ಉಡುಪಿ | ಮತಪಟ್ಟಿ ಪರಿಷ್ಕರಣೆ ಗೊಂದಲ : ಸ್ಪಷ್ಟತೆ ಇಲ್ಲದೆ ಜನರಲ್ಲಿ ಆತಂಕ ‘ನಮ್ಮ ಮತ ನಮ್ಮ ಹಕ್ಕು’ ಒಕ್ಕೂಟದಿಂದ ಪ್ರತಿಭಟನೆ

Date:

ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಹಾಗೂ ಪ್ರಸ್ತುತ ನಡೆಯುತ್ತಿರುವ ಮತದಾರರ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸ್ಪಷ್ಟತೆ ತರಬೇಕೆಂದು ಆಗ್ರಹಿಸಿ, ‘ನಮ್ಮ ಮತ ನಮ್ಮ ಹಕ್ಕು’ ಎಂಬ ನಾಗರಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಉಡುಪಿಯಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

- Advertisement -
1010474071

ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಹೋರಾಟಗಾರರು, SIR ಪ್ರಕ್ರಿಯೆ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅಡಿಪಾಯವಾದ ಸಾರ್ವತ್ರಿಕ ಮತದಾನದ ಹಕ್ಕಿಗೆ ತೀವ್ರ ಧಕ್ಕೆ ಉಂಟುಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1010474070

ಈ ವೇಳೆ ಮಾತನಾಡಿದ ಪ್ರೋ ಪಣಿರಾಜ್, ಈಗಾಗಲೇ SIR ಜಾರಿಗೊಂಡಿರುವ ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಕ್ಷಾಂತರ ಜನರ ಹೆಸರುಗಳು ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಉದಾಹರಣೆಗಳನ್ನು ಉಲ್ಲೇಖಿಸಿ, ಈ ಪ್ರಕ್ರಿಯೆಯು ಸಾಮೂಹಿಕವಾಗಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವ ಅಪಾಯವನ್ನು ಉಂಟುಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

1010474066

ಕರ್ನಾಟಕದಲ್ಲಿ 5.57 ಕೋಟಿ ಮತದಾರರಲ್ಲಿ ಶೇ.80ಕ್ಕೂ ಅಧಿಕ ಮ್ಯಾಪಿಂಗ್ ನಡೆದಿದೆ ಎಂಬ ಅಧಿಕಾರಿಗಳ ಹೇಳಿಕೆ ಇದ್ದರೂ, ಪರಿಶೀಲನೆಗೊಂಡಿರುವ ಮತದಾರರ ಸಂಖ್ಯೆ ಬಹಳ ಕಡಿಮೆಯಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ತಿಳಿಸಿದರು. ಮ್ಯಾಪಿಂಗ್ ಪ್ರಕ್ರಿಯೆಯ ವಿಧಾನ, ವೇಳಾಪಟ್ಟಿ ಹಾಗೂ ಮಾರ್ಗಸೂಚಿಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡದಿರುವುದರಿಂದ ಜನರಲ್ಲಿ ಗೊಂದಲ ಉಂಟಾಗಿದೆ ಎಂದು ದೂರಿದರು.

1010474073

ಮ್ಯಾಪಿಂಗ್ ಕಾರ್ಯಾಚರಣೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಸಮರ್ಪಕ ತರಬೇತಿ ಇಲ್ಲದೇ ಕೆಲಸ ನಿರ್ವಹಿಸುತ್ತಿರುವುದು, ಹಳೆಯ ಮತದಾರರ ಪಟ್ಟಿಯ ಮಾಹಿತಿಯನ್ನು ಹೊಂದಿಸಲು ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳು, ಬಳಸುತ್ತಿರುವ ಆ್ಯಪ್‌ಗಳ ದೋಷಗಳು ಸೇರಿದಂತೆ ಹಲವು ಅಡಚಣೆಗಳನ್ನು ಹೋರಾಟಗಾರರು ಉಲ್ಲೇಖಿಸಿದರು. ಅಧಿಕಾರಿಗಳ ಒತ್ತಡದಿಂದ BLOಗಳು ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂತು.

1010474072

ಈ ಹಿನ್ನೆಲೆಯಲ್ಲಿ, ಮ್ಯಾಪಿಂಗ್ ಪ್ರಕ್ರಿಯೆಯ ಎಲ್ಲಾ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸುವುದು, ಮತದಾರರಿಗೆ ಅಗತ್ಯ ಮಾರ್ಗದರ್ಶನ ನೀಡುವುದು, ಸಮಸ್ಯೆಗಳ ಪರಿಹಾರಕ್ಕಾಗಿ ನಿಯಮಿತ ಸಭೆಗಳನ್ನು ನಡೆಸುವುದು ಹಾಗೂ ಸಹಾಯ ಕೇಂದ್ರಗಳು ಮತ್ತು ಸಹಾಯವಾಣಿಗಳನ್ನು ಸ್ಥಾಪಿಸುವಂತೆ ಒಕ್ಕೂಟವು ಒತ್ತಾಯಿಸಿತು.

1010474082

ಇನ್ನೂ, ಸರ್ವೋಚ್ಛ ನ್ಯಾಯಾಲಯದಲ್ಲಿ SIR ಸಂಬಂಧಿತ ವಿಚಾರಣೆಗಳು ಪೂರ್ಣಗೊಳ್ಳುವವರೆಗೆ ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಲಾಯಿತು. ರಾಜ್ಯದಲ್ಲಿ ನಡೆಯುವ ಪರಿಷ್ಕರಣೆ ಪ್ರಕ್ರಿಯೆಯು ಇತರೆ ರಾಜ್ಯಗಳಲ್ಲಿ ಕಂಡುಬಂದ ಅನಾನುಕೂಲಗಳನ್ನು ತಪ್ಪಿಸುವ ರೀತಿಯಲ್ಲಿ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

1010474081

ಬಳಿಕ ಈ ಸಂಬಂಧ ಮನವಿಯನ್ನು ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ಅವರ ಮೂಲಕ ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಚುನಾವಣಾ ಆಯುಕ್ತರಿಗೆ ಸಲ್ಲಿಸಲಾಯಿತು.

ಉಡುಪಿ ಜಿಲ್ಲೆಯ ಪ್ರಜೆಗಳು ತಮ್ಮ ಸಂವಿಧಾನಿಕ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಜಿಲ್ಲಾಡಳಿತ ತಕ್ಷಣ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.‌

ಈದಿನ.ಕಾಮ್‌ ಜೊತೆ ಮಾತನಾಡಿದ ಹೋರಾಟಗಾರರು ಹಾಗೂ ಚಿಂತಕ ಪ್ರೊ. ಫಣಿರಾಜ್, “ನನ್ನ ಮತ ನನ್ನ ಹಕ್ಕು” ಎಂಬ ನಾಗರೀಕ ಸಂಘಟನೆಗಳ ಐಕ್ಯ ವೇದಿಕೆಯ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಕುರಿತು ವಿವರಿಸಿದರು.

1010474077

ರಾಜ್ಯದಲ್ಲಿ ಪ್ರಸ್ತುತ ಆರಂಭಗೊಂಡಿರುವ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಇಂದು ಪ್ರತಿಭಟನೆ ನಡೆಸಲಾಗುತ್ತಿದೆ. ಈ ಸಂಬಂಧ ರಾಜ್ಯಪಾಲರು, ಮುಖ್ಯಮಂತ್ರಿಗಳು, ಜಿಲ್ಲಾಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಚುನಾವಣಾ ಆಯುಕ್ತರಿಗೆ ಆಗ್ರಹಪತ್ರ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

1010474078

ಈಗಾಗಲೇ ದೇಶದ ಹತ್ತು ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎರಡು ಹಂತಗಳಲ್ಲಿ ನಡೆದ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಜನರಲ್ಲಿ ಆತಂಕ ಉಂಟುಮಾಡಿದೆ. ಈ ಪ್ರಕ್ರಿಯೆಯಲ್ಲಿ ದೇಶದ ಸುಮಾರು 6.5 ಕೋಟಿ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ ಎಂದು ಅವರು ಆರೋಪಿಸಿದರು.

1010474306

1950ರ ಪ್ರಜಾ ಪ್ರತಿನಿಧಿ ಕಾಯ್ದೆಯ ಪ್ರಕಾರ ಅರ್ಹ ವಯಸ್ಸಿನ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ನೀಡಬೇಕು ಮತ್ತು ಯಾವುದೇ ಕಾರಣಕ್ಕೂ ಅವರನ್ನು ಮತದಾನದಿಂದ ವಂಚಿಸಬಾರದು. ಆದರೆ ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆ ಈ ಸಂವಿಧಾನಾತ್ಮಕ ಭರವಸೆಯನ್ನು ದುರ್ಬಲಗೊಳಿಸಿದೆ ಎಂದು ಹೇಳಿದರು.

1010474083

ಪಶ್ಚಿಮ ಬಂಗಾಳದಲ್ಲಿ ಸುಮಾರು 90 ಲಕ್ಷ ಮತದಾರರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಗಂಭೀರ ಸಂಗತಿ. ಇದರಲ್ಲೂ ಬಹುಪಾಲು ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಹೊರಹಾಕಲಾಗಿದೆ ಎಂಬ ಆರೋಪಗಳಿವೆ. ಆರಂಭದಲ್ಲಿ 27 ಲಕ್ಷ ಮಂದಿಯನ್ನು ಮಾತ್ರ ಹೊರಗಿಟ್ಟಿದ್ದರೂ, ನಂತರ ಹೊಸ ವಿಭಾಗದ ಮೂಲಕ ಮತ್ತಷ್ಟು 60 ಲಕ್ಷ ಮಂದಿಯನ್ನು ಸೇರಿಸಿ ಹೊರಗಿಡಲಾಗಿದೆ ಎಂದು ಅವರು ತಿಳಿಸಿದರು.

1010474080

ಈ ಬೆಳವಣಿಗೆ ಕುರಿತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಂದಲೂ ಆತಂಕ ವ್ಯಕ್ತವಾಗಿದೆ. ಮಾಜಿ ಚುನಾವಣಾ ಆಯುಕ್ತರಾದ ಖುರೈಷಿ ಹಾಗೂ ಅಶೋಕ್ ಲವಾಸಾ ಕೂಡ ಈ ಪ್ರಕ್ರಿಯೆಯನ್ನು ಖಂಡಿಸಿ, ಇದು ಸಂವಿಧಾನಕ್ಕೆ ಅವಮಾನಕರ ಎಂದು ಹೇಳಿದ್ದಾರೆ ಎಂದು ಪ್ರೊ. ಫಣಿರಾಜ್ ಉಲ್ಲೇಖಿಸಿದರು.

1010474079

ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿಯೂ ಇದೇ ರೀತಿಯ ಅನ್ಯಾಯ ಮರುಕಳಿಸದಂತೆ ತಕ್ಷಣವೇ ಈ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ನಿಲ್ಲಿಸಬೇಕು. ಎಲ್ಲಾ ಅರ್ಹ ಮತದಾರರಿಗೆ ನ್ಯಾಯ ಸಿಗುವಂತೆ ಸೂಕ್ತ ವಾತಾವರಣ ನಿರ್ಮಾಣವಾದ ನಂತರ ಮಾತ್ರ ಈ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಅವರು ಆಗ್ರಹಿಸಿದರು.

1010474068

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ, ನಿಕಟಪೂರ್ವ ಅಧ್ಯಕ್ಷ ಯಾಸೀನ್ ಮಲ್ಪೆ, ಕರ್ನಾಟಕ ಕ್ರೈಸ್ತ ಒಕ್ಕೂಟದ ಪ್ರಶಾಂತ್ ಜತ್ತನ್ನ, ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮ್‌ರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು, ಸಿಐಟಿಯು ಮುಖಂಡ ನರಸಿಂಹ ಎಚ್., ಅಲ್ಪಸಂಖ್ಯಾತರ ವೇದಿಕೆ ಅಧ್ಯಕ್ಷ ಚಾರ್ಲ್ಸ್ ಅ್ಯಂಬ್ಲರ್, ಫಾ.ವಿಲಿಯಂ ಮಾರ್ಟಿಸ್, ಕೆಥೋಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಮೆಲ್ವಿನ್ ಅರಾನ್ಹ, ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ರಾಜ್ಯ ಸಹ ಸಂಚಾಲಕಿ ರೋಶಿನಿ ಒಲಿವೆರಾ, ಕಾಂಗ್ರೆಸ್ ಮುಖಂಡರಾದ ಅಶೋಕ್ ಕುಮಾರ್ ಕೊಡವೂರು, ಇಸ್ಮಾಯಿಲ್ ಆತ್ರಾಡಿ, ಸುಗಮ್ಯ ಮಹಿಳಾ ಸಂಘಟನೆಯ ಅಧ್ಯಕ್ಷೆ ಸಿಲ್ವಿಯಾ ಸುವಾರಿಸ್, ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ಶಾರದಾ, ಪ್ರಮುಖರಾದ ವರೋನಿಕಾ ಕರ್ನೆಲಿಯೋ, ರಿಯಾಝ್ ಕೋಡಿ, ಇಸ್ಮಾಯಿಲ್ ಕಟಪಾಡಿ, ಇದ್ರೀಸ್ ಹೂಡೆ, ಝಫರುಲ್ಲಾ ಹೂಡೆ, ಉದ್ಯಾವರ ನಾಗೇಶ್ ಕುಮಾರ್, ಅಬ್ದುಲ್ ಅಝೀಝ್ ಮೊದಲಾದವರು ಉಪಸ್ಥಿತರಿದ್ದರು.

1010474075
1010474076
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...