ಉಡುಪಿ | “ನನ್ನ ಮತ – ನನ್ನ ಹಕ್ಕು” : ಪ್ರಜಾಸತ್ತಾತ್ಮಕ ಜಾಗೃತಿ ಮೂಡಿಸಿದ SIR ಕಾರ್ಯಗಾರ

Date:

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮತದಾನ ಹಕ್ಕಿನ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ “ನನ್ನ ಮತ – ನನ್ನ ಹಕ್ಕು” ಶೀರ್ಷಿಕೆಯಡಿ SIR (Special Intensive Revision) ಕಾರ್ಯಗಾರವು ಇಂದು ಉಡುಪಿ ನಗರದ ಡಾನ್ ಬಾಸ್ಕೋ ಹಾಲ್‌ನಲ್ಲಿ ನಡೆಯಿತು.

- Advertisement -

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ (ರಿ), ಶ್ರೀ ಸಾಮಾನ್ಯ ಆಯೋಗ, ಕಥೋಲಿಕ ಸ್ತ್ರೀ ಸಂಘಟನೆ ಉಡುಪಿ ಡಯಾಸಿಸ್ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
WhatsApp Image 2026 04 11 at 4.41.00 PM

ಕಾರ್ಯಕ್ರಮವನ್ನು ಮದರ್‌ ಆಫ್‌ ಸಾರೋಸೋ ಚರ್ಚ್‌ನ ಧರ್ಮಗುರು ಫಾ. ಚಾರ್ಲ್ಸ್ ಮೆನೇಜಸ್ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಮುಹಮ್ಮದ್ ಯಾಸೀನ್ ಪ್ರಾಸ್ತಾವಿಕವಾಗಿ ಮಾತನಾಡಿ ಮತದಾನದ ಮಹತ್ವವನ್ನು ವಿವರಿಸಿದರು. ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮುಹಮ್ಮದ್ ಮೌಲಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಕೀಲರಾದ ವಿನಯ್ ಶ್ರೀನಿವಾಸ್ ಮತ್ತು ಐಶ್ವರ್ಯ ರವಿ ಕುಮಾರ್ ಅವರು SIR ಪ್ರಕ್ರಿಯೆಯ ಕುರಿತು ಸಮಗ್ರ ಮಾಹಿತಿ ನೀಡಿದರು. ಮತದಾರರ ಪಟ್ಟಿಯ ಪರಿಷ್ಕರಣೆ, ನೋಂದಣಿ ಮತ್ತು ಹಕ್ಕುಗಳ ಬಳಕೆ ಬಗ್ಗೆ ಅವರು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ಚಾರ್ಲ್ಸ್ ಅಂಬರ್ ಸ್ವಾಗತಿಸಿದರು. ಕಥೋಲಿಕ ಸಭಾ ಉಡುಪಿ ಪ್ರದೇಶದ ಅಧ್ಯಕ್ಷ ಮೆಲ್ವಿನ್ ಅರಾಹ್ನ, ಸುಗಮ್ಯ ಮಹಿಳಾ ಸಂಘಟನೆಯ ಶ್ರೀಮತಿ ಸಿಲ್ವಿಯಾ ಸುವಾರಿಸ್ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಹ ಸಂಚಾಲಕಿ ಶ್ರೀಮತಿ ರೋಶಿನಿ ಒಲಿವೆರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

WhatsApp Image 2026 04 11 at 4.41.01 PM

ಡಾ. ಜೆರಾಲ್ಡ್ ಪಿಂಟೋ ಧನ್ಯವಾದ ಅರ್ಪಿಸಿದರು. ಶಾಂತಿ ಪಿರೇರಾ ಮತ್ತು ಅಬ್ದುಲ್ ಅಜೀಜ್ ಉದ್ಯಾವರ ಕಾರ್ಯಕ್ರಮವನ್ನು ನಿರೂಪಿಸಿದರು. ವಿವಿಧ ಸಮುದಾಯಗಳ ಪ್ರತಿನಿಧಿಗಳು, ಯುವಕರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...