ಉಡುಪಿ | ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಗೆ ಆಯುರ್ವೇದ–ಆಧುನಿಕ ವಿಜ್ಞಾನ ಸಂಯೋಜನೆ ಅಗತ್ಯ

Date:

ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಸಾಂಪ್ರದಾಯಿಕ ಜ್ಞಾನವನ್ನು ಆಧುನಿಕ ವೈಜ್ಞಾನಿಕ ಸಂಶೋಧನೆ ಹಾಗೂ ಜಾಗತಿಕ ಆರೋಗ್ಯ ಸೇವೆಗಳೊಂದಿಗೆ ಸಂಯೋಜಿಸುವ ಅಗತ್ಯವಿದೆ ಎಂದು ನ್ಯಾಷನಲ್ ಕಮಿಷನ್ ಫಾರ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ ಅಧ್ಯಕ್ಷೆ ಪ್ರೊ.(ಡಾ.) ಮನಿಷಾ ಉಪೇಂದ್ರ ಕೊಥೇಕರ್ ಅಭಿಪ್ರಾಯಪಟ್ಟರು.

- Advertisement -

ಉಡುಪಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಭಾವಪ್ರಕಾಶ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾದ ‘ಕ್ಷಮತ್ವಂ-2026’ ಆರನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ...

ಒಬಿಸಿ ಮೀಸಲಾತಿ ಸೌಲಭ್ಯ ಪಡೆಯಲು 'ಕೆನೆಪದರ' ನಿರ್ಧರಿಸುವಾಗ ಕೇವಲ ಪೋಷಕರ ವಾರ್ಷಿಕ ವೇತನವನ್ನೇ ಏಕೈಕ ಮಾನದಂಡವಾಗಿ ಪರಿಗಣಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಮಾರ್ಚ್ ತೀರ್ಪನ್ನು ಪುನರುಚ್ಚರಿಸಿದೆ. 1993ರ ಮೂಲ ನಿಯಮಗಳೇನು? ಕೆಳಹಂತದ...

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಕಾಣಿಸಿಕೊಂಡ ಅನಿರೀಕ್ಷಿತ ತಾಂತ್ರಿಕ ದೋಷವು ಜಾಗತಿಕ ಮಟ್ಟದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಗುರುವಾರ (ನವೆಂಬರ್ 12) ಸಂಜೆಯಿಂದ...

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ,...

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೇ ಐದು ವರ್ಷಗಳ ಶಿಕ್ಷೆಯ ಆದೇಶ ಹೊರಡಿಸಿ, ಕೊನೆಗೆ ತಾವೇ ಆರು ತಿಂಗಳ ಜೈಲುವಾಸ ಅನುಭವಿಸಿದ್ದವರು,...

ಆಯುರ್ವೇದದ ಸಾಂಪ್ರದಾಯಿಕ ಚಿಕಿತ್ಸಾ ಜ್ಞಾನವನ್ನು ವೈಜ್ಞಾನಿಕ ಸಂಶೋಧನೆಯ ಮೂಲಕ ಮತ್ತಷ್ಟು ಬಲಪಡಿಸುವುದರ ಜತೆಗೆ, ಅದನ್ನು ಜಾಗತಿಕ ಆರೋಗ್ಯ ವ್ಯವಸ್ಥೆಯೊಂದಿಗೆ ಪರಿಣಾಮಕಾರಿಯಾಗಿ ಸಂಪರ್ಕಿಸುವ ಅಗತ್ಯವಿದೆ. ವಿಶೇಷವಾಗಿ ಸ್ವಯಂ ನಿರೋಧಕ ಕಾಯಿಲೆಗಳಂತಹ ಸಂಕೀರ್ಣ ಆರೋಗ್ಯ ಸಮಸ್ಯೆಗಳ ನಿರ್ವಹಣೆಯಲ್ಲಿ ಸಮಗ್ರ ಹಾಗೂ ಸಂಶೋಧನಾ ಆಧಾರಿತ ವಿಧಾನಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಅವರು ಹೇಳಿದರು.

ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂ ಆಯುರ್ವೇದ ಸಂಸ್ಥೆಗಳ ನಿರ್ದೇಶಕ ಪ್ರೊ. ಡಾ. ಪ್ರಸನ್ನ ಎನ್. ರಾವ್ ಮಾತನಾಡಿ, ‘ಕ್ಷಮತ್ವಂ-2026’ ಜಾಗತಿಕ ಉಪಕ್ರಮವಾಗಿದ್ದು, ವಿಶ್ವದ ವಿವಿಧ ಭಾಗಗಳಿಂದ ತಜ್ಞರು, ಸಂಶೋಧಕರು ಹಾಗೂ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಆಯುರ್ವೇದವನ್ನು ಜಾಗತಿಕ ಆರೋಗ್ಯ ವ್ಯವಸ್ಥೆಯೊಂದಿಗೆ ಸಂಪರ್ಕಿಸುವ ನಿಟ್ಟಿನಲ್ಲಿ ಇಂತಹ ಅಂತಾರಾಷ್ಟ್ರೀಯ ವೇದಿಕೆಗಳು ಮಹತ್ವದ್ದಾಗಿವೆ ಎಂದರು.

ಭಾರತ ಸರಕಾರದ ಆಯುಷ್ ಸಚಿವಾಲಯದ ಆಯುರ್ವೇದ ಸಲಹೆಗಾರ ಡಾ. ಕೌಸ್ತುಭ್ ಉಪಾಧ್ಯಾಯ, ಕರ್ನಾಟಕ ಸರಕಾರದ ಆಯುಷ್ ಇಲಾಖೆಯ ಆಯುಕ್ತ ಡಾ. ಸುನಿಲ್ ಪನ್ವಾರ್ ಹಾಗೂ ಆಯುರ್ವೇದ ರಷ್ಯಾ-ಇಂಡಿಯಾ ಅಸೋಸಿಯೇಷನ್ ಅಧ್ಯಕ್ಷೆ ಡಾ. ಅನಿತಾ ಕರಿಲಿಯೊ ಅರ್ಕಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಸಂದೇಶವನ್ನು ವಾಚಿಸಲಾಯಿತು. ಸಮ್ಮೇಳನದ ಅಂಗವಾಗಿ ಡಾ. ಪದ್ಮಕಿರಣ್ ಸಿ. ಅವರ ‘ಪಂಚಕರ್ಮ ಶ್ಲೋಕ ಮಂಜರಿ’ ಹಾಗೂ ಡಾ. ಅರ್ಹಂತ್ ಕುಮಾರ್ ಎ. ಅವರ ‘ಇಂಗ್ಲಿಷ್ ಟ್ರಾನ್ಸ್‌ಲೆಶನ್ ಆಫ್ ಸುಶ್ರೂತ ಸಂಹಿತಾ- ಪಾರ್ಟ್-1’ ಕೃತಿಗಳನ್ನು ಬಿಡುಗಡೆ ಮಾಡಲಾಯಿತು.

ಸಮ್ಮೇಳನದ ಮುಖ್ಯ ಭಾಷಣಕಾರ ಪ್ರೊ. ಎಮೆರಿಟಸ್ ಡಾ. ಶ್ರೀನಿವಾಸ್ ಹೆಜಮಾಡಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿಗಳಾದ ಡಾ. ಪ್ರಸನ್ನ ಎನ್. ಮೊಗಸಾಲೆ ಹಾಗೂ ಡಾ. ಅರ್ಹಂತ್ ಕುಮಾರ್ ಎ. ಉಪಸ್ಥಿತರಿದ್ದರು. ಎಸ್‌ಡಿಎಂ ಆಯುರ್ವೇದ ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ. ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಅಶೋಕ್ ಕುಮಾರ್ ಬಿ.ಎನ್. ವಂದಿಸಿದರು. ಡಾ. ಅರುಣ್ ಹಾಗೂ ಡಾ. ಶುಭಾ ಪಿ.ಯು. ಕಾರ್ಯಕ್ರಮ ನಿರೂಪಿಸಿದರು.

ವೈಜ್ಞಾನಿಕ ಗೋಷ್ಠಿಗಳು

ಸಮ್ಮೇಳನದ ಬಳಿಕ ನಡೆದ ವೈಜ್ಞಾನಿಕ ಗೋಷ್ಠಿಗಳಲ್ಲಿ ದೇಶ-ವಿದೇಶಗಳ ತಜ್ಞರು ವಿವಿಧ ಆಯಾಮಗಳ ಕುರಿತು ವಿಚಾರ ಮಂಡಿಸಿದರು. ಡಾ. ವಿಶ್ವೇಶ್ವರಯ್ಯ ಪ್ರಕಾಶ್, ಡಾ. ಭೂಷಣ್ ಪಾಟವರ್ಧನ್, ಡಾ. ಜಾರ್ಜ್ ಲೂಯಿಸ್ ಬೆರಾರ್, ಡಾ. ರಾಮಮನೋಹರ್ ಹಾಗೂ ಡಾ. ಪ್ರಸನ್ನ ಎನ್. ಮೊಗಸಾಲೆ ಉಪನ್ಯಾಸ ನೀಡಿದರು.

ಎಸ್‌ಡಿಎಂ ಆಯುರ್ವೇದ ಕಾಲೇಜು, ಹಾಸನದ ಪ್ರಾಂಶುಪಾಲೆ ಡಾ. ಶೈಲಜಾ, ಎಸ್‌ಡಿಎಂ ಆಯುರ್ವೇದ ಕಾಲೇಜು, ಬೆಂಗಳೂರಿನ ಪ್ರಾಂಶುಪಾಲ ಡಾ. ಜಗದೀಶ್ ಕೆ., ಎಸ್‌ಡಿಎಂಸಿ ಎಎಚ್‌ಆರ್‌ಸಿ, ಉಡುಪಿಯ ಉಪಪ್ರಾಂಶುಪಾಲ ಡಾ. ನಿರಂಜನ್ ರಾವ್ ಹಾಗೂ ಡಾ. ನಾಗರಾಜ್ ಎಸ್. ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ಸಂಚಾರ ಪೊಲೀಸ್ ಠಾಣೆಯ ಮೂವರು ಹೆಡ್ ಕಾನ್ಸ್‌ಟೇಬಲ್‌ಗಳು ಅಮಾನತು

ಶಿರಸಿ: ಕರ್ತವ್ಯದ ವೇಳೆ ಮೇಲಧಿಕಾರಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬೆದರಿಕೆ ಹಾಕಿದ ಆರೋಪದ...

ಚಿಕ್ಕಮಗಳೂರು | ಜೇನುನೋಣ ದಾಳಿಗೆ ಕಾರ್ಮಿಕ ಸಾವು 

ತರೀಕೆರೆ ತಾಲೂಕಿನ ಕೋರನಹಳ್ಳಿ ಗ್ರಾಮದಲ್ಲಿ ಹೊಲದಲ್ಲಿ ಬಾಳೆ ಗಿಡಗಳನ್ನು ನೆಡುವ ವೇಳೆ ಏಕಾಏಕಿ...

ಚಿಕ್ಕಮಗಳೂರು | ಕಾಡಾನೆ ಸಂಚಾರ: ಎಚ್ಚರಿಕೆವಹಿಸಲು ಅರಣ್ಯ ಇಲಾಖೆ ಸೂಚನೆ 

ನರಸಿಂಹರಾಜಪುರ ತಾಲೂಕಿನ ಮೆಣಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆ...

ಚಿಂತಾಮಣಿ | ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ;108 ಆಂಬುಲೆನ್ಸ್ ವಿಳಂಬಕ್ಕೆ ಸಾರ್ವಜನಿಕರ ಆಕ್ರೋಶ

ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ...