ಉಡುಪಿ | ಕಾರಂತರ ಸಾಹಿತ್ಯ, ಸಾಧನೆ ಯುವಪೀಳಿಗೆಗೆ ಪ್ರೇರಣೆ: ಪ್ರೊ. ವಾದಿರಾಜ ಭಟ್

Date:

ಅಡಂಬರದ ಬದುಕನ್ನು ಇಷ್ಟಪಡದೆ ಸರಳ ಜೀವನ, ನೇರ ನಡೆ-ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ ಡಾ. ಶಿವರಾಮ ಕಾರಂತರು ಯಕ್ಷಗಾನದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದು, ಯಕ್ಷಗಾನದ ಉಳಿವಿಗಾಗಿ ಮಹತ್ವದ ಕೊಡುಗೆ ನೀಡಿದ್ದಾರೆ. ಕಾರಂತರಂತಹ ಸಾಹಿತಿಯನ್ನು ಪಡೆದಿರುವುದು ನಾಡಿಗೆ ಹೆಮ್ಮೆಯ ಸಂಗತಿ ಎಂದು ಜಾನಪದ ವಿದ್ವಾಂಸ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ. ಕನರಾಡಿ ವಾದಿರಾಜ ಭಟ್ ಹೇಳಿದರು.

- Advertisement -

ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಹಾಗೂ ಜಿಲ್ಲಾ ರಂಗೋಲಿ ಕಲಾ ಪರಿಷತ್ (ರಿ.) ಸಹಯೋಗದಲ್ಲಿ ಬೈಂದೂರಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳಿಗಾಗಿ ಕಾರಂತರು-9 ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕಾರಂತರ ಪರಿಚಯ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಂತರು ಮಕ್ಕಳ ಭೌತಿಕ ಬೆಳವಣಿಗೆಯ ಜೊತೆಗೆ ಬೌದ್ಧಿಕ ವಿಕಾಸಕ್ಕೂ ಪೂರಕವಾಗುವಂತೆ ಮಕ್ಕಳ ಸಾಹಿತ್ಯವನ್ನು ರಚಿಸಿದ್ದಾರೆ. ಮಕ್ಕಳ ಕೌಶಲ್ಯಾಭಿವೃದ್ಧಿಗೆ ಇಂತಹ ಕಾರ್ಯಕ್ರಮಗಳು ಪೂರಕವಾಗಿದ್ದು, ಅವರ ಸಂಪೂರ್ಣ ಪಾಲ್ಗೊಳ್ಳುವಿಕೆಯಿಂದ ಕಾರ್ಯಕ್ರಮಗಳು ಅರ್ಥಪೂರ್ಣವಾಗುತ್ತವೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಡಾ. ಶಿವರಾಮ ಕಾರಂತರು ನಮ್ಮ ನಾಡು-ನುಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ರಂಗೋಲಿ ಕಲೆಯೊಂದಿಗೆ ಇಂದಿನ ಪೀಳಿಗೆಗೆ ಕಾರಂತರನ್ನು ಪರಿಚಯಿಸುವುದು ವಿಶೇಷ ಕಾರ್ಯಕ್ರಮವಾಗಿದೆ. ನಾಡಿನ ಏಳಿಗೆಗಾಗಿ ಶ್ರಮಿಸಿದ ಮಹನೀಯರ ಆದರ್ಶಗಳನ್ನು ಮಕ್ಕಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಮಾತನಾಡಿ, ಮಕ್ಕಳಲ್ಲಿ ಸೃಜನಶೀಲ ಚಟುವಟಿಕೆ ಹಾಗೂ ಡಾ. ಶಿವರಾಮ ಕಾರಂತರ ವ್ಯಕ್ತಿತ್ವವನ್ನು ಪರಿಚಯಿಸಿ, ಆ ಮೂಲಕ ಅವರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಟ್ರಸ್ಟ್ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ವಲಯ ಹಾಗೂ ಶಾಲಾ ಮಟ್ಟದ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಕುಮಾರ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವೆಂಕಟರಮಣ ಎಚ್., ರೋಟರಿ ಕ್ಲಬ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅರುಣ್ ಕುಮಾರ್ ಶಿರೂರು, ಡಾ. ಶಿವರಾಮ ಕಾರಂತ ಟ್ರಸ್ಟ್ ಸದಸ್ಯ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.

ರಂಗೋಲಿ ಕಲಾ ಪರಿಷತ್ತಿನ ಅಧ್ಯಕ್ಷೆ ಡಾ. ಭಾರತಿ ಮರavantೆ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಶಶಿರೇಖಾ ನಿರೂಪಿಸಿದರು. ಬೈಂದೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಗಣಪತಿ ಹೊಬಳಿದಾರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕೆಪಿಎಸ್ ಮ್ಯಾಗ್ನೆಟ್ ಯೋಜನೆ’ಯನ್ನು ವಿರೋಧಿಸಿ ಪ್ರತಿಭಟನೆ

ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಹೆಸರಿನಲ್ಲಿ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಮ್ಯಾಗ್ನೆಟ್...

ಕುಮಟಾ, ಗೋಕರ್ಣ ಹಾಗೂ ಹೊನ್ನಾವರ ಭಾಗಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಹೆಸ್ಕಾಂ ವತಿಯಿಂದ ವಿವಿಧ ವಿದ್ಯುತ್ ಮಾರ್ಗಗಳಲ್ಲಿ ನಿರ್ವಹಣೆ ಹಾಗೂ ತುರ್ತು ಕಾಮಗಾರಿ...

ಹಾಸನ | ಬಿಜೆಪಿ ಮುಖಂಡ ಮಹಿಳೆ ವಂಚನೆ ಆರೋಪ; ಪ್ರಕರಣ ದಾಖಲು 

ಆಲೂರು ತಾಲೂಕಿನಲ್ಲಿ ಬಿಜೆಪಿ ಮುಖಂಡ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪದಡಿ...

ಹಾಸನ | ಮದನಗೌಡರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಹ್ವಾನ; ಅನಂತಪುರಿ ಕನ್ನಡ ಉತ್ಸವ 2026

ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಡಿಸೆಂಬರ್ 3, 2026ರಂದು ನಡೆಯಲಿರುವ ಅನಂತಪುರಿ ಕನ್ನಡ...