ಉಡುಪಿ | ಪ್ರವಾಸದ ವೇಳೆ ದುರಂತ : ಶಿರೂರು ಸಂಕದಗುಂಡಿ ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Date:

ಪ್ರವಾಸಕ್ಕೆ ಬಂದಿದ್ದ ಹಾವೇರಿ ಮೂಲದ 16 ವರ್ಷದ ವಿದ್ಯಾರ್ಥಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ.

- Advertisement -

ಮೃತರನ್ನು ಆಯುಷ್ (16) ಎಂದು ಗುರುತಿಸಲಾಗಿದೆ. ಹಾವೇರಿ ಸಮೀಪದ ಕೃಷಿನಗರದ ಒಂದೇ ಕುಟುಂಬದ ಏಳು ಮಂದಿ ಮುರುಡೇಶ್ವರ ಹಾಗೂ ಕನ್ಯಾಕುಮಾರಿ ಪ್ರವಾಸಕ್ಕೆ ತೆರಳಿದ್ದು, ಮುರುಡೇಶ್ವರ ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆ ಬಳಿ ವಿಶ್ರಾಂತಿಗಾಗಿ ವಾಹನ ನಿಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ವೇಳೆ ಮನೆಯವರು ಊಟದ ತಯಾರಿಯಲ್ಲಿ ನಿರತರಾಗಿದ್ದಾಗ ಆಯುಷ್ ಹಾಗೂ ಮತ್ತೊಬ್ಬ ಬಾಲಕ ಸಮೀಪದ ಹೊಳೆಗೆ ಸ್ನಾನಕ್ಕೆ ತೆರಳಿದ್ದರು. ಹೊಳೆಯ ಆಳವಿರುವ ಪ್ರದೇಶದಲ್ಲಿ ಈಜಲು ಇಳಿದ ಆಯುಷ್‌ಗೆ ನೀರಿನ ಆಳದ ಅರಿವಿಲ್ಲದೆ ಮುಳುಗಿದ್ದಾನೆ. ತಕ್ಷಣ ಜೊತೆಯಲ್ಲಿದ್ದ ಬಾಲಕ ಮನೆಯವರಿಗೆ ಮಾಹಿತಿ ನೀಡಿದ್ದು, ರಕ್ಷಿಸಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸುಮಾರು ಒಂದು ಗಂಟೆ ಕಾಲ ಶೋಧ ಕಾರ್ಯ ನಡೆಸಿ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದರು.

ಮೃತ ಬಾಲಕನ ತಂದೆ-ತಾಯಿ ಗುಜರಾತ್‌ನಲ್ಲಿ ಸಣ್ಣ ವ್ಯಾಪಾರ ನಡೆಸುತ್ತಿದ್ದು, ಆಯುಷ್ ಅಲ್ಲಿಯೇ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದನು. ತಾಯಿ, ಸಹೋದರ ಸೇರಿದಂತೆ ಕುಟುಂಬದ ಏಳು ಮಂದಿ ಪ್ರವಾಸದಲ್ಲಿದ್ದರು ಎನ್ನಲಾಗಿದೆ.

ಈ ಹಿಂದೆ ಕೂಡ ಇದೇ ಪ್ರದೇಶದಲ್ಲಿ ಹಲವು ಅವಘಡಗಳು ಸಂಭವಿಸಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಕುರಿತು ಬೈಂದೂರು ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...