ಉಡುಪಿ | ಎಪಿಎಂಸಿ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ನ.29ರಂದು ಅಹೋರಾತ್ರಿ ಧರಣಿ

Date:

ಎಪಿಎಂಸಿ ಅಧಿಕಾರಿಗಳ ಅವ್ಯವಹಾರ ಮತ್ತು ಭ್ರಷ್ಟಾಚಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಲು ಉಡುಪಿಯ ಎಪಿಎಂಸಿ ರಕ್ಷಣಾ ಸಮಿತಿ ತೀರ್ಮಾನಿಸಿದೆ ಎಂದು ಅದರ ಅಧ್ಯಕ್ಷ ವಿಜಯ್ ಕೊಡವೂರು ಹೇಳಿದರು. ನ್ಯಾಯ ಸಿಗುವವರೆಗೂ ಎಪಿಎಂಸಿ ಮುಂಭಾಗದಲ್ಲಿ ಧರಣಿ ಮಾಡುವುದಾಗಿ ಅವರು ಎಚ್ಚರಿಸಿದರು.

- Advertisement -

ಉಡುಪಿಯಲ್ಲಿ ಸೋಮವಾರದಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, “ಐದು ಬೇಡಿಕೆಗಳನ್ನು ಇಟ್ಟುಕೊಂಡು ಈ ಅಹೋ ರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಒಂದು ನಿವೇಶನಕ್ಕೆ ₹8 ಲಕ್ಷ ಲಂಚ ಪಡೆದು ಅಂತಹ 11 ನಿವೇಶನಕ್ಕೆ ₹88 ಲಕ್ಷ ಲಂಚ ಪಡೆದ ಅಧಿಕಾರಿಗಳನ್ನು ಅಮಾನತು ಮಾಡಬೇಕು” ಎಂದು ಅವರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

150 ವರ್ಷ ಹಳೆಯ ಶಿವಮೊಗ್ಗ ತುಂಗಾ ಸೇತುವೆ ಮರುನಿರ್ಮಾಣಕ್ಕೆ...

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ ತುಂಗಾ ಸೇತುವೆಗೆ ಕೊನೆಗೂ ಹೊಸ ರೂಪ ನೀಡುವ ಕಾಲ ಸನ್ನಿಹಿತವಾಗಿದೆ. ಶತಮಾನಕ್ಕೂ ಹೆಚ್ಚು ಕಾಲದ ಇತಿಹಾಸ ಹೊಂದಿರುವ ಹಳೆಯ ತುಂಗಾ...

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

“ಕ್ಯಾನ್ಸರ್ ಪೀಡಿತ ವರ್ತಕನಿಂದ ₹250ರ ಪರವಾನಗಿಗಾಗಿ ₹40,000 ಲಂಚ ಪಡೆದ ಅಧಿಕಾರಿಗಳ ಅಮಾನತು ಮಾಡಬೇಕು. ಮರಣ ಹೊಂದಿ 3 ವರ್ಷವಾದರೂ ಆ ವ್ಯಕ್ತಿಯ ಹೆಸರಿನಲ್ಲಿಯೇ ಇಂದಿಗೂ ಗೋಡೌನ್‌ನ ಬಾಡಿಗೆ ಪಡೆಯುತ್ತಿರುವ ಅಧಿಕಾರಿಗಳ ಅಮಾನತು ಮಾಡಬೇಕು. ಕರ್ನಾಟಕದಲ್ಲಿಯೇ ಕೆಟ್ಟ ಎಪಿಎಂಸಿ ಪ್ರಾಂಗಣ ಎಂದು ಹೆಸರಾದ ಉಡುಪಿ ಎಪಿಎಂಸಿಯಲ್ಲಿ ಮೂಲ ಸೌಕರ್ಯಗಳಾದ ರಸ್ತೆ, ವಿದ್ಯುತ್, ಶೌಚಾಲಯ, ನೀರು ಮತ್ತು ಸ್ವಚ್ಛತೆ ವ್ಯವಸ್ಥೆ ಮಾಡಿಕೊಡದ ಅಧಿಕಾರಿಗಳನ್ನು ಅಮಾನತು ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಎಷ್ಟೇ ಶಿಕ್ಷಣ ಪಡೆದರೂ ಸಂವಿಧಾನಾತ್ಮಕವಾಗಿ ಪ್ರಬುದ್ಧರಾಗುತ್ತಿಲ್ಲ; ಪ್ರೊ. ಚಿನ್ನಸ್ವಾಮಿ ಸೋಸಲೆ ಕಳವಳ

ಕೃಷಿ ಉತ್ಪನ್ನ ಮಾರಾಟಗಾರ ಒಕ್ಕೂಟದ ಅಧ್ಯಕ್ಷ ಸುಭಾಷಿತ್ ಕುಮಾರ್, ಎಪಿಎಂ‌ಸಿ ಮಾಜಿ ಸದಸ್ಯ ರಮಾಕಾಂತ್ ಕಾಮತ್, ರೈತ ಮೋರ್ಚ ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಉಪ್ಪೂರು, ಫಯಾಜ್, ಪ್ರಭುಗೌಡ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದೇವಿರಮ್ಮ ದರ್ಶನಕ್ಕೆ ಜನ ಸಾಗರ 

ಚಿಕ್ಕಮಗಳೂರು ತಾಲೂಕಿನ ರಮಣೀಯ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ದೇವೀರಮ್ಮನ ಬೆಟ್ಟವನ್ನು ಏರಲು...

ಚಿಕ್ಕಮಗಳೂರು | ದೇವಿರಮ್ಮ ದರ್ಶನ: ಹೃದಯಘಾತದಿಂದ ವ್ಯಕ್ತಿ ಸಾವು 

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಪ್ರಸಿದ್ಧ ದೇವಿರಮ್ಮನ ಬೆಟ್ಟಕ್ಕೆ ಜನ ಸಾಗರ ಹರಿದು...

ಚಿಕ್ಕಮಗಳೂರು | ಪಠ್ಯಪುಸ್ತಕ ವಿತರಣೆ ವಿಳಂಬ; ಎಂ. ಎಲ್.ಸಿ ಭೋಜೇಗೌಡ ಆಕ್ರೋಶ 

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ...

ಶಿವಮೊಗ್ಗ | ರೌಡಿಸಂ, ಗಾಂಜಾ ದಂಧೆ ಸೇರಿ ಹಲವು ಪ್ರಕರಣಗಳ ಆರೋಪಿಗೆ ಗೂಂಡಾ ಕಾಯ್ದೆ ಶಾಕ್

ಕೊಲೆ ಪ್ರಯತ್ನ, ಸುಲಿಗೆ, ದೊಂಬಿ, ಜೀವ ಬೆದರಿಕೆ, ಗಾಂಜಾ ಮಾರಾಟ ಹಾಗೂ...