ಉಡುಪಿ | ನೋಬೆಲ್ ಪುರಸ್ಕೃತ ಅಮರ್ತ್ಯ ಸೇನ್‌ಗೂ ಪೌರತ್ವ ಸಾಬೀತುಪಡಿಸಲು ಹೇಳಿದರೆ ಸಾಮಾನ್ಯರ ಗತಿ ಏನು?

Date:

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಎಸ್‌ಐಆರ್ ವಿರೋಧಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ಉಡುಪಿ ನೇತೃತ್ವದಲ್ಲಿ ಶನಿವಾರ ಉಡುಪಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಧರಣಿ ಪ್ರತಿಭಟನೆ ನಡೆಯಿತು.

- Advertisement -
1011081810

ಪ್ರತಿಭಟನಾಕಾರರು ಎಸ್‌ಐಆರ್ ಪ್ರಕ್ರಿಯೆಯು ನಾಗರಿಕರ ಮತದಾನದ ಹಕ್ಕು ಹಾಗೂ ಸಂವಿಧಾನಿಕ ಹಕ್ಕುಗಳಿಗೆ ಧಕ್ಕೆ ಉಂಟುಮಾಡಲಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು. ಎಸ್‌ಐಆರ್ ಅನ್ನು ಕೂಡಲೇ ಹಿಂಪಡೆಯಬೇಕು ಹಾಗೂ ನಾಗರಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1011081809

ಧರಣಿಯನ್ನುದ್ದೇಶಿಸಿ ಮಾತನಾಡಿದ ಹಿರಿಯ ಚಿಂತಕ ಪ್ರೊ. ಫಣಿರಾಜ್, ಎಸ್‌ಐಆರ್ ಪ್ರಕ್ರಿಯೆಯು ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆಗೆ ಸೀಮಿತವಾಗಿಲ್ಲ. ಇದು ದೇಶದ ಬಹುಸಂಖ್ಯಾತ ನಾಗರಿಕರ ಪೌರತ್ವ ಮತ್ತು ಮತದಾನದ ಹಕ್ಕನ್ನು ಪ್ರಶ್ನಿಸುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು. ಚುನಾವಣಾ ಆಯೋಗದ ಕರ್ತವ್ಯ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದೇ ಹೊರತು ನಾಗರಿಕರ ಪೌರತ್ವವನ್ನು ನಿರ್ಧರಿಸುವುದಲ್ಲ ಎಂದು ಅವರು ಹೇಳಿದರು.

ಎಸ್‌ಐಆರ್ ಪ್ರಕ್ರಿಯೆಯನ್ನು ಎನ್‌ಆರ್‌ಸಿ ಜಾರಿಗೊಳಿಸುವ ಉದ್ದೇಶದ ಭಾಗವಾಗಿ ತರಲಾಗಿದೆ ಎಂದು ಆರೋಪಿಸಿದ ಅವರು, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಜನರು ಹೋರಾಟಕ್ಕೆ ಮುಂದಾಗಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅಭಿಪ್ರಾಯಪಟ್ಟರು.

1011081807

ಈ ಕುರಿತು ಈದಿನ.ಕಾಮ್‌ ಜೊತೆ ಮಾತನಾಡಿದ ಕಥೋಲಿಕ್ ಸಭಾದ ಉಡುಪಿ ಜಿಲ್ಲಾಧ್ಯಕ್ಷ ಆಲ್ವಿನ್ ನೋರೊನ್ಹಾ, ಕೆಲವು ರಾಜ್ಯಗಳಲ್ಲಿ ಈಗಾಗಲೇ ಎಸ್‌ಐಆರ್ (Special Intensive Revision) ಪ್ರಕ್ರಿಯೆಯನ್ನು ಜಾರಿಗೊಳಿಸಲಾಗಿದ್ದು, ಅದರ ಪರಿಣಾಮವಾಗಿ ಲಕ್ಷಾಂತರ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ ಎಂದು ಆರೋಪಿಸಿದರು. ಕರ್ನಾಟಕದಲ್ಲಿಯೂ ಮತದಾರರ ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಂದಿನ ಹಂತವಾಗಿ ಎಸ್‌ಐಆರ್ ಜಾರಿಗೊಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಮಾನ ಮನಸ್ಕ ಸಂಘಟನೆಗಳು ಮತ್ತು ನಾಗರಿಕರು ಒಗ್ಗಟ್ಟಾಗಿ ಎಸ್‌ಐಆರ್‌ಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಈ ಅಸಂವಿಧಾನಿಕ ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು ಎಂಬುದು ನಮ್ಮ ಆಗ್ರಹ ಎಂದು ಅವರು ಹೇಳಿದರು.

1011081805

ಈದಿನ.ಕಾಮ್‌ ಜೊತೆ ಮಾತನಾಡಿದ ವೆಲ್ಫೇರ್ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷ ಇದ್ರೀಸ್ ಹೂಡೆ, ಎಸ್‌ಐಆರ್ ಪ್ರಕ್ರಿಯೆಯು ನಾಗರಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆಯುಂಟು ಮಾಡುವಂತಿದೆ ಎಂದು ಆರೋಪಿಸಿದರು. ದೇಶಕ್ಕೆ ನೋಬೆಲ್ ಪ್ರಶಸ್ತಿ ತಂದುಕೊಟ್ಟ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ಅವರಂತಹ ವ್ಯಕ್ತಿಗಳಿಗೂ ಪೌರತ್ವದ ದಾಖಲೆಗಳನ್ನು ಸಲ್ಲಿಸಿ ತಮ್ಮ ಗುರುತನ್ನು ಸಾಬೀತುಪಡಿಸುವಂತೆ ಕೇಳಲಾಗುತ್ತಿದೆ ಎಂದು ಅವರು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಆಯೋಗವು ಸ್ವತಂತ್ರ ಹಾಗೂ ಸರ್ವೋಚ್ಚ ಸಂಸ್ಥೆಯಾಗಿರಬೇಕು. ಆದರೆ ಇಂದು ಅದರ ಸ್ವಾಯತ್ತತೆಯನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಚುನಾವಣಾ ಆಯೋಗವು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಪರವಾಗಿ ನಡೆದುಕೊಳ್ಳುತ್ತಿರುವಂತೆಯೂ ಕಾಣಿಸುತ್ತಿದ್ದು, ಎಸ್‌ಐಆರ್ ಮೂಲಕ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಕಾರ್ಯ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

1011081806

ಎಸ್‌ಡಿಪಿಐ ಮುಖಂಡ ಶಾಹೀದ್ ಅಲಿ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ಹಾಗೂ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಪ್ರಕ್ರಿಯೆಯಿಂದ ಬಡವರು, ಅಂಚಿನ ಸಮುದಾಯಗಳು ಹಾಗೂ ದಾಖಲೆಗಳ ಕೊರತೆ ಇರುವ ಜನರಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಪ್ರತಿಭಟನೆಯ ಬಳಿಕ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಧರಣಿಯಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ, ಸಿಐಟಿಯು ಮುಖಂಡರಾದ ಕವಿರಾಜ್ ಮತ್ತು ಬಲ್ಕೀಸ್, ಹನೀಫ್ ಮೂಳೂರು, ವಾಲ್ಟರ್ ಪಿಂಟೋ, ಜಾಯಿಸ್ ಡೇಸಾ, ಶಾರದಾ ಮೂಡಸಗ್ರಿ, ಜಫರುಲ್ಲಾ, ಇಕ್ಬಾಲ್ ಮನ್ನಾ, ಹುಸೇನ ಕೋಡಿಬೆಂಗ್ರೆ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...