ಉಡುಪಿ | ಶೋಕಮಾತಾ ಚರ್ಚಿನ ನೂತನ ಧರ್ಮಗುರುಗಳಾಗಿ ವಂ| ಡೆನಿಸ್ ಡೆಸಾ ಅಧಿಕಾರ ಸ್ವೀಕಾರ

Date:

ಉಡುಪಿ ನಗರದ ಪ್ರತಿಷ್ಠಿತ ಶೋಕಮಾತಾ ಚರ್ಚ್ ನ ನೂತನ ಧರ್ಮಗುರುಗಳಾಗಿ ಅತೀ ವಂ| ಡೆನಿಸ್ ಡೆಸಾ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

- Advertisement -

ತೊಟ್ಟಂ ಸಂತ ಅನ್ನಮ್ಮ ಚರ್ಚಿನಿಂದ ವರ್ಗಾವಣೆಗೊಂಡು ಉಡುಪಿ ಚರ್ಚಿಗೆ ಆಗಮಿಸಿದ ನೂತನ ಧರ್ಮಗುರುಗಳನ್ನು ಪ್ರಧಾನ ಧರ್ಮಗುರು ವಂ| ಚಾರ್ಲ್ಸ್ ಮಿನೇಜಸ್ ಹಾಗೂ ಉಪಾಧ್ಯಕ್ಷ ಮ್ಯಾಕ್ಷಿಮ್ ಡಿಸೋಜಾ ಆತ್ಮೀಯವಾಗಿ ಸ್ವಾಗತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಚರ್ಚಿನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದ ನೇತೃತ್ವವನ್ನು ಧರ್ಮಾಧ್ಯಕ್ಷರ ಪ್ರತಿನಿಧಿಯಾಗಿ ಕುಲಪತಿಗಳಾದ ವಂ| ಸ್ಟೀವನ್ ಡಿಸೋಜಾ ವಹಿಸಿದರು.

ಕಾರ್ಯಕ್ರಮದಲ್ಲಿ ಪುತ್ತೂರು ಚರ್ಚಿನ ವಂ| ಜೆ.ಬಿ. ಸಲ್ಡಾನಾ, ಶೋಕಮಾತಾ ಚರ್ಚಿನ ಸಹಾಯಕ ಧರ್ಮಗುರು ವಂ| ಲಿಯೋ ಪ್ರವೀಣ್ ಡಿಸೋಜಾ, ಸಂತ ಮೇರಿ ಶಾಲೆಗಳ ಪ್ರಾಂಶುಪಾಲರಾದ ವಂ| ವಿಜಯ್ ಡಿಸೋಜಾ, ಮೂಡುಬೆಳ್ಳೆ ಚರ್ಚಿನ ವಂ| ಜೋರ್ಜ್ ಡಿಸೋಜಾ, ವಂ| ಸ್ಟೀಫನ್ ರೊಡ್ರಿಗಸ್, ಉದ್ಯಾವರ ಚರ್ಚಿನ ವಂ| ಅನಿಲ್ ಡಿಸೋಜಾ, ತೊಟ್ಟಂ ಚರ್ಚಿನ ವಂ| ಹೆನ್ರಿ ಮಸ್ಕರೇನ್ಹಸ್, ನಿವೃತ್ತ ಧರ್ಮಗುರು ವಂ| ವಿಲಿಯಂ ಮಾರ್ಟಿಸ್ ಹಾಗೂ ಉಜ್ವಾಡ್ ಪತ್ರಿಕೆಯ ಸಂಪಾದಕರಾದ ವಂ| ಆಲ್ವಿನ್ ಉಪಸ್ಥಿತರಿದ್ದರು.

ಇದೇ ವೇಳೆ ಉಡುಪಿ ಚರ್ಚಿನಲ್ಲಿ ಪ್ರಧಾನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ವಂ| ಚಾರ್ಲ್ಸ್ ಮಿನೇಜಸ್ ಅವರನ್ನು ಶಿರ್ವ ಆರೋಗ್ಯ ಮಾತಾ ದೇವಾಲಯ ದ ಧರ್ಮಗುರುಗಳಾಗಿ ವರ್ಗಾವಣೆಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...