ಉಡುಪಿ | ಪ್ರತಿ ಅರ್ಹ ಮತದಾರರ ನೋಂದಣಿಯೇ ಗುರಿ; SIR (ವಿಶೇಷ ಸಮಗ್ರ ಪರಿಷ್ಕರಣೆ) ಆರಂಭ

Date:

ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಭಾಗವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳು ಮತದಾರರ ಮನೆ ಮನೆಗಳಿಗೆ ಭೇಟಿ ನೀಡಿ, ಎನುಮರೇಷನ್ ಫಾರ್ಮ್ ಅನ್ನು ವಿತರಿಸಿ, ಮತದಾರರ ವಿವರವನ್ನು ಇಂದಿನಿಂದ (ಜೂನ್ 30) ಕಲೆ ಹಾಕುತ್ತಿದ್ದು, ಈ ಬಗ್ಗೆ ನಗರದ ಇಂದ್ರಾಳಿ, ಕುಂಜಿಬೆಟ್ಟು, ಕಾಡಬೆಟ್ಟು, ಪಣಿಯಾಡಿ ಸೇರಿದಂತೆ ಮತ್ತಿತರ ವಾರ್ಡ್ಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯು ಎಲ್ಲಾ ಅರ್ಹ ನಾಗರಿಕರನ್ನು ಮತದಾರ ಪಟ್ಟಿಯಲ್ಲಿ ಸೇರ್ಪಡೆಗೊಳೀಸುವುದೇ ಮುಖ್ಯ ಉದ್ದೇಶವಾಗಿದೆ. ಈ ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ, ಖಚಿತಪಡಿಸಿಕೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಈಗಾಗಲೇ ಪೂರ್ವಸಿದ್ಧತಾ ಕಾರ್ಯಗಳ ಪ್ರಕ್ರಿಯೆಗಳು ನಡೆದಿವೆ. ಇಂದಿನಿಂದ (ಜೂನ್ 30) ಜುಲೈ 29 ರ ವರೆಗೆ ಬಿಎಲ್‌ಒ ಗಳು ಮನೆ ಮನೆ ಸಮೀಕ್ಷೆ ಭೇಟಿ ನೀಡಿ, ಎನುಮರೇಷನ್ ಫಾರಂಗಳನ್ನು ನೀಡಿ, ಸಾರ್ವಜನಿಕರಿಂದ ಭರ್ತಿ ಮಾಡಲಾದ ಗಣತಿ ನಮೂನೆಗಳನ್ನು ಭಾವಚಿತ್ರ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಪಡೆಯಲಿದ್ದಾರೆ. ಸಾರ್ವಜನಿಕರು ಈ ಪ್ರಕ್ರಿಯೆಗೆ ಸಹಕರಿಸಬೇಕು ಎಂದ ಅವರು, ಭರ್ತಿ ಮಾಡಿದ ಫಾರಂಗಳ ಮೇಲೆ ಮತದಾರರ ಸಹಿ ಅಥವಾ ಹೆಬ್ಬೆರಳ ಗುರುತು ಕಡ್ಡಾಯವಾಗಿ ಇರಬೇಕೆಂದರು.

WhatsApp Image 2026 06 30 at 6.15.43 PM

ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಇದರ ಬಗ್ಗೆ ಹಕ್ಕು ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಆಗಸ್ಟ್ 5 ರಿಂದ ಸೆಪ್ಟೆಂಬರ್ 4 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇವುಗಳ ವಿಲೇವಾರಿಯನ್ನು ಆಗಸ್ಟ್ 5 ರಿಂದ ಅಕ್ಟೋಬರ್ 3 ರ ವರೆಗೆ ನಡೆಸಿ, ಅಕ್ಟೋಬರ್ 7 ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದರು.

ಸಗ್ರಿ ವಾರ್ಡ್ನ ಬಿ.ಎಲ್.ಓ ಪ್ರಮೋದಾ ಮಾತನಾಡಿ, ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ, ಆ ಮನೆಯ ಮತದಾರರಿಗೆ ಗಣತಿ ನಮೂನೆಯ ಎರಡೂ ಪ್ರತಿಗಳನ್ನು ನೀಡುತ್ತಿದ್ದೇವೆ. ಮತದಾರರು ಎರಡನ್ನೂ ಭರ್ತಿ ಮಾಡಿ, ನಂತರ ಭಾವಚಿತ್ರ ಅಂಟಿಸಿ, ಸಹಿ ಮಾಡಬೇಕು. ಒಂದು ಪ್ರತಿಯನ್ನು ನಮಗೆ ನೀಡಿ, ಮತ್ತೊಂದು ಪ್ರತಿಯನ್ನು ನಮ್ಮ ಸಹಿ ಪಡೆದು ಸಂಗ್ರಹಿಸಿಟ್ಟುಕೊಳ್ಳಬೇಕು. ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ನೋಂದಾಯಿಸಿಕೊಳ್ಳುವವರೆಗೂ ಇದೇ ನಿಯಮ ಅನ್ವಯವಾಗಲಿದೆ ಎಂದರು.

ನಾವುಗಳು ಮನೆಗಳಿಗೆ ಭೇಟಿ ನೀಡಿದಾಗ ಮನೆಯಲ್ಲಿ ಜನರು ಇದ್ದು, ಗಣತಿ ನಮೂನೆಗಳನ್ನು ಸ್ವೀಕರಿಸಿದರೆ ಅಂತಹ ಮನೆಗಳಿಗೆ ನೇರಳೆ ಬಣ್ಣದ ಚೌಕಾಕಾರದ ಸ್ಟಿಕ್ಕರ್ ಹಾಗೂ ಮನೆಗೆ ಬೀಗ ಹಾಕಿದ್ದರೆ ಕೆಂಪು ಬಣ್ಣದ ವೃತ್ತಾಕಾರದ ಸ್ಟಿಕ್ಕರ್ ಅಂಟಿಸಲಾಗುವುದು ಎಂದರು.

DC SIR NEWS PHOTO 6

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮಹಮ್ಮದ್ ಮೌಲ ಮಾತನಾಡಿ, ಜಿಲ್ಲಾ ಚುನಾವಣಾ ಕಚೇರಿಯ ಬಿ.ಎಲ್.ಓ ಗಳು ಇಂದು ಮನೆ ಮನೆಗ ಭೇಟಿ ನೀಡಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಅಂಗವಾಗಿ ಎನುಮರೇಷನ್ ಫಾಮ್ ಅನ್ನು ನೀಡಿದ್ದಾರೆ. ಇವುಗಳನ್ನು ಪೂರ್ಣ ಪ್ರಮಾಣದಲ್ಲಿ ತುಂಬಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲಾಗುವುದರ ಜೊತೆಗೆ ಮತದಾರರ ಪಟ್ಟಿಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಹೆಸರುಗಳು ನೋಂದಣಿಯಾಗಿದೆಯೇ ಎಂದು ಪರಿಶೀಲಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ತಹಶೀಲ್ದಾರ್ ಗುರುರಾಜ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...