ಉಡುಪಿಯಲ್ಲಿ ಎಸ್‌ಐಆರ್ ಕರಡು ಪಟ್ಟಿ ಪ್ರಕಟ ; 97,706 ಮತದಾರರಿಗೆ ನೋಟಿಸ್

Date:

ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ನಡೆದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಇಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ಜಿಲ್ಲೆಯ ಮೊದಲಿದ್ದ(16.06.26ಕ್ಕೆ ಮೊದಲು) ಒಟ್ಟು 10,63,876 ಮತದಾರರ ಪೈಕಿ 10,00,545 ಮಂದಿ ಸ್ಥಾನ ಉಳಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

- Advertisement -

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಕಾರಣಗಳಿಂದ ಒಟ್ಟು 63,331 ಮಂದಿಯ ಹೆಸರುಗಳನ್ನು ಕರಡು ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿಲ್ಲ ಎಂದು ವಿವರಿಸಿದರು. ಇದರಲ್ಲಿ ಗೈರು, ಸ್ಥಳಾಂತರ, ಮೃತರು, ದ್ವಿಪ್ರತಿ ಹಾಗೂ ಇತರ ವಿಭಾಗದ ಮತದಾರರು ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
WhatsApp Image 2026 08 24 at 9.14.12 PM 1

ಕರಡು ಪಟ್ಟಿಯಲ್ಲಿ ಸ್ಥಾನ ಪಡೆದಿರುವವರ ಪೈಕಿ 97,706 ಮಂದಿಗೆ ಚುನಾವಣಾ ಆಯೋಗದ ನಿಯಮದಂತೆ ನೋಟಿಸ್ ನೀಡಲಾಗುತ್ತಿದೆ. ಇವರಲ್ಲಿ ಹಿಂದಿನ ಮತದಾರರ ಪಟ್ಟಿಯೊಂದಿಗೆ ಲಿಂಕೇಜ್ ಆಗದ 31,903 ಮಂದಿ ಹಾಗೂ ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಅಡಿಯಲ್ಲಿ ಗುರುತಿಸಲಾದ 65,803 ಮಂದಿ ಇದ್ದಾರೆ.

ಈ 97,706 ಮಂದಿಗೆ ಆ.31ರವರೆಗೆ ಆಯಾ ಬೂತ್‌ಗಳ ಬಿಎಲ್‌ಒಗಳು ಮನೆಗೆ ತೆರಳಿ ನೋಟಿಸ್ ನೀಡಲಿದ್ದಾರೆ. ನೋಟಿಸ್‌ನಲ್ಲಿ ಸೂಚಿಸಿರುವ ದಾಖಲೆಗಳ ಪೈಕಿ ಚುನಾವಣಾ ಆಯೋಗ ನಿಗದಿಪಡಿಸಿರುವ 11 ದಾಖಲೆಗಳಲ್ಲಿ ಯಾವುದಾದರೂ ಮೂರು ದಾಖಲೆಗಳನ್ನು ವಿಚಾರಣೆ ವೇಳೆ ಸಲ್ಲಿಸಬೇಕಾಗುತ್ತದೆ. ಉಡುಪಿ ಜಿಲ್ಲೆಯಲ್ಲಿ ಲಾಜಿಕಲ್ ಡಿಸ್ಕ್ರಿಪೆನ್ಸಿ ಅಡಿಯಲ್ಲಿ ನೋಟಿಸ್ ನೀಡಲು ಪ್ರಮುಖ ಕಾರಣ ಹೆಸರು, ಸ್ಪೆಲ್ಲಿಂಗ್ ಹಾಗೂ ವಯಸ್ಸಿನಲ್ಲಿನ ವ್ಯತ್ಯಾಸವಾಗಿದ್ದು, ಇಂತಹ ಪ್ರಕರಣಗಳು ಸುಮಾರು ಶೇ.90ರಷ್ಟಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

WhatsApp Image 2026 08 24 at 9.14.12 PM

ಮನೆಮನೆಗೆ ಗಣತಿ ನಮೂನೆಗಳನ್ನು ವಿತರಿಸಿ, ಮತದಾರರಿಂದ ಸ್ವೀಕರಿಸಿದ ನಮೂನೆಗಳನ್ನು ಡಿಜಿಟಲೀಕರಣಗೊಳಿಸಿದ ಬಳಿಕ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸೆಪ್ಟೆಂಬರ್ 23ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ. ಬಳಿಕ ಹಕ್ಕು ಮತ್ತು ಆಕ್ಷೇಪಣೆಗಳ ವಿಚಾರಣೆ ಹಾಗೂ ವಿಲೇವಾರಿ ಅಕ್ಟೋಬರ್ 22ರವರೆಗೆ ನಡೆಯಲಿದೆ. ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 63,331 ಎಎಸ್‌ಡಿಡಿಒ ಮತದಾರರನ್ನು ಗುರುತಿಸಲಾಗಿದೆ. ಬೈಂದೂರಿನಲ್ಲಿ 14,280, ಕುಂದಾಪುರದಲ್ಲಿ 11,634, ಉಡುಪಿಯಲ್ಲಿ 17,726, ಕಾಪುವಿನಲ್ಲಿ 10,034 ಹಾಗೂ ಕಾರ್ಕಳದಲ್ಲಿ 9,657 ಮಂದಿ ಇದ್ದಾರೆ.

ಇವರಲ್ಲಿ 4,145 ಮಂದಿ ಗೈರು, 2,936 ಮಂದಿ ಸ್ಥಳಾಂತರಗೊಂಡವರು, 21,262 ಮಂದಿ ಮೃತರು ಹಾಗೂ 8,374 ಮಂದಿ ದ್ವಿಪ್ರತಿ ಮತದಾರರು ಎಂದು ಗುರುತಿಸಲಾಗಿದೆ. ಉಳಿದ 189 ಮಂದಿ ಇತರ ವಿಭಾಗಕ್ಕೆ ಸೇರಿದವರಾಗಿದ್ದು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ತಮ್ಮ ಮಾಹಿತಿಯನ್ನು ನೀಡದವರು ಎಂದು ಜಿಲ್ಲಾಧಿಕಾರಿ ವಿವರಿಸಿದರು.

WhatsApp Image 2026 08 24 at 9.14.13 PM 1

ಅಕ್ಟೋಬರ್ 1, 2026ನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ, ಆ ದಿನಕ್ಕೆ 18 ವರ್ಷ ಪೂರ್ಣಗೊಳ್ಳುವ 5,914 ಯುವ ಮತದಾರರನ್ನು ಫಾರ್ಮ್-6 ಮೂಲಕ ಕರಡು ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಬೈಂದೂರಿನಲ್ಲಿ 1,112, ಕುಂದಾಪುರದಲ್ಲಿ 991, ಉಡುಪಿಯಲ್ಲಿ 1,103, ಕಾಪುವಿನಲ್ಲಿ 1,272 ಹಾಗೂ ಕಾರ್ಕಳದಲ್ಲಿ 1,436 ಯುವ ಮತದಾರರು ಸೇರ್ಪಡೆಯಾಗಿದ್ದಾರೆ.

1,200ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪುನರ್‌ವಿಂಗಡಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 132 ಹೊಸ ಮತಗಟ್ಟೆಗಳನ್ನು ಸೃಷ್ಟಿಸಲಾಗಿದೆ. ಇದರಿಂದ ಹಿಂದಿನ 1,112 ಮತಗಟ್ಟೆಗಳ ಸಂಖ್ಯೆ 1,244ಕ್ಕೆ ಏರಿಕೆಯಾಗಿದೆ. ಬೈಂದೂರಿನಲ್ಲಿ 48, ಕುಂದಾಪುರದಲ್ಲಿ 16, ಉಡುಪಿಯಲ್ಲಿ 21, ಕಾಪುವಿನಲ್ಲಿ 22 ಹಾಗೂ ಕಾರ್ಕಳದಲ್ಲಿ 25 ಹೆಚ್ಚುವರಿ ಮತಗಟ್ಟೆಗಳು ಸೇರ್ಪಡೆಯಾಗಲಿವೆ.

WhatsApp Image 2026 08 24 at 9.14.13 PM

ಎಸ್‌ಐಆರ್ ಸಂದರ್ಭದಲ್ಲಿ ಲಿಂಕೇಜ್ ಹಾಗೂ ಲಾಜಿಕಲ್ ಡಿಸ್ಕ್ರಿಪೆನ್ಸಿ ಪ್ರಕರಣಗಳ ಪರಿಶೀಲನೆ ಮತ್ತು ವಿಚಾರಣೆಗೆ ಹೆಚ್ಚುವರಿಯಾಗಿ 120 ಮಂದಿ ಎಇಆರ್‌ಒ ಹಾಗೂ ಹೆಚ್ಚುವರಿ ಎಇಆರ್‌ಒಗಳನ್ನು ನೇಮಿಸಲಾಗಿದೆ. ಅವರು ಆಯಾ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶದ ವಾರ್ಡ್ ವ್ಯಾಪ್ತಿಯಲ್ಲಿಯೇ ವಿಚಾರಣೆ ನಡೆಸಲಿದ್ದಾರೆ.

ಮತದಾರರು ಕರಡು ಪಟ್ಟಿಯಲ್ಲಿ ತಮ್ಮ ಹೆಸರು, ವಯಸ್ಸು, ಲಿಂಗ, ವಿಳಾಸ, ಭಾವಚಿತ್ರ ಹಾಗೂ ಮತಗಟ್ಟೆಯ ವಿವರಗಳನ್ನು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮನವಿ ಮಾಡಿದರು. ಕರಡು ಪಟ್ಟಿ ಬಿಎಲ್‌ಒ, ಇಆರ್‌ಒ ಕಚೇರಿ, ತಾಲೂಕು ತಹಶೀಲ್ದಾರ್ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ. ಯಾವುದೇ ಮಾಹಿತಿ ಅಥವಾ ಮಾರ್ಗದರ್ಶನಕ್ಕಾಗಿ ಮತದಾರರು ತಮ್ಮ ವ್ಯಾಪ್ತಿಯ ಬಿಎಲ್‌ಒಗಳನ್ನು ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...