ಉಡುಪಿ | ಅಪರಾಧಿಗಳಿಗೆ ಜಾಮೀನು ನೀಡಿರುವುದು ಆಘಾತಕಾರಿ: ಸಾಲಿಡಾರಿಟಿ ಯೂತ್ ಮೂವ್ಮೆಂಟ್

Date:

2002ರ ಗುಜರಾತ್ ನರಮೇಧದ ಸಂದರ್ಭದಲ್ಲಿ ಗರ್ಭಿಣಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಅವರ ಮೂರು ವರ್ಷದ ಮಗು ಸೇರಿದಂತೆ ಕುಟುಂಬದ 14 ಮಂದಿಯನ್ನು ಹತ್ಯೆಗೈದ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ ಶಿಕ್ಷೆ ಅಮಾನತುಗೊಳಿಸಿರುವುದಕ್ಕೆ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ತೀವ್ರ ಕಳವಳ ವ್ಯಕ್ತಪಡಿಸಿದೆ.

- Advertisement -

ಈ ಹಿಂದೆ ಗುಜರಾತ್ ಸರ್ಕಾರವು ಪ್ರಕರಣದ 11 ಅಪರಾಧಿಗಳನ್ನು ಅವಧಿಪೂರ್ವ ಬಿಡುಗಡೆಗೊಳಿಸಿದಾಗ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ 2024ರಲ್ಲಿ ಸುಪ್ರೀಂ ಕೋರ್ಟ್ ಆ ಬಿಡುಗಡೆ ಆದೇಶವನ್ನು ರದ್ದುಗೊಳಿಸಿ, ಅಪರಾಧಿಗಳು ಮತ್ತೆ ಜೈಲು ಸೇರಲು ಆದೇಶಿಸಿತ್ತು. ಇದೀಗ ಇಬ್ಬರು ಅಪರಾಧಿಗಳಿಗೆ ಜಾಮೀನು ನೀಡಿರುವುದು ಸಂತ್ರಸ್ತೆ ಬಿಲ್ಕಿಸ್ ಬಾನು ಹಾಗೂ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿರುವ ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಸಂಘಟನೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ನೀಡಿರುವ ಜಾಮೀನನ್ನು ತಕ್ಷಣ ರದ್ದುಗೊಳಿಸಬೇಕು. ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಬಾರದು. ಬಿಲ್ಕಿಸ್ ಬಾನು ಮತ್ತು ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ಹಾಗೂ ನ್ಯಾಯ ಒದಗಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಕಾನೂನಿನ ಆಡಳಿತ ಮತ್ತು ಮಹಿಳೆಯರ ಸುರಕ್ಷತೆಯನ್ನು ಎತ್ತಿಹಿಡಿಯಲು ಇಂತಹ ಘೋರ ಅಪರಾಧಗಳಿಗೆ ಕಠಿಣ ಶಿಕ್ಷೆ ಖಚಿತಪಡಿಸುವುದು ಅತ್ಯಗತ್ಯ ಎಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಅಧ್ಯಕ್ಷ ಅಫ್ವಾನ್ ಬಿ. ಹೂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು...

ಚಿಕ್ಕಮಗಳೂರು | ಜಿಂಕೆ ಮಾಂಸ ಮಾರಾಟ ಇಬ್ಬರ ಬಂಧನ

ಪ್ರಾದೇಶಿಕ ವಲಯದ ಅಧಿಕಾರಿಗಳು ಮಾಗಡಿ ಹ್ಯಾಂಡ್ ಪೋಸ್ಟ್ ಸಮೀಪದ ರಾಜು ಅಲಿಯಾಸ್...

ಸುರತ್ಕಲ್ | ನಕಲಿ‌ ಬ್ರಾಂಡಿಂಗ್ ಹಾಗೂ ಲೇಬಲ್: ‘ಬೋಲಾಸ್’ ಸಂಸ್ಥೆಯ ಅಡುಗೆ ಎಣ್ಣೆ ವಶ

ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಬೋಲಾಸ್ ಆಗ್ರೋ ಪ್ರೈವೇಟ್...

ವಿಜಯಪುರ |ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲು ಡಾ. ಸಂಬಣ್ಣಿ ಕರೆ

ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಸೂಕ್ತ ಪ್ರೋತ್ಸಾಹ ಹಾಗೂ ಅವಕಾಶಗಳನ್ನು ಕಲ್ಪಿಸುವ ಮೂಲಕ...