ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆಯು 2026ರ ಜುಲೈ 24ರಂದು ‘ಆರೆಂಜ್ ಅಲರ್ಟ್’ ಘೋಷಿಸಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜುಲೈ 25, 2026 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಡಿಪ್ಲೊಮಾ ಮತ್ತು ಐಟಿಐ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.







