ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಮೆರುಗು: ಸಿರೆನಾ ಲಕ್ಸುರಿ ಬೀಚ್ ರೆಸಾರ್ಟ್ ಉದ್ಘಾಟನೆ

Date:

ಉಡುಪಿ ನಗರದ ಮಲ್ಪೆ ಪಡುಕರೆಯಲ್ಲಿ ಸುಮಾರು 9 ಎಕರೆ ವಿಶಾಲ ಪ್ರದೇಶದಲ್ಲಿ ಅತ್ಯಾಧುನಿಕ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಶ್ಯಾಮಿಲಿ ಸಮೂಹ ಸಂಸ್ಥೆಯ ಸಹಸಂಸ್ಥೆ ಉಡುಪಿ ಕೋಸ್ಟಲ್‌ವುಡ್ ರೆಸಾರ್ಟ್‌ನ ‘ಸಿರೆನಾ ಲಕ್ಸುರಿ ಬೀಚ್ ರೆಸಾರ್ಟ್’ ಶನಿವಾರ ಅದ್ದೂರಿಯಾಗಿ ಲೋಕಾರ್ಪಣೆಗೊಂಡಿತು.

- Advertisement -

ಶ್ಯಾಮಿಲಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ನಾಡೋಜ ಡಾ. ಜಿ. ಶಂಕರ್ ಅವರು ಗಣ್ಯರು, ಹಿತೈಷಿಗಳು ಹಾಗೂ ಕುಟುಂಬಸ್ಥರ ಉಪಸ್ಥಿತಿಯಲ್ಲಿ ರೆಸಾರ್ಟ್ ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಬಳಿಕ ಮಾತನಾಡಿದ ಡಾ. ಜಿ. ಶಂಕರ್, ರತ್ನಗಿರಿಯಿಂದ ಕೇರಳದವರೆಗೆ ಈ ಮಾದರಿಯ ರೆಸಾರ್ಟ್‌ಗಳು ಇಲ್ಲ. ಪಡುಕರೆಯಲ್ಲಿ ಸಿರೆನಾ ಲಕ್ಸುರಿ ಬೀಚ್ ರೆಸಾರ್ಟ್ ಆರಂಭಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜತೆಗೆ ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಲ್ಲಿನ ಪ್ರವಾಸಿ ತಾಣಗಳನ್ನು ಪರಿಚಯಿಸುವ ಉದ್ದೇಶ ಹೊಂದಿದ್ದೇನೆ. ಸಂಸ್ಥೆಯ ಪ್ರತಿಯೊಂದು ಲಾಭಾಂಶದಲ್ಲೂ ಒಂದು ಭಾಗವನ್ನು ಸಮಾಜಸೇವೆ, ದೀನ-ದುರ್ಬಲರು ಹಾಗೂ ಅಸಹಾಯಕರ ಸೇವೆಗೆ ಮೀಸಲಿಡಲಾಗುವುದು ಎಂದು ತಿಳಿಸಿದರು.

WhatsApp Image 2026 11 28 at 11.07.52 PM

ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯ ಸಚೇತಕ ಮಂಜುನಾಥ ಭಂಡಾರಿ ಮಾತನಾಡಿ, ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಸ್ಟಾರ್ ಹೋಟೆಲ್‌ಗಳು ಹಾಗೂ ಬ್ರ್ಯಾಂಡೆಡ್ ರೆಸಾರ್ಟ್‌ಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಪ್ರವಾಸಿಗರನ್ನು ಆಕರ್ಷಿಸುವುದರ ಜತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಡಾ. ಜಿ. ಶಂಕರ್ ಅವರು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಶಾಸಕ ಯಶ್‌ಪಾಲ್ ಎ. ಸುವರ್ಣ, ಮಾಜಿ ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಚಿತ್ರನಟರಾದ ರೂಪೇಶ್ ಶೆಟ್ಟಿ, ಶ್ರೀರಾಮ್ ಹಾಗೂ ನಟಿ ತಪಸ್ವಿನಿ ಪೂಣಚ್ಚ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಗರಸಭೆ ಮಾಜಿ ಸದಸ್ಯೆ ಎಡ್ಲಿನ್ ಕರ್ಕಡ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲು, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸೇರಿದಂತೆ ಹಲವು ಜನಪ್ರತಿನಿಧಿಗಳು, ಉದ್ಯಮಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಉದ್ಯಮಿಗಳಾದ ಆನಂದ ಸಿ. ಕುಂದರ್, ಪುರುಷೋತ್ತಮ್ ಪಿ. ಶೆಟ್ಟಿ, ಮನೋಹರ್ ಎಸ್. ಶೆಟ್ಟಿ, ಎ.ಪಿ. ಸುವರ್ಣ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರು, ಶ್ಯಾಮಿಲಿ ಸಮೂಹ ಸಂಸ್ಥೆಯ ಕುಟುಂಬಸ್ಥರು ಹಾಗೂ ಹಿತೈಷಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ತಂಬಾಕು ನಿಯಂತ್ರಣ ಅಭಿಯಾನ: ಜಾಗೃತಿ ಪೋಸ್ಟರ್ ಬಿಡುಗಡೆ

ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ...

ಧಾರವಾಡ |ಕನ್ನಡ ಭಾಷೆಯ ವೈಭವ, ಏಕೀಕರಣದ ಹೆಮ್ಮೆ ಸಾರಿದ ‘ಹಚ್ಚೇವು ಕನ್ನಡದ ದೀಪ’ ಕಾರ್ಯಕ್ರಮ

ಕನ್ನಡ ಭಾಷೆ ಹಳೆಗನ್ನಡ, ನಡುಗನ್ನಡ, ಆಧುನಿಕ ಸಾಹಿತ್ಯ ಸೇರಿದಂತೆ ಶರಣರು, ದಾಸರು,...

ರಾಯಚೂರು | ₹35 ಕೋಟಿ ವೆಚ್ಚದ ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆಗೆ ಶಾಸಕ ವಜ್ಜಲ್ ಅಡ್ಡಿ: ಹೂಲಗೇರಿ ಆರೋಪ

ಕರಡಕಲ್ ಹೊರ ವಲಯದಲ್ಲಿ ₹35 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ತಾಯಿ ಮಕ್ಕಳ...

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...