸಮಾಜದ ಹೊಣೆ: ಪೋಕ್ಸೋ, ಬಾಲ್ಯವಿವಾಹ ತಡೆಗೆ ಕಾನೂನು ಅರಿವು ಅಭಿಯಾನ

ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸುರಕ್ಷಿತ...

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...