ಉಡುಪಿ | ಜನಪ್ರತಿನಿಧಿಯೋ ಅಥವಾ ಗೂಂಡಾನೋ? – ಯಷ್ಪಾಲ್ ಸುವರ್ಣ ವಿರುದ್ಧ ಎಸ್‌ಡಿಪಿಐ ವಾಗ್ದಾಳಿ

Date:

ನಿನ್ನೆ ಉಡುಪಿಯಲ್ಲಿ CJP ವಿರುದ್ಧ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಷ್ಪಾಲ್ ಸುವರ್ಣ ಅವರು ಮಾಡಿದ ಭಾಷಣವು ಅತ್ಯಂತ ಬೇಜವಾಬ್ದಾರಿಯುತ, ಬೆದರಿಕೆ ಧಾಟಿಯ ಹಾಗೂ ಗೂಂಡಾ ಮನಸ್ಥಿತಿಯನ್ನು ಪ್ರತಿಬಿಂಬಿಸುವ ರೀತಿಯದ್ದಾಗಿದೆ ಎಂದು ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ತಮ್ಮ ಮಾತುಗಳಲ್ಲಿ ಸಂಯಮ ಹಾಗೂ ಜವಾಬ್ದಾರಿಯನ್ನು ಪಾಲಿಸಬೇಕಾಗುತ್ತದೆ. ಆದರೆ ಶಾಸಕ ಯಷ್ಪಾಲ್ ಸುವರ್ಣ ಅವರು ಪದೇಪದೇ ವಿವಾದಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಜಿಲ್ಲೆಯ ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಾಗೂ ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಹೋರಾಡುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ. ಆದರೆ ಸರ್ಕಾರದ ವಿರುದ್ಧ ನಡೆದ ಪ್ರಜಾಸತ್ತಾತ್ಮಕ ಪ್ರತಿಭಟನೆಗೆ ಪ್ರತಿಕ್ರಿಯೆಯಾಗಿ ಬೆದರಿಕೆ, ವೈಯಕ್ತಿಕ ನಿಂದನೆ ಅಥವಾ ಹಿಂಸೆಯ ಸಂದೇಶವನ್ನು ನೀಡುವ ರೀತಿಯ ಹೇಳಿಕೆಗಳು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ಇಂತಹ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಹಾಗೂ ಉದ್ವಿಗ್ನತೆಯನ್ನು ಸೃಷ್ಟಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಆದಿ ಉಡುಪಿ ಹಾಜಬ್ಬ-ಹಸನಬ್ಬ ಬೆತ್ತಲೆ ಪ್ರಕರಣದ ಮೂಲಕ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದ ಶಾಸಕರು, ಇಂತಹ ಅನಾಗರಿಕ ಹಾಗೂ ಗೂಂಡಾ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಹೇಳಿಕೆಗಳಿಂದಲೇ ಪದೇಪದೇ ಟೀಕೆಗೆ ಗುರಿಯಾಗಿದ್ದಾರೆ. ಅಲ್ಲದೆ, ಇಂತಹ ವರ್ತನೆಯ ಹಿನ್ನೆಲೆಯಲ್ಲಿ ಅವರು ಕಳೆದ ವರ್ಷ ವಿಧಾನಸಭೆಯಿಂದ 6 ತಿಂಗಳ ಅವಧಿಗೆ ಅಮಾನತು ಶಿಕ್ಷೆಗೆ ಗುರಿಯಾಗಿದ್ದನ್ನು ಸ್ಮರಿಸಬಹುದು ಎಂದು ತಿಳಿಸಿದ್ದಾರೆ.

ವಿರೋಧ ಪಕ್ಷದ ನಾಯಕನ ವಂಶವನ್ನೇ ಧ್ವಂಸ ಮಾಡುತ್ತೇವೆ ಎಂಬ ಆಕ್ಷೇಪಾರ್ಹ ಹಾಗೂ ಬೆದರಿಕೆ ಧಾಟಿಯ ಭಾಷೆಯನ್ನು ಬಳಸಿರುವುದು ಕಾನೂನಿನ ಮೇಲಿನ ಗೌರವದ ಕೊರತೆಯನ್ನು ತೋರಿಸುತ್ತದೆ. ಆದ್ದರಿಂದ ರಾಜ್ಯ ಸರ್ಕಾರವು ಈ ಹೇಳಿಕೆಗಳ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಶಾಸಕರು ಒಂದು ವಿಷಯವನ್ನು ಮನಗಾಣಬೇಕು, ಬೆದರಿಕೆ ಮತ್ತು ಪ್ರಚೋದನೆಯ ರಾಜಕಾರಣದಿಂದ ಜನರನ್ನು ಮೌನಗೊಳಿಸಲು ಸಾಧ್ಯವಿಲ್ಲ. ಇಂದಿನ ಯುವ ಸಮುದಾಯವು ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಕಾನೂನಿನ ಮೇಲೆ ನಂಬಿಕೆ ಇಟ್ಟಿದ್ದು, ಇಂತಹ ಹೇಳಿಕೆಗಳಿಗೆ ಹೆದರುವುದಿಲ್ಲ. ಆದ್ದರಿಂದ ಶಾಸಕರು ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ಜವಾಬ್ದಾರಿಯುತವಾಗಿ ಮಾತನಾಡುವುದು ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಒಳಿತಾಗುತ್ತದೆ ಎಂದು ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಓವರ್‌ಪಾಸ್‌ ಉದ್ಘಾಟನೆಯಾದರೂ ಸರ್ವಿಸ್‌ ರಸ್ತೆಗೆ ಮುಕ್ತಿ ಸಿಕ್ಕಿಲ್ಲ; ಧೂಳಿನಿಂದ ವಾಹನ ಸವಾರರಿಗೆ ಸಂಕಷ್ಟ

ಉಡುಪಿ ನಗರದ ಕರಾವಳಿ ಜಂಕ್ಷನ್‌ನಿಂದ ಕಿನ್ನಿಮೂಲ್ಕಿವರೆಗಿನ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಸರ್ವಿಸ್‌...

ಯಲ್ಲಾಪುರ | ವನ್ಯಜೀವಿಗಳ ಅಂಗಾಂಗ ವಶ ಪ್ರಕರಣ: ಸಮಗ್ರ ತನಿಖೆಗೆ ಸೋಮೇಶ್ವರ ನಾಯ್ಕ ಆಗ್ರಹ

ಯಲ್ಲಾಪುರ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಅಂಗಾಂಗಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಹಲವು...

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...