ಉಡುಪಿ | ವರದಿ ಮಾಡಿದ್ದಕ್ಕೆ ಪತ್ರಕರ್ತನ ಮೇಲೆ ವೈದ್ಯಾಧಿಕಾರಿಯಿಂದ ಹಲ್ಲೆ; ಖಂಡನೆ

Date:

ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ನಡೆದ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸಹಬಾಳ್ವೆ ಉಡುಪಿ ಜಿಲ್ಲೆ ತೀವ್ರವಾಗಿ ಖಂಡಿಸಿವೆ.

- Advertisement -

ಇಂದು ಬೆಳಗ್ಗೆ ಕುಂದಾಪುರದ ಹೋಟೆಲ್‌ನಲ್ಲಿ ಪತ್ನಿ ಹಾಗೂ ಸ್ನೇಹಿತರೊಂದಿಗೆ ಕುಳಿತಿದ್ದ ಸಂದರ್ಭದಲ್ಲಿ, ಕುಂದಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರು ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...
1012309993

ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿದ್ದರೆನ್ನಲಾದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಶ್ರೀಕಾಂತ್ ಅವರು ವರದಿ ಮಾಡಿದ್ದೇ ಹಲ್ಲೆಗೆ ಕಾರಣವೆಂದು ಆರೋಪಿಸಲಾಗಿದೆ. ಪತ್ರಕರ್ತರು ತಮ್ಮ ವೃತ್ತಿಪರ ಜವಾಬ್ದಾರಿಯನ್ನು ನಿರ್ವಹಿಸಿದ ಕಾರಣಕ್ಕೆ ಹಲ್ಲೆಗೊಳಗಾಗಿರುವುದು ಆತಂಕಕಾರಿ ಬೆಳವಣಿಗೆ ಎಂದು ಸಹಬಾಳ್ವೆ ಉಡುಪಿ ಜಿಲ್ಲೆ ತಿಳಿಸಿದೆ.

ಭ್ರಷ್ಟಾಚಾರ ಸೇರಿದಂತೆ ಯಾವುದೇ ಆರೋಪಗಳ ಸತ್ಯಾಸತ್ಯತೆ ತನಿಖೆ ಹಾಗೂ ಸಾಕ್ಷ್ಯಾಧಾರಗಳ ಮೂಲಕ ಕಾನೂನುಬದ್ಧವಾಗಿ ನಿರ್ಧಾರವಾಗಬೇಕು. ಕಾನೂನನ್ನು ಕೈಗೆತ್ತಿಕೊಂಡು ಪತ್ರಕರ್ತರ ಮೇಲೆ ಹಲ್ಲೆ ನಡೆಸುವುದು ನಾಗರಿಕ ಸಮಾಜದಲ್ಲಿ ಒಪ್ಪತಕ್ಕದ್ದಲ್ಲ ಎಂದು ವೇದಿಕೆ ಹೇಳಿದೆ.

ಅಧಿಕಾರಸ್ಥರನ್ನು ಪ್ರಶ್ನಿಸಿ ಅಕ್ರಮ ಹಾಗೂ ಭ್ರಷ್ಟಾಚಾರವನ್ನು ಬಯಲಿಗೆಳೆಯುವುದು ಪತ್ರಿಕಾ ಧರ್ಮವಾಗಿದ್ದು, ಪತ್ರಕರ್ತರ ಮೇಲೆ ಈ ರೀತಿಯ ದೈಹಿಕ ದಾಳಿ ನಡೆಸುವುದು ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಬೆಳವಣಿಗೆಯಾಗಿದೆ ಎಂದು ಸಂಘಟನೆಗಳು ಅಭಿಪ್ರಾಯಪಟ್ಟಿವೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ಒತ್ತಡಕ್ಕೆ ಮಣಿಯದೆ ಹಲ್ಲೆ ನಡೆಸಿದ ಡಾ. ಮಹೇಂದ್ರ ಕುಮಾರ್ ಶೆಟ್ಟಿ ವಿರುದ್ಧ ಸೂಕ್ತ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಹಾಗೂ ಸಹಬಾಳ್ವೆ ಉಡುಪಿ ಜಿಲ್ಲೆಯ ಪ್ರಧಾನ ಸಂಚಾಲಕ ಕೆ. ಫಣಿರಾಜ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....