ಉಡುಪಿ | ಕೈಗಾರಿಕೆ ಇಲಾಖೆಯಿಂದ ಪ.ಜಾತಿ/ಪಂಗಡದ ಕೈಗಾರಿಕೋದ್ಯಮಿಗಳಿಗೆ ವಿವಿಧ ಸೌಲಭ್ಯ

Date:

ಪ್ರಸಕ್ತ ಸಾಲಿನಲ್ಲಿ ಕೈಗಾರಿಕೆ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕೈಗಾರಿಕೋದ್ಯಮಿಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಹೊಸದಾಗಿ ಅತೀ ಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳನ್ನು ಆರಂಭಿಸುವ ಆಸಕ್ತ ಉದ್ಯಮಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆ ತಿಳಿಸಿದೆ.

- Advertisement -

ಹೊಸದಾಗಿ ಕೈಗಾರಿಕಾ ಘಟಕ ಆರಂಭಿಸುವ ಉದ್ಯಮಿಗಳು ಬ್ಯಾಂಕ್‌ಗಳಿಂದ ಪಡೆಯುವ ಸಾಲವನ್ನು ಹೊರತುಪಡಿಸಿ ತಾವು ಹೂಡಿಕೆ ಮಾಡುವ ಬಂಡವಾಳದ ಶೇ.50ರಷ್ಟು ಮೊತ್ತವನ್ನು ಬಡ್ಡಿರಹಿತ ಸಾಲದ ರೂಪದಲ್ಲಿ ಪಡೆಯಬಹುದಾಗಿದೆ. ಅಲ್ಲದೆ, ಘಟಕದ ಸ್ಥಿರ ಬಂಡವಾಳದ ಶೇ.60ರಷ್ಟು ಸಹಾಯಧನ, ಬ್ಯಾಂಕ್ ಸಾಲ ಪಡೆಯುವ ಸಂದರ್ಭದಲ್ಲಿ ವಿಧಿಸಲಾಗುವ ಸಾಲ ಪ್ರಕ್ರಿಯೆ ಶುಲ್ಕದ ಮರುಪಾವತಿ ಹಾಗೂ ವಿದ್ಯುತ್ ಇಲಾಖೆಯಿಂದ ವಿಧಿಸಲಾಗುವ ವಿದ್ಯುತ್ ಶುಲ್ಕದಲ್ಲಿ ರಿಯಾಯಿತಿ ಸೇರಿದಂತೆ ವಿವಿಧ ಸೌಲಭ್ಯಗಳು ದೊರೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಸೌಲಭ್ಯಗಳು ಗುರಿ ಆಧಾರಿತವಾಗಿದ್ದು, ಹೊಸದಾಗಿ ಅತೀ ಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳನ್ನು ಆರಂಭಿಸಲು ಆಸಕ್ತಿ ಹೊಂದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉದ್ಯಮಿಗಳು ಸೆಪ್ಟೆಂಬರ್ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ಲಾಟ್ ನಂ. 36-ಸಿ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಣಂಗೂರು ಟೋಲ್‌ನಲ್ಲಿ ರೈತರಿಂದ ಹೆದ್ದಾರಿ ತಡೆ

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ಸಕ್ಕರೆ ಬೆಲೆ ಪರಿಷ್ಕರಣೆ, ಕಳೆದ ಸಾಲಿನ...

ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆ: ಜಿಲ್ಲೆಗಳಲ್ಲಿ  ಶೇ.75.62 ರಷ್ಟು ಮತದಾನ

"ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು...

ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ...

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು...