ಉಡುಪಿ | ಎಸ್‌ಐಆರ್‌ ಕರ್ತವ್ಯದಲ್ಲಿದ್ದ ಬಿಎಲ್‌ಓಗೆ ಬೆದರಿಕೆ ಆರೋಪ; ಕೋಟ ಠಾಣೆಯಲ್ಲಿ ಪ್ರಕರಣ ದಾಖಲು

Date:

ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್‌ಐಆರ್‌ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಲ್‌ಓ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಶಿರಿಯಾರ ಗ್ರಾಮದ ಎತ್ತಿನಟ್ಟಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಓ ಅಮೀತಾ ಅವರು, ಜುಲೈ 27ರಂದು ಗ್ರಾಮ ಆಡಳಿತಾಧಿಕಾರಿಗಳ ಕಚೇರಿಯಲ್ಲಿ ಎಸ್‌ಐಆರ್‌ ಕರ್ತವ್ಯದಲ್ಲಿದ್ದ ವೇಳೆ, ಪಂಚಾಯತ್ ಮಾಜಿ ಅಧ್ಯಕ್ಷ ಸುಧೀಂದ್ರ ಶೆಟ್ಟಿ ಎಂಬವರು ಮತದಾರರ ಪಟ್ಟಿಗೆ ಸಂಬಂಧಿಸಿದ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

- Advertisement -

ಈ ವೇಳೆ ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ವಿಚಾರವಾಗಿ ಪ್ರಶ್ನಿಸಿ, ಕರ್ತವ್ಯಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಎಳೆದು ಅಧಿಕಾರಿಯ ಕೆಲಸಕ್ಕೆ ಅಡ್ಡಿಪಡಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಅಮೀತಾ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ ಕೋಟ ಪೊಲೀಸ್ ಠಾಣೆಯಲ್ಲಿ ಸುಧೀಂದ್ರ ಶೆಟ್ಟಿ ವಿರುದ್ಧ ಬಿಎನ್‌ಎಸ್ ಕಲಂ 132, 74, 352 ಹಾಗೂ 351(2) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಪ್ರಕರಣದ ವಿವರ;
ಕೋಟ: ಪಿರ್ಯಾದಿದಾರರಾದ ಅಮೀತಾ (50),ಶಿರಿಯಾರ ಗ್ರಾಮ, ಬ್ರಹ್ಮಾವರ ಇವರು ಶಿರಿಯಾರ ಎತ್ತಿನಟ್ಟಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದು ,ಬಿಎಲ್‌ಓ ಆಗಿದ್ದು ಈ ವರ್ಷದಲ್ಲಿ ಎಸ್‌ಐಆರ್‌ ಕರ್ತವ್ಯ ನಿರ್ವಹಿಸುತ್ತಿರುವುದಾಗಿದೆ. ದಿನಾಂಕ 27/07/2026 ರಂದು ಶಿರಿಯಾರ ಗ್ರಾಮದ ಗ್ರಾಮ ಆಡಳಿತಾಧಿಕಾರಿಯವರ ಕಚೇರಿಯಲ್ಲಿ ಎಸ್‌ಐಆರ್‌ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಬೆಳಿಗ್ಗೆ 11:30 ಗಂಟೆಗೆ ಸುಧೀಂದ್ರ ಶೆಟ್ಟಿ ಯವರು ಗ್ರಾಮ ಆಡಳಿತಾಧಿಕಾರಿಯವರ ಕಚೇರಿಗೆ ಬಂದು ಪಿರ್ಯಾದಿದಾರರಲ್ಲಿ ಮತದಾರರ ಪಟ್ಟಿಯಲ್ಲಿ ಸೇರಿಸಲು ಮತ್ತು ತೆಗೆದು ಹಾಕಲು ತಯಾರಿಸಿದ ಪಟ್ಟಿಯನ್ನು ತೋರಿಸುವಂತೆ ಒತ್ತಾಯಿಸಿದ್ದು ಮತ್ತು ಚಂದ್ರಶೇಖರ ಶೆಟ್ಟಿ ಬಿನ್‌ ಶೀನಪ್ಪ ಶೆಟ್ಟಿ ಶಿರಿಯಾರ ನಾಯಕರ ಮನೆ ಇವರನ್ನು ಮತದಾರರ ಪಟ್ಟಿಯಲ್ಲಿ ಕೈಬಿಡಲು ಯಾಕೆ ಪಟ್ಟಿ ಮಾಡುತ್ತೀರಿ ,ಪಟ್ಟಿ ಮಾಡಲು ಯಾರು ಅಧಿಕಾರ ಕೊಟ್ಟಿದ್ದು ಎಂದು ಅವಾಚ್ಯ ಶಬ್ದಗಳಿಂದ ಬೈದು ,ಕೆಲಸ ಮಾಡುತ್ತಿದ್ದ ಎಸ್‌ಐಆರ್‌ ಗೆ ಸಂಬಂದಿಸಿದ ಪುಸ್ತಕಗಳನ್ನು ಎಳೆದು ಕರ್ತವ್ಯ ನಿರ್ವಹಿಸಲು ಅಡ್ಡಿ ಪಡಿಸಿದ್ದು , ಅವಾಚ್ಯ ಶಬ್ದಗಳಿಂದ ಬೈದು ,ಕೊಲೆ ಬೆದರಿಕೆ ಹಾಕಿರುವುದಾಗಿ ನೀಡಿದ ದೂರಿನಂತೆ ಕೋಟ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 123/2026 ಕಲಂ:132, 74, 352, 351(2) BNS ರಂತೆ ಪ್ರಕರಣ ದಾಖಲಾಗಿರುತ್ತದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...

ಕಲಬುರಗಿ | ಸಾರ್ವಜನಿಕ ಶಿಕ್ಷಣ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ: 17ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸುವುದು, ಕೋಮು...