ಉಡುಪಿ | ಚಾಲಕನಿಗೆ ಹಠಾತ್ ಹೃದಯಾಘಾತ; ಡಿವೈಡರ್‌ಗೆ ಡಿಕ್ಕಿಯಾದ ಶಾಲಾ ಬಸ್, ತಪ್ಪಿದ ಭಾರಿ ದುರಂತ

Date:

ಮಣಿಪಾಲದಲ್ಲಿ ಸೋಮವಾರ ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾಗಿ ಬಸ್ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.

- Advertisement -

ಮಣಿಪಾಲದ ಮಾಧವ ಕೃಪಾ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಪರಿಸ್ಥಿತಿಯನ್ನು ಅರಿತ ಅವರು ಬಸ್ಸಿನ ನಿಯಂತ್ರಣ ಕಳೆದುಕೊಳ್ಳುವ ಮುನ್ನವೇ ವಾಹನವನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಅದೃಷ್ಟವಶಾತ್ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಚಾಲಕನ ಸಮಯೋಚಿತ ಕ್ರಮದಿಂದ ದೊಡ್ಡ ದುರಂತವೊಂದು ತಪ್ಪಿದೆ.

ಘಟನೆಯ ಬಳಿಕ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ತಕ್ಷಣ ಚಾಲಕನ ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಬ್ಬು ಬೆಲೆ ನಿಗದಿಗೆ ತಜ್ಞರ ವರದಿ ಬರಬೇಕಾಗಿದೆ: ಸಚಿವ ರುದ್ರಪ್ಪ ಲಮಾಣಿ

"ಸಂಬಂಧಿಸಿದ ಸಮಸ್ಯೆ ಪರಿಹಾರಕ್ಕೆ ತಜ್ಞರ ಸಮಿತಿಯ ವರದಿ ಬರಬೇಕಾಗಿದೆ. ವರದಿ ಬಂದ...

ಬಾಗೇಪಲ್ಲಿ | ಶಾಸಕ ಸುಬ್ಬಾರೆಡ್ಡಿಯ ಎಲ್ಲಾ ಹಗರಣಗಳ ವಿರುದ್ದ ನ.11 ರಂದು ಬೃಹತ್ ಹೋರಾಟ

ಸರ್ಕಾರಿ ಅಧಿಕಾರಿಗಳಿಂದ, ಕ್ರಷರ್ ಮಾಲೀಕರಿಂದ ವಸೂಲಿ ಮಾಡಿರುವ ಹಾಗೂ ಬಡ ರೈತರಿಂದ...

ವಿಜಯಪುರ | ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ ಕಾಳಜಿ: ಹೊನವಾಡದಲ್ಲಿ ಸರ್ಕಾರಿ ಶಾಲೆಗೆ ನೂತನ ಕಟ್ಟಡ

ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ, ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ...

ಕೋಲಾರ | ನಾನು ಮುಂದೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ‌, ಸಚಿವರಾಗುವುದು ಖಚಿತ : ವರ್ತೂರ್ ಪ್ರಕಾಶ್

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುವ...