ಉಡುಪಿ | ಮಣ್ಣು ಕುಸಿತದಿಂದ ಬಂದ್ ಆಗಿದ್ದ ಬಾಳೆಬರೆ ಘಾಟ್‌ ರಸ್ತೆ: ಲಘು ವಾಹನಗಳಿಗೆ ಮತ್ತೆ ಅವಕಾಶ

Date:

ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.

- Advertisement -

ಬಾಳೆಬರೆ ಘಾಟ್‌ನ ಸರಪಳಿ 42.10ರಿಂದ 42.20ರಲ್ಲಿನ ಹೇರ್‌ಪಿನ್ ತಿರುವಿನಲ್ಲಿ ಮೇ ತಿಂಗಳ ಕೊನೆಯಲ್ಲಿ ಬಿದ್ದ ಮಳೆಯಿಂದ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣಿನ ಕುಸಿತವಾಗಿ ಈ ಮಾರ್ಗದಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಪ್ರಸ್ತುತ ಈ ಹೇರ್‌ಪಿನ್ ತಿರುವಿನ ಭಾಗಶ: ಉದ್ದದಲ್ಲಿ ತಡೆಗೋಡೆಯನ್ನು ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯೊಂದಿಗೆ ನಿರ್ಮಿಸಿದ್ದು, ರಸ್ತೆಯ ಭಾಗದಲ್ಲಿ ಲೀನ್ ಕಾಂಕ್ರೀಟ್ ಹಾಕಲಾಗಿದೆ. ಪ್ರಸ್ತುತ ರಸ್ತೆಯಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಬಸ್ ಸೇರಿದಂತೆ ಇತರೆ ಪ್ರಯಾಣಿಕರು ಸಂಚರಿಸುವ ವಾಹನಗಳು ಹಾಗೂ ಲಘು ಗೂಡ್ಸ್ ವಾಹನಗಳು ಸಂಚರಿಸಲು ಸಾರ್ವಜನಿಕ ಹಿತದೃಷ್ಟಿಯಿಂದ ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾ ಗಿದೆ. ಶಿವಮೊಗ್ಗದ ಜಿಲ್ಲಾದಿಕಾರಿಗದಳು ಈಗಾಗಲೇ ಬಾಳೆಬರೆ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದರು.

ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್‌ನಲ್ಲಿ ಸರಪಳಿ 44.60ರಿಂದ 53.00ರವರೆಗಿನ ಘಾಟಿ ರಸ್ತೆ ಲೋಕೋಪಯೋಗಿ ಇಲಾಖೆಯ ಕುಂದಾಪುರ ಉಪವಿಭಾಗ ವ್ಯಾಪ್ತಿಗೆ ಬರುತ್ತದೆ. ಈ ಘಾಟ್ ರಸ್ತೆಯಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಬಸ್ ಸೇರಿದಂತೆ ಇತರೆ ಪ್ರಯಾಣಿಕರು ಸಂಚರಿಸುವ ವಾಹನ ಗಳು ಹಾಗೂ ಲಘು ಗೂಡ್ಸ್ ವಾಹನಗಳು ಸಂಚರಿಸಲು ಜೂ15ರಿಂದ ಅನುವು ಮಾಡಿಕೊಡ ಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ, ಹೋರಾಟವೇ ಪ್ರೇರಣೆ: ಪ್ರೊ. ಸಿ.ಎಂ ತ್ಯಾಗರಾಜ

ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರು ಪ್ರತಿಪಾದಿಸಿದ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ...

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ...