ಉಡುಪಿ | ಶಿರೂರಿನಲ್ಲಿ ಭೀಕರ ಸರಣಿ ಅಪಘಾತ; ಬೈಕ್ ಸವಾರ ಸಾವು; 4 ಬೈಕ್‌ಗಳಿಗೆ ಲಾರಿ ಡಿಕ್ಕಿ

Date:

ಅಪಘಾತಕ್ಕೀಡಾಗಿದ್ದ ವಾಹನವೊಂದನ್ನು ತೆರವುಗೊಳಿಸುವ ಕಾರ್ಯಾಚರಣೆ ವೇಳೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಶಿರೂರು ಸಮೀಪ ಗುರುವಾರ ನಡೆದಿದೆ.

- Advertisement -

ಮೃತರನ್ನು ಶಿರೂರಿನ ನಾಗೇಂದ್ರ ಮಹಾಲೆ (45) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಹೆದ್ದಾರಿಯಲ್ಲಿ ಸರಕು ತುಂಬಿದ್ದ ಲಾರಿಯೊಂದು ಅಪಘಾತಕ್ಕೀಡಾಗಿದ್ದು, ಅದನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕವಾಗಿ ತಡೆ ನೀಡಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.

Advertisements

ಈ ಸಂದರ್ಭದಲ್ಲಿ ಇಳಿಜಾರು ರಸ್ತೆಯಲ್ಲಿ ವೇಗವಾಗಿ ಬಂದ ಮತ್ತೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹೈವೆ ಪಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ನಾಲ್ಕು ಬೈಕ್‌ಗಳಿಗೂ ಡಿಕ್ಕಿ ಹೊಡೆದಿದ್ದು, ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ನಾಗೇಂದ್ರ ಮಹಾಲೆ ಮೃತಪಟ್ಟಿದ್ದಾರೆ.

WhatsApp Image 2026 09 10 at 11.57.09 AM

ಅಪಘಾತಕ್ಕೆ ಕಾರಣವಾದ ಲಾರಿ ಕೇರಳದಿಂದ ಮಹಾರಾಷ್ಟ್ರಕ್ಕೆ ರಬ್ಬರ್ ಸಾಗಿಸುತ್ತಿತ್ತು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website | + posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...