ಉಡುಪಿ | SIR ಅರ್ಜಿಗಳನ್ನು ಸಾರ್ವಜನಿಕರು ತ್ವರಿತವಾಗಿ BLO ಗಳಿಗೆ ನೀಡಿ : ಜಿಲ್ಲಾಧಿಕಾರಿ ಸ್ವರೂಪಾ ಟಿ .ಕೆ

Date:

ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಬಹುತೇಕ ಮನೆ ಮನೆಗಳಿಗೆ ತೆರಳಿ ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದ್ದು ಅವುಗಳನ್ನು ಭರ್ತಿ ಮಾಡಿ ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗೆ ಸಾರ್ವಜನಿಕರು ಹಿಂದಿರುಗಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪಾ ಟಿ . ಕೆ ಕರೆ ನೀಡಿದರು.

- Advertisement -

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‍.ಐ.ಆರ್) ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಕಾರಾತ್ಮಕವಾಗಿ ಸಹಕರಿಸಬೇಕು.ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಗಳ ವಿತರಣೆಯ ಕಾರ್ಯವು ಈಗಾಗಲೇ ಶೇ.99.97ರಷ್ಟು ಪೂರ್ಣಗೊಂಡಿದೆ. ಸಾರ್ವಜನಿಕರು ಗಣತಿ ನಮೂನೆಗಳನ್ನು ಭರ್ತಿ ಮಾಡಿ ತ್ವರಿತವಾಗಿ ಬಿ .ಎಲ್ .ಓ ಗಳಿಗೆ ನೀಡಿ ನೀಡಬೇಕೆಂದರು.

ಗಣತಿ ನಮೂನೆಗಳನ್ನು ಭರ್ತಿ ಮಾಡಿ ನೀಡಿದಲ್ಲಿ ಅವುಗಳ ಡಿಜಿಟಲೀಕರಣ ಕಾರ್ಯ ಕೈಗೊಳ್ಳಲು ಬಿ ಎಲ್ ಓ ಗಳಿಗೆ ಅನುಕೂಲವಾಗಲಿದೆ. ಕೊನೆಗಳಿಗೆಯಲ್ಲಿ ನೀಡಿದಲ್ಲಿ ಗೊಂದಲಗಳು ಉಂಟಾಗುವ ಸಾಧ್ಯತೆಗಳು ಇರುತ್ತದೆ. ಆದಷ್ಟು ಬೇಗ ಗಣತಿ ನಮೂನೆಗಳನ್ನು ನೀಡಬೇಕು ಎಂದರು.

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR-2026) ಪ್ರಕ್ರಿಯೆಯು ವ್ಯವಸ್ಥಿತವಾಗಿ ನಡೆಯುತ್ತಿದ್ದು, ಇಂದು (ಜುಲೈ 14) ರ ವರೆಗೆ ಜಿಲ್ಲೆಯಲ್ಲಿ ಒಟ್ಟು 10,63,876 ಮತದಾರರಲ್ಲಿ 1063451 ಮತದಾರರಿಗೆ ಎನ್ಯೂಮರೇಶನ್ ಫಾರ್ಮ್‌ಗಳನ್ನು ವಿತರಿಸಿ, ಶೇ.99.97% ಪ್ರಗತಿಯನ್ನು ಸಾಧಿಸಲಾಗಿರುತ್ತದೆ ಎಂದ ಅವರು 3,22,027 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಿ ಶೇ. 30.27 ರಷ್ಟು ಪ್ರಗತಿಯಾಗಿರುತ್ತದೆ. 1647 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡುಬಂದಿರುತ್ತದೆ. 1166 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 396 ಮತದಾರರು ತಮ್ಮ ದಾಖಲಾತಿ ಮಾಡಿರುತ್ತಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಈವರೆಗೆ 118-ಬೈಂದೂರು , 119-ಕುಂದಾಪುರ,121-ಕಾಪು ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾ ನೂರರಷ್ಟು ಮತದಾರರಿಗೆ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿರುತ್ತದೆ.120 -ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 425 ಎನ್ಯುಮರೇಷನ್ ಫಾರ್ಮ್ ಗಳ ವಿತರಣೆಗೆ ಬಾಕಿ ಇದ್ದು, ಇದು ಪ್ರತೀಶತ ನೂರರಷ್ಟು ಪೂರ್ಣಗೊಳುವಂತೆ ಮಾಡುವುದು ಬಿ.ಎಲ್. ಓ ಹಾಗೂ ಬಿ. ಎಲ್ಎ. ಗಳ ಜವಾಬ್ದಾರಿಯಾಗಿದೆ ಎಂದರು.

ಭಾರತ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಸಂಪೂರ್ಣ ಪಾರದರ್ಶಕತೆಯಿಂದ ಕೂಡಿದ್ದು, ಇದರಲ್ಲಿ ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಸಹಭಾಗಿತ್ವವೂ ಅತ್ಯಗತ್ಯವಾಗಿದೆ ಎಂದರು

ಗಣತಿ ನಮೂನೆಗಳನ್ನು ಭರ್ತಿ ಮಾಡುವಾಗ ಸಾರ್ವಜನಿಕರಲ್ಲಿ ಉಂಟಾಗುವ ಗೊಂದಲಗಳ ತಪ್ಪಿಸಲು ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ. ಫಾರ್ಮ್‍ಗಳಲ್ಲಿನ ಮೊದಲ ಭಾಗ ಹಾಗೂ ಎರಡನೇ ಭಾಗಗಳನ್ನು ಭರ್ತಿ ಮಾಡುವಾಗ ಆಗುವ ಸಾಮಾನ್ಯ ತಪ್ಪುಗಳನ್ನು ತಪ್ಪಿಸಲು ಬಿಎಲ್‍ಒ ಮತ್ತು ಬಿಎಲ್‍ಎಗಳಿಗೆ ವಿಶೇಷ ತರಬೇತಿ ನೀಡಲಾಗಿದೆ. ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟರುಗಳು ಈ ಕಾರ್ಯದಲ್ಲಿ ಸಂಪೂರ್ಣ ಸಹಕರಿಸಬೇಕು ಎಂದರು

ಜಿಲ್ಲೆಯಲ್ಲಿ ಅತ್ಯಂತ ಪಾರದರ್ಶಕ ಹಾಗೂ ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸಲು ಎಲ್ಲಾ ರಾಜಕೀಯ
ಪಕ್ಷಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಅಧಿಕಾರಿ- ಸಿಬ್ಬಂದಿ ಹಾಗೂ ಜಿಲ್ಲೆಯ ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ಪ್ರಾದೇಶಿಕ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರತಿನಿಧಿಗಳು ಪಾಲ್ಗೊಂಡಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...