ಉಡುಪಿ | ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ, ‘ಯುವ ರಂಗ ಸಂಗಮ’ ಪೋಸ್ಟರ್ ಬಿಡುಗಡೆ

Date:

ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಸಂಭ್ರಮದ ಸರಣಿ ಕಾರ್ಯಕ್ರಮಗಳ ಪ್ರಯುಕ್ತ ಶುಕ್ರವಾರ  ಐವೈಸಿ ಆಡಿಟೋರಿಯಂನಲ್ಲಿ ಮೈಸೂರಿನ ‘ನಿರ್ದಿಗಂತ’ ಅಭಿನಯಿಸಿದ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕವು ಯಶಸ್ವಿಯಾಗಿ ಪ್ರದರ್ಶನಗೊಂಡಿತು.

- Advertisement -

ಇದೇ ಸಂದರ್ಭದಲ್ಲಿ ಸಂಸ್ಥೆಯ ರಜತ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ‘ಯುವ ರಂಗ ಸಂಗಮ’ – ರಾಜ್ಯ ಮಟ್ಟದ ಕಾಲೇಜು ವಿದ್ಯಾರ್ಥಿಗಳ ಕನ್ನಡ ನಾಟಕ ಮತ್ತು ಜಾಥಾ ಸ್ಪರ್ಧೆಯ ಅಧಿಕೃತ ಪೋಸ್ಟರ್  ಬಿಡುಗಡೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...
WhatsApp Image 2026 10 25 at 8.48.42 PM 1

ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕಿ ಪೂರ್ಣಿಮಾ, ‘ರಂಗಭೂಮಿ’ಯ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಜತ ಸಂಭ್ರಮ ಸಮಿತಿಯ ಅಧ್ಯಕ್ಷ ಹರಿಪ್ರಸಾದ್‌ ರೈ ಮಾತನಾಡಿ, ‘ರಂಗಭೂಮಿ ಎಂಬುದು ಕೇವಲ ಮನರಂಜನೆಯ ಮಾಧ್ಯಮವಲ್ಲ, ಅದು ಜೀವನದ ಮೌಲ್ಯಗಳನ್ನು ಕಲಿಸುವ ಶಾಲೆ. ನಾಟಕಗಳು ಮತ್ತು ರಂಗಭೂಮಿಯ ವಿಭಿನ್ನ ಪ್ರಯೋಗಗಳನ್ನು ನಾವು ಪ್ರದರ್ಶನಕ್ಕಷ್ಟೇ ಸೀಮಿತಗೊಳಿಸದೆ, ಅವುಗಳು ನೀಡುವ ಸಮಾಜಮುಖಿ ಸಂದೇಶಗಳನ್ನು ತಮ್ಮ ವೈಯಕ್ತಿಕ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.

ಕಲೆ ಮತ್ತು ಸಂಸ್ಕೃತಿಯನ್ನು ಪೋಷಿಸುತ್ತಾ ಬರುತ್ತಿರುವ ನಮ್ಮ ‘ಸುಮನಸಾ’ ಸಂಘಟನೆಯು ರಜತ ಮಹೋತ್ಸವದ ಪ್ರಯುಕ್ತ ಅನೇಕ ಜನಪರ, ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡುತ್ತಿದೆ ಎಂದು ಮಾಹಿತಿ ನೀಡಿದರು.

ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಪ್ರದೀಪ್‌ಚಂದ್ರ ಕುತ್ಪಾಡಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

 ಸೌಭಾಗ್ಯ ತಂತ್ರಿ ಪ್ರಾರ್ಥನೆ ಸಲ್ಲಿಸಿದರು. ಸುಮನಸಾ ಸಂಘಟನೆಯ ಅಧ್ಯಕ್ಷ ಪ್ರಕಾಶ್‌ ಜಿ. ಕೊಡವೂರು ಸ್ವಾಗತಿಸಿದರು. ವಿದ್ದು ಉಚ್ಚಿಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಚಂದ್ರಕಾಂತ್‌ ಕುಂದರ್‌ ವಂದಿಸಿದರು. ಯೋಗೀಶ್‌ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಬೋಗಸ್ ಮತದಾನ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ

"​ಇತ್ತೀಚೆಗೆ ಜರುಗಿದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಾವೇರಿ ನಗರದ ಮತಗಟ್ಟೆ...

ಬಾಗಲಕೋಟೆ | ಎರಡು ಎಕರೆ ಜಮೀನಿಗಾಗಿ ಅತ್ತಿಗೆ ಮೇಲೆ ಬುಲೆರೊ ಹಾಯಿಸಿ ಕೊಲೆ ಯತ್ನ!

ಬೆಟ್ಟದಷ್ಟು ಆಸ್ತಿ ಇದ್ದರೂ ಎರಡು ಎಕರೆ ಜಮೀನಿನ ವಿವಾದಕ್ಕೆ ರಕ್ತಸಂಬಂಧವನ್ನೇ ಮರೆತು...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...