ಉಡುಪಿ | ಕರಾವಳಿಯಲ್ಲಿ ಮತ್ತೆ ಶೂಟೌಟ್ ಸದ್ದು: ಉದ್ಯಮಿಗಳ ಹತ್ಯೆ ಹಿಂದೆ ಸುಪಾರಿ ಜಾಲ?

Date:

ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೇಳಿಬರುತ್ತಿರುವ ಗುಂಡಿನ ಸದ್ದು ಜನರಲ್ಲಿ ಆತಂಕ ಮೂಡಿಸಿದೆ. ಒಂದು ಕಡೆ ಹಗಲೇ ಗುಂಡಿಕ್ಕಿ ಹತ್ಯೆ, ಮತ್ತೊಂದೆಡೆ ರಾತ್ರಿ ವೇಳೆ ಗುಂಡಿನ ದಾಳಿ. ಹೀಗೆ ಅಲ್ಪ ಅವಧಿಯಲ್ಲೇ ನಡೆದ ಎರಡು ಶೂಟೌಟ್ ಪ್ರಕರಣಗಳು ಕರಾವಳಿಯ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಕಳೆದ ಜುಲೈ 31ರಂದು ಕುಂದಾಪುರದಲ್ಲಿ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಘಟನೆಗೆ ಹತ್ತು ದಿನವೂ ಕಳೆಯುವ ಮುನ್ನವೇ ಆಗಸ್ಟ್ 7ರಂದು ಕಾಪು ತಾಲೂಕಿನ ಮುದರಂಗಡಿಯಲ್ಲಿ ಕಾಂಗ್ರೆಸ್ ಮುಖಂಡ, ಉದ್ಯಮಿ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡೇವಿಡ್ ಡಿಸೋಜಾ (ಪ್ರಿನ್ಸ್) ಅವರನ್ನು ಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

- Advertisement -

ಎರಡೂ ಘಟನೆಗಳ ಹಿನ್ನೆಲೆ ಬೇರೆಬೇರೆಯಾಗಿದ್ದರೂ, ಎರಡೂ ಪ್ರಕರಣಗಳಲ್ಲಿ ಬಂದೂಕು ಬಳಕೆಯಾಗಿರುವುದು ಕರಾವಳಿಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳ ಬಳಕೆ ಮತ್ತು ಅಪರಾಧ ಜಾಲದ ಬಗ್ಗೆ ಆತಂಕ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ...

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ ಪಡೆದುಕೊಂಡಿದೆ. ಮಳೆಗಾಗಿ ಎದುರು ನೋಡುತ್ತಿರುವ ರೈತರಿಗೆ ಬಿಸಿಲು ಮತ್ತಷ್ಟು ಆತಂಕ ಮೂಡಿಸಿದ್ದು, ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ತಾಪಮಾನ...

‘SIR ಪ್ರಕ್ರಿಯೆ ಕುರಿತು ನಮಗೆ ಏನನ್ನೂ ತಿಳಿಸದೇ ತೀರ್ಮಾನ’:...

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಕುಂದಾಪುರದ ಶೂಟೌಟ್‌ನ ಆತಂಕ ಇನ್ನೂ ಮಾಸುವ ಮುನ್ನವೇ ಆಗಸ್ಟ್ 7ರಂದು ಕಾಪು ತಾಲೂಕಿನ ಮುದರಂಗಡಿಯಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ.

ಮುದರಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೆಂಟ್ ಕ್ಸೇವಿಯರ್ ಚರ್ಚ್ ಸಂಕೀರ್ಣದಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಹೆಸರಿನ ಉದ್ಯಮ ಕಚೇರಿ ಹೊಂದಿದ್ದ ಡೇವಿಡ್ ಡಿಸೋಜಾ ಅವರು ಕಚೇರಿಗೆ ಬಂದಿದ್ದರು. ನಂತರ ತಮ್ಮ ಥಾರ್ ವಾಹನದ ಚಾಲಕನ ಬದಿಯ ಬಾಗಿಲ ಬಳಿ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳ ಪೈಕಿ ಒಬ್ಬರು ಪಿಸ್ತೂಲ್‌ನಿಂದ ಡೇವಿಡ್ ಅವರ ತಲೆಗೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಡೇವಿಡ್ ಅವರನ್ನು ಸ್ಥಳೀಯರು ಉಡುಪಿಯ ಆದರ್ಶ ಆಸ್ಪತ್ರೆಗೆ ಕರೆದೊಯ್ದರಾದರೂ, ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 66/2026, ಬಿಎನ್‌ಎಸ್ ಕಲಂ 103, 3(5) ಹಾಗೂ ಆರ್ಮ್ಸ್ ಆಕ್ಟ್‌ನ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಾಗಿದೆ.

d957171d fe1c 4c8a 99f0 828bd3445530

ಮುದರಂಗಡಿ ಹತ್ಯೆಯ ಹಿಂದೆ ಸುಪಾರಿ ಹಿಂಟ್‌?

ಪೊಲೀಸರ ತನಿಖೆಯಲ್ಲಿ ಡೇವಿಡ್ ಡಿಸೋಜಾ ಅವರು ನಡೆಸುತ್ತಿದ್ದ ಕಾಮಗಾರಿಗೆ ಸಂಬಂಧಿಸಿದಂತೆ ಅನ್ಯ ರಾಜ್ಯದ ಕಂಪೆನಿಯೊಂದರೊಂದಿಗೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿತ್ತು ಎನ್ನುವ ಮಾಹಿತಿ ಹೊರಬಂದಿದೆ. ಈ ವೈಮನಸ್ಸಿನ ಹಿನ್ನೆಲೆಯಲ್ಲಿ ಡೇವಿಡ್ ಅವರನ್ನು ಹತ್ಯೆ ಮಾಡಲು ಸುಪಾರಿ ನೀಡಿರುವ ಸಾಧ್ಯತೆ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಆದರೆ ಹತ್ಯೆಯ ಹಿಂದೆ ನಿಖರವಾಗಿ ಯಾರು ಇದ್ದರು, ಸುಪಾರಿ ನೀಡಿದವರು ಯಾರು, ಹಣಕಾಸಿನ ನೆರವು ನೀಡಿದವರು ಯಾರು ಮತ್ತು ಆರೋಪಿಗಳಿಗೆ ಆಶ್ರಯ ನೀಡಿದವರು ಯಾರು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದ್ದ ಸಂದರ್ಭದಲ್ಲಿ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬಸ್‌ನಲ್ಲಿ ಭಟ್ಕಳ ಕಡೆಗೆ ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಬೈಂದೂರು ಸಮೀಪದ ಒತ್ತಿನಾಣೆ ಬಳಿ ಬಸ್‌ನ್ನು ತಡೆದು ಪೊಲೀಸರು ಪರಿಶೀಲನೆ ನಡೆಸಿದರು.

ಪೊಲೀಸರನ್ನು ಕಂಡ ಆರೋಪಿಗಳು ಬಸ್‌ನಿಂದ ಇಳಿದು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಬೆನ್ನಟ್ಟುತ್ತಿದ್ದ ಸಂದರ್ಭದಲ್ಲಿ ರಾಜು (ಸುಮಾರು 42 ವರ್ಷ, ಉತ್ತರ ಪ್ರದೇಶದ ನಿವಾಸಿ) ಕಾಪು ಪೊಲೀಸ್ ಠಾಣೆಯ ಪಿಎಸ್‌ಐ ತೇಜಸ್ವಿ ಅವರನ್ನು ದೂಡಿ ಹಾಕಿ, ಅವರ ಬಳಿಯಿದ್ದ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್‌ಐ ತೇಜಸ್ವಿ ಅವರು ರಾಜುವಿನ ಕಾಲಿಗೆ ಗುಂಡು ಹಾರಿಸಿದ್ದಾರೆ. ರಾಜು ಗಾಯಗೊಂಡು ಪೊಲೀಸರ ವಶಕ್ಕೆ ಸಿಕ್ಕಿದ್ದಾನೆ. ಆತನ ಬಳಿಯಿಂದ ಪಿಸ್ತೂಲ್‌ನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಘಟನೆಯಲ್ಲಿ ಪಿಎಸ್‌ಐ ತೇಜಸ್ವಿ ಅವರಿಗೂ ಗಾಯವಾಗಿದ್ದು, ಅವರು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡ ಆರೋಪಿ ರಾಜುವಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಮತ್ತಿಬ್ಬರು ಆರೋಪಿಗಳೂ ಪೊಲೀಸರ ವಶಕ್ಕೆ

ಮುದರಂಗಡಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ. ಅಜಯ್ ರಸ್ತೋಗಿ @ ಅನ್ಮೋಲ್ (23 ವರ್ಷ, ಉತ್ತರಾಖಂಡ) ಅವರನ್ನು ಕುಮಟಾ ಪೊಲೀಸರ ಸಹಕಾರದಿಂದ ಕುಮಟಾದಲ್ಲಿ ವಶಕ್ಕೆ ಪಡೆಯಲಾಗಿದೆ. ಜಿಯಾಹುಲ್ ವಜೂಲ್ ಶೇಖ್ @ ದೀಪಕ್ (38 ವರ್ಷ, ಬಿಹಾರ) ಅವರನ್ನು ಭಟ್ಕಳ ಪೊಲೀಸರ ಸಹಕಾರದಿಂದ ಭಟ್ಕಳದಲ್ಲಿ ವಶಕ್ಕೆ ಪಡೆಯಲಾಗಿದೆ.

2444ba42 9a3c 4c29 80bd f44269ddeb68

ಹತ್ಯೆಗೆ ಬಳಸಲಾಗಿದೆ ಎನ್ನಲಾದ ಮೋಟಾರ್ ಸೈಕಲ್‌ನ್ನು ಎರ್ಮಾಳ್‌ನಲ್ಲಿ ಬಿಟ್ಟು ಹೋಗಲಾಗಿದ್ದು, ಅದನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮೂಲಕ ಮುದರಂಗಡಿ ಹತ್ಯೆ ಪ್ರಕರಣದಲ್ಲಿ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎನ್ನಲಾದ ಮೂವರು ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ.

ಪೊಲೀಸ್ ಕಾರ್ಯಾಚರಣೆಯೂ ಸವಾಲು

ಮುದರಂಗಡಿ ಹತ್ಯೆ ಪ್ರಕರಣದ ಆರೋಪಿಗಳ ಬಂಧನ ಕಾರ್ಯಾಚರಣೆ ಸಾಮಾನ್ಯ ಬಂಧನವಲ್ಲ. ಆರೋಪಿಗಳನ್ನು ಬೆನ್ನಟ್ಟುವ ವೇಳೆ ಪೊಲೀಸರ ಮೇಲೆಯೇ ದಾಳಿ ನಡೆಸಿ, ಪಿಸ್ತೂಲ್‌ನಿಂದ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿರುವುದು ಪ್ರಕರಣದ ಗಂಭೀರತೆಯನ್ನು ತೋರಿಸುತ್ತದೆ.

ಪೊಲೀಸ್ ತಂಡದ ಮೇಲೆ ನಡೆದ ಈ ದಾಳಿಯಲ್ಲಿ ಪಿಎಸ್‌ಐ ತೇಜಸ್ವಿ ಗಾಯಗೊಂಡಿದ್ದಾರೆ. ಆರೋಪಿಯ ಕಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು, ಆತನ ಬಳಿಯಿದ್ದ ಪಿಸ್ತೂಲ್‌ನ್ನೂ ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಮೇಲೆ ಗುಂಡು ಹಾರಿಸಿದ ಆರೋಪದಡಿ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣವೂ ದಾಖಲಾಗಿದೆ.

f5281131 9b52 4e5b 8851 de0f1a43d044

ಡೇವಿಡ್ ಯಾರು? ಗುಂಡಿಗೆ ಬಲಿಯಾದ ವ್ಯಕ್ತಿಯ ಹಿಂದೆ ಒಂದು ಸಮಾಜಮುಖಿ ಬದುಕು

ಡೇವಿಡ್ ಡಿಸೋಜಾ ಅವರ ಹತ್ಯೆ ಕೇವಲ ಒಬ್ಬ ಉದ್ಯಮಿಯ ಸಾವಲ್ಲ. ಮುದರಂಗಡಿ, ಶಿರ್ವ, ಪಿಲಾರ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಮಾಜಮುಖಿ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದ್ದ ಡೇವಿಡ್ ಅವರು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು.

ಮುದರಂಗಡಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಅವರು ಬಳಿಕ ಪಂಚಾಯಿತಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿ ಗುರುತಿಸಿಕೊಂಡಿದ್ದ ಅವರು ಸರ್ವ ಸಮಾಜದ ಜನರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದರು. ಜನರ ಕಷ್ಟ-ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದ ಅವರು ವಿವಿಧ ಚರ್ಚ್ ಸಂಘಟನೆಗಳು ಹಾಗೂ ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿಯೂ ತೊಡಗಿಸಿಕೊಂಡಿದ್ದರು.

c7f00df4 6ccf 4a0b 96af e96cf18adf01 edited

ಕರ್ನಾಟಕ ಕ್ರೈಸ್ತ ಸಂಘಗಳ ಅಂತರಾಷ್ಟ್ರೀಯ ಒಕ್ಕೂಟ (ISCA) ಜತೆಗೂ ನಿಕಟ ಸಂಪರ್ಕ ಹೊಂದಿದ್ದ ಅವರು ಹಲವು ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸಿದ್ದರು ಎಂದು ಲೂಯಿಸ್ ಲೋಬೋ ಸ್ಮರಿಸಿದ್ದಾರೆ.

ಡೇವಿಡ್ ಅವರ ನಿಧನಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಕಾಪುವಿನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಮುಖಂಡ, ಉದ್ಯಮಿ ಹಾಗೂ ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಅವರ ಹತ್ಯೆ ತೀವ್ರ ಆಘಾತ ಮತ್ತು ಆತಂಕವನ್ನುಂಟುಮಾಡಿದೆ. ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ” ಎಂದು ಪ್ರಾರ್ಥಿಸಿದ್ದಾರೆ.

ಉಡುಪಿಯಲ್ಲಿ ಕಾನೂನಿನ ಭಯ ಕಡಿಮೆಯಾಗುತ್ತಿದೆಯೇ?

ಇತ್ತೀಚಿನ ಘಟನೆಗಳು ಜನರಲ್ಲಿ ಹುಟ್ಟುಹಾಕುತ್ತಿರುವ ದೊಡ್ಡ ಪ್ರಶ್ನೆ ಇದೇ. ಉಡುಪಿ ಜಿಲ್ಲೆ ಸಾಮಾನ್ಯವಾಗಿ ಶಾಂತಿಪ್ರಿಯ ಜಿಲ್ಲೆಯೆಂಬ ಹೆಗ್ಗಳಿಕೆ ಹೊಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಗಂಭೀರ ಅಪರಾಧಗಳು, ಶಸ್ತ್ರಾಸ್ತ್ರಗಳ ಬಳಕೆ ಹಾಗೂ ಗುಂಡಿನ ದಾಳಿಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿವೆ.

ಒಂದು ಕಡೆ ಕುಂದಾಪುರದಲ್ಲಿ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಗುಂಡಿಗೆ ಬಲಿಯಾದರು. ಇನ್ನೊಂದು ಕಡೆ ಮುದರಂಗಡಿಯಲ್ಲಿ ಜನನಿಬಿಡ ಪ್ರದೇಶದಲ್ಲೇ ಡೇವಿಡ್ ಡಿಸೋಜಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

a1136637 8422 4487 9689 4dad31aac45f

ಇದೀಗ ಪ್ರಶ್ನೆ ಕೇವಲ ಈ ಎರಡು ಪ್ರಕರಣಗಳ ತನಿಖೆಗೆ ಸೀಮಿತವಾಗಿಲ್ಲ.

  1. ಕರಾವಳಿಗೆ ಬಂದೂಕುಗಳು ಎಲ್ಲಿಂದ ಬರುತ್ತಿವೆ?
  2. ಅಕ್ರಮ ಶಸ್ತ್ರಾಸ್ತ್ರಗಳ ಜಾಲದ ಹಿಂದೆ ಯಾರಿದ್ದಾರೆ?
  3. ಹಣಕಾಸಿನ ವ್ಯವಹಾರಗಳು ಕೊಲೆಗೆ ತಿರುಗುವ ಮಟ್ಟಿಗೆ ಅಪರಾಧ ಜಾಲ ಬೆಳೆದಿದೆಯೇ?
  4. ಸುಪಾರಿ ಹತ್ಯೆಗಳ ಹಿಂದೆ ಇರುವ ಮೂಲ ವ್ಯಕ್ತಿಗಳು ಯಾರು?

ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಾದ ಜವಾಬ್ದಾರಿ ತನಿಖಾ ಸಂಸ್ಥೆಗಳ ಮೇಲಿದೆ.

ಪೊಲೀಸ್ ಇಲಾಖೆ ಇನ್ನಷ್ಟು ಕಟ್ಟುನಿಟ್ಟಾಗಬೇಕೆಂದು ಎಸ್‌ಡಿಪಿಐ ಆಗ್ರಹ

ಮುದರಂಗಡಿ ಹತ್ಯೆಯನ್ನು ಖಂಡಿಸಿರುವ ಎಸ್‌ಡಿಪಿಐ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಸಾಧಿಕ್ ಕೆ.ಪಿ., ಉಡುಪಿ ಜಿಲ್ಲೆಯಲ್ಲಿ ಇಂತಹ ಗುಂಡಿನ ದಾಳಿ ಮತ್ತು ಹತ್ಯೆ ಪ್ರಕರಣಗಳು ಪದೇಪದೇ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದ್ದಾರೆ.

ಕಳೆದ ವಾರ ಕುಂದಾಪುರದಲ್ಲಿ ನಡೆದ ಶೂಟೌಟ್‌ನ ಬೆನ್ನಲ್ಲೇ ಮುದರಂಗಡಿಯಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿರುವುದು ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದ್ದಾರೆ. ಜಿಲ್ಲೆಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು, ಅಕ್ರಮ ಶಸ್ತ್ರಾಸ್ತ್ರಗಳ ಬಳಕೆಯನ್ನು ತಡೆಯಬೇಕು ಹಾಗೂ ಅಪರಾಧ ಹಿನ್ನೆಲೆಯುಳ್ಳವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕರಾವಳಿಯ ಶಾಂತಿ ಸುವ್ಯವಸ್ಥೆಯೇ ದೊಡ್ಡ ಸವಾಲು

ಕುಂದಾಪುರದಿಂದ ಮುದರಂಗಡಿಯವರೆಗೆ ಕೇಳಿಬಂದ ಗುಂಡಿನ ಸದ್ದು ಎರಡು ಕುಟುಂಬಗಳನ್ನು ಶಾಶ್ವತ ದುಃಖಕ್ಕೆ ತಳ್ಳಿದೆ. ಒಬ್ಬರು ಉದ್ಯಮಿ. ಮತ್ತೊಬ್ಬರು ಉದ್ಯಮಿ, ರಾಜಕೀಯ ಮುಖಂಡ ಹಾಗೂ ಸಮಾಜಮುಖಿ ವ್ಯಕ್ತಿ.

ಅವರ ಕುಟುಂಬಗಳು ಈಗ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ನೋವಿನಲ್ಲಿ ಮುಳುಗಿವೆ. ಆದರೆ ಈ ಎರಡು ಪ್ರಕರಣಗಳು ಕೇವಲ ಎರಡು ಕುಟುಂಬಗಳ ದುರಂತವಾಗಿ ಉಳಿಯಬಾರದು. ಕರಾವಳಿಯಲ್ಲಿ ಬಂದೂಕಿನ ಸಂಸ್ಕೃತಿ ಬೇರುಬಿಡುವ ಮುನ್ನವೇ ಅದನ್ನು ತಡೆಯಬೇಕಿದೆ.

ಹಣಕಾಸಿನ ವ್ಯವಹಾರ, ವೈಯಕ್ತಿಕ ದ್ವೇಷ, ವ್ಯವಹಾರಿಕ ವೈಮನಸ್ಸು ಅಥವಾ ರಾಜಕೀಯ-ಸಾಮಾಜಿಕ ಭಿನ್ನಾಭಿಪ್ರಾಯ ಯಾವುದೇ ಕಾರಣಕ್ಕೂ ಜೀವ ತೆಗೆಯುವ ವಿಷಮ ಪರಿಸ್ಥಿತಿಗೆ ತಲುಪಬಾರದು. ಕಾನೂನು ಕೈಗೆತ್ತಿಕೊಳ್ಳುವ ಪ್ರವೃತ್ತಿಗೆ ಕಡಿವಾಣ ಹಾಕುವುದು, ಅಕ್ರಮ ಶಸ್ತ್ರಾಸ್ತ್ರಗಳ ಸಾಗಾಟ ತಡೆಯುವುದು ಮತ್ತು ಅಪರಾಧ ಜಾಲದ ಮೂಲವನ್ನೇ ಪತ್ತೆಹಚ್ಚುವುದು ಅತ್ಯಂತ ಅಗತ್ಯ.

925e1ddd 4d81 4538 993e c4feafda92c0

ಜನರು ರಾತ್ರಿ-ಹಗಲು ಭಯವಿಲ್ಲದೆ ಓಡಾಡುವ, ತಮ್ಮ ವ್ಯವಹಾರ ನಡೆಸುವ, ರಾಜಕೀಯ-ಸಾಮಾಜಿಕ ಬದುಕಿನಲ್ಲಿ ಭಾಗವಹಿಸುವ ವಾತಾವರಣ ಉಳಿಯಬೇಕಾದರೆ ಕಾನೂನಿನ ಭಯಕ್ಕಿಂತಲೂ ಕಾನೂನಿನ ಮೇಲಿನ ನಂಬಿಕೆ ಬಲವಾಗಬೇಕು.

ಮುದರಂಗಡಿ ಹತ್ಯೆಯ ಎಲ್ಲಾ ಆರೋಪಿಗಳನ್ನು ಕಾನೂನಿನ ಮುಂದೆ ತಂದು, ಇದರ ಹಿಂದೆ ಇರುವ ಸಂಪೂರ್ಣ ಜಾಲವನ್ನು ಬಯಲಿಗೆಳೆಯುವುದರ ಜೊತೆಗೆ ಕುಂದಾಪುರ ಶೂಟೌಟ್ ಸೇರಿದಂತೆ ಇತ್ತೀಚಿನ ಗಂಭೀರ ಅಪರಾಧ ಪ್ರಕರಣಗಳ ಮೂಲವನ್ನೂ ಪೊಲೀಸರು ಪತ್ತೆಹಚ್ಚಬೇಕಿದೆ.

ಗುಂಡಿನ ಸದ್ದು ಮತ್ತೆ ಕೇಳಿಸದಂತೆ ಕರಾವಳಿಗೆ ಸುರಕ್ಷತೆಯ ಭರವಸೆ ನೀಡುವುದು ಈಗ ಪೊಲೀಸ್ ಇಲಾಖೆ ಮತ್ತು ಆಡಳಿತದ ಮುಂದಿರುವ ದೊಡ್ಡ ಹೊಣೆಗಾರಿಕೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇನ್ಸ್‌ಪೆಕ್ಟರ್‌ಗೆ ಜಾತಿ ನಿಂದನೆ: ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ವಿರುದ್ಧ ಜಾತಿ ನಿಂದನೆ ಮಾಡಿದ...

ಸೌಜನ್ಯ ಪ್ರಕರಣ: ಮರುತನಿಖೆ ಆದೇಶಕ್ಕೆ ‘ಕೊಂದವರು ಯಾರು?’ ಆಂದೋಲನ ಸ್ವಾಗತ, ದಕ್ಷ ಎಸ್‌ಐಟಿ ರಚನೆಗೆ ಆಗ್ರಹ

ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ ಮತ್ತು...

ಆಲಮಟ್ಟಿ 3ನೇ ಹಂತದ ಯೋಜನೆ ಜಾರಿಗೆ ಹೋರಾಟ ತೀವ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256...