ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉಡುಪಿ ರಾಜ್ಯಕ್ಕೆ ಮಾದರಿ: ಸಿಇಒ ಅನ್ಬುಕುಮಾರ್ ಮೆಚ್ಚುಗೆ

Date:

ಪ್ರಜಾಪ್ರಭುತ್ವದ ಅಡಿಪಾಯವನ್ನು ಭದ್ರ ಪಡಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ದೋಷರಹಿತ ಹಾಗೂ ಗುಣಮಟ್ಟದ ಮತದಾರರ ಪಟ್ಟಿ ಸಿದ್ಧಪಡಿಸುವ ಕಾರ್ಯವನ್ನು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ನಿರ್ವಹಿಸಿ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸೂಚನೆ ನೀಡಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ [ಎಸ್.ಐ.ಆರ್] ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿ ಮಾತನಾಡುತ್ತಿದ್ದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ರಾಜ್ಯದಲ್ಲಿ ನಡೆಯುತ್ತಿರುವ ಎಸ್.ಐ. ಆರ್ ಮನೆ ಮನೆ ಸಮೀಕ್ಷೆಯ ನಮೂನೆಗಳಲ್ಲಿ 2002 ರ ಮತದಾರರ ಪಟ್ಟಿಯಲ್ಲಿ ಮ್ಯಾಪಿಂಗ್ ಆಗದವರು ಸಹ ವೈಯಕ್ತಿಕ ವಿವರಗಳನ್ನು ಏನ್ಯೂಮರೇಷನ್ ಫಾರ್ಮ್ ನ ಕೊನೆಯ ಕಾಲಂ ನಲ್ಲಿ ವಿವರಗಳನ್ನು ಭರ್ತಿ ಮಾಡಿ, ಬಿ. ಎಲ್. ಓ ಗಳಿಗೆ ನೀಡಬಹುದಾಗಿದೆ ಎಂದರು.

ಒಂದೊಮ್ಮೆ ಬಿ. ಎಲ್. ಓ ಗಳು ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರು ಮನೆಯಲ್ಲಿ ಇಲ್ಲದಿದ್ದಲ್ಲಿ ಅವರ ಪರವಾಗಿ ಕುಟುಂಬದ ಯಾವುದೇ ಒಬ್ಬ ವಯಸ್ಕರು ಸಹಿ ಹಾಕಿ ಗಣತಿ ನಮೂನೆಗಳನ್ನು ಬಿ. ಎಲ್. ಓ ಗಳಿಗೆ ನೀಡಬಹುದಾಗಿದೆ ಎಂದರು.

ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ, ಮತದಾರರಿಂದ ಪಡೆದುಕೊಂಡ ಎನುಮರೇಶನ್‌ ಫಾರಂಗಳ ಡಿಜಿಟಲೀಕರಣ ಕಾರ್ಯದಲ್ಲಿ ರಾಜ್ಯದಲ್ಲಿ ಉಡುಪಿ ಜಿಲ್ಲೆಯು ಪ್ರಥಮ ಸ್ಥಾನದಲ್ಲಿರುವುದರಿಂದ ಮುಖ್ಯ ಚುನಾವಣಾಧಿಕಾರಿಯವರು ಜಿಲ್ಲೆಯ ಸಾಧನೆಯನ್ನು ಶ್ಲಾಘಿಸಿದರು.

1011884106

ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಮಾತನಾಡಿ, ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR-2026) ಪ್ರಕ್ರಿಯೆಯು ವ್ಯವಸ್ಥಿತವಾಗಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುವ ಪ್ರಕ್ರಿಯೆಯಲ್ಲಿ ಶೇ.100 ಪ್ರಗತಿ ಸಾಧಿಸಿದ್ದಾರೆ. ಇಂದು (ಜುಲೈ 25 ಸಂಜೆ 4 ಗಂಟೆ ) ರ ವರೆಗೆ ಒಟ್ಟು9,40,340 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಿ ಶೇ. 88.39 ರಷ್ಟು ಪ್ರಗತಿಯಾಗಿರುತ್ತದೆ. 14,835 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡುಬಂದಿರುತ್ತದೆ. 14426 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 5225 ಮತದಾರರು ತಮ್ಮ ದಾಖಲಾತಿ ಮಾಡಿರುತ್ತಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಗಣತಿ ನಮೂನೆಗಳ ಡಿಜಿಟಲಿಕರಣ
ಕಾರ್ಯವನ್ನು ಪ್ರಥಮವಾಗಿ ಶೇ.100 ರಷ್ಟು ಪೂರ್ಣಗೊಳಿಸಿದಂತಹ 118-ಬೈಂದೂರು ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 125 ರ ಬಿಎಲ್‌ಒ ಪವಿತ್ರ ಪೂಜಾರಿ, 119-ಕುಂದಾಪುರ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 135 ರ ಲಕ್ಷ್ಮೀ ಶೆಡ್ತಿ, 120-ಉಡುಪಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 33 ರ ಪ್ರಸನ್ನಿ, 121-ಕಾಪು ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 190 ರ ಹೇಮಾ ಪೂಜಾರ್ತಿ, 122-ಕಾರ್ಕಳ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 41 ರ ಜ್ಯೋತಿರಾವ್‌ ಸೇರ್ವೆಗಾರ್‌ ಇವರುಗಳಿಗೆ ಅಭಿನಂದನಾ ಪತ್ರವನ್ನು ನೀಡಿ ಗೌರವಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಕಮಿಷನರ್ ರಶ್ಮಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...